Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ-...

ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ- ಮಾರಾಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Dec 2019 12:39 PM IST
share
ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ- ಮಾರಾಟಕ್ಕೆ ಚಾಲನೆ

ಮಂಗಳೂರು, ಡಿ.3: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ (ಕೆ.ಎಸ್.ಐ.ಸಿ)ದ ವತಿಯಿಂದ ನಗರದ ಲಾಲ್‌ಬಾಗ್ ಸಮೀಪದ ಮಂಗಳೂರು ಪ್ರಾದೇಶಿಕ ಹಿಂದಿ ಪ್ರಚಾರ ಸಮಿತಿ ಕಟ್ಟಡದಲ್ಲಿ ಮೈಸೂರು ಸಿಲ್ಕ್‌ಸೀರೆಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಇಂದು ಚಾಲನೆ ನೀಡಲಾಯಿತು.

ಇಂದಿನಿಂದ ಡಿ. 8ರವರೆಗೆ ನಡೆಯಲಿರುವ ಈ ಮಾರಾಟ ಹಾಗೂ ಪ್ರದರ್ಶನವನ್ನು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಉದ್ಘಾಟಿಸಿದರು.

ಸಾಂಪ್ರದಾಯಿಕ ಮೈಸೂರು ಸಿಲ್ಕ್ ಸೀರೆಗಳಲ್ಲದೆ, ನಾಜೂಕಾದ ವಿನ್ಯಾಸದ ಕ್ರೇಪ್ ಡಿ ಚೈನ್ , ಜಾರ್ಜೆಟ್ ಮತ್ತು ಸಾದಾ ಮುದ್ರಿತ ಸೀರೆಗಳು ಪ್ರದರ್ಶದಲ್ಲಿವೆ. ಇದಲ್ಲದೆ ವಿವಾಹ ಸಂಗ್ರಹ ಸೀರೆಗಳನ್ನು ಪರಿಚಯಿಸಲಾಗಿದ್ದು, ಉತ್ಪನ್ನಗಳ ಮೇಲೆ ಶೇ. 25ರವರೆಗೆ ರಿಯಾಯಿತಿಯನ್ನು ಕೂಡಾ ಪ್ರದರ್ಶನದಲ್ಲಿ ಪಡೆಯಬಹುದಾಗಿದೆ.

ಪ್ರದರ್ಶನದಲ್ಲಿ ಕನಿಷ್ಠ ಆರು ಸಾವಿರ ರೂ. ಮೌಲ್ಯದಿಂದ ಹಿಡಿದು 1.30 ಲಕ್ಷ ರೂ.ವರೆಗಿನ ಮೌಲ್ಯದ ಸೀರೆಗಳಿವೆ. ಮೈಸೂರಿನಲ್ಲಿ ಕೆ.ಎಸ್.ಐ.ಸಿಯ ಮತ್ತೊಂದು ಘಟಕವನ್ನು ಆರಂಭಿಸಲಾಗುತ್ತಿದ್ದು, ಇಲ್ಲಿ ವಾರ್ಷಿಕ 30,000 ಸೀರೆಗಳನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ. ಈಗಿರುವ ಘಟಕದಲ್ಲಿ 1 ಲಕ್ಷ ಸೀರೆಗಳನ್ನು ಉತ್ಪಾದಿಸಲಾಗುತ್ತಿದೆ. ವಾರ್ಷಿಕ 200 ಕೋಟಿ ರೂ.ಗಳ ವ್ಯವಹಾರವನ್ನು ಸಂಸ್ಥೆ ಹೊಂದಿದ್ದು, ವರಮಹಾಲಕ್ಷ್ಮಿ, ತಾಯಂದಿರ ದಿನಾಚರಣೆ, ಮಹಿಳೆಯರ ದಿನಾಚರಣೆಯ ಮೊದಲಾದ ವಿಶೇಷ ದಿನಗಳಂದು ತಲಾ 1500ಕ್ಕೂ ಅಧಿಕ ಸೀರೆಗಳ ಮಾರಾಟವಾಗುತ್ತದೆ. ಉಳಿದಂತೆ ದಿನವೊಂದಕ್ಕೆ ಸರಾಸರಿ ಕನಿಷ್ಠ 250 ಸೀರೆಗಳು ಮಾರಾಟವಾಗುತ್ತವೆ. ಕಳೆದ ವರ್ಷ ಮಂಗಳೂರಿನಲ್ಲಿ ನಡೆದ ಪ್ರದರ್ಶನದಲ್ಲಿ 200 ಸೀರೆಗಳು ಮಾರಾಟವಾಗಿತ್ತು ಎಂದು ಸಂಸ್ಥೆಯ ಮಾರುಕಟ್ಟೆ ವಿಭಾಗದ ಜನರಲ್ ಮ್ಯಾನೇಜರ್ ಎಸ್. ಬಾನುಪ್ರಕಾಶ್ ಮಾಹಿತಿ ನೀಡಿದರು.

ಮೈಸೂರು ಸಿಲ್ಕ್‌ಗೆ ಉಪಯೋಗಿಸುವ ರೇಷ್ಮೆ ಪರಿಶುದ್ಧವಾಗಿದ್ದು, ಜರಿಯು ಪರಿಶುದ್ಧ ಚಿನ್ನದಿಂದ ಕೂಡಿರುತ್ತದೆ. ಶೇ. 0.65 ಚಿನ್ನ ಹಾಗೂ ಶೇ. 65ರಷ್ಟು ಬೆಳ್ಳಿಯನ್ನು ಮೈಸೂರು ಸಿಲ್ಕ್ ಸೀರೆಗಳು ಒಳಗೊಂಡಿರುತ್ತದೆ. ಸಂಸ್ಥೆಯು ರೇಷ್ಮೆ ಗೂಡಿನಿಂದ ಹಿಡಿದು ನೂಲು ತೆಗೆಯುವುದು, ವಿವಿಧ ಮಾದರಿಯ ರೇಷ್ಮೆ ಸೀರೆಗಳನ್ನು ನೇಯ್ಗೆ ಮಾಡುವವರೆಗೂ ಒಂದೇ ಸೂರಿನಡಿ ಎಲ್ಲಾ ಉತ್ಪಾದನಾ ಹಂತಗಳನ್ನು ನಿರ್ವಹಿಸುವ ರಾಷ್ಟ್ರದ ಏಕೈಕ ಸರಕಾರಿ ಸಂಸ್ಥೆಯಾಗಿದೆ ಎಂದು ಅವರು ಹೇಳಿದರು.

ಕಳೆದ ಎರಡು ಆರ್ಥಿಕ ವರ್ಷಗಳಲ್ಲಿ ಕರ್ನಾಟಕ ಸಾರ್ವಜನಿಕ ಉದ್ದಿಮೆಗಳಿಗೆ ಪ್ರಧಾನ ಮಾಡುವ ಮುಖ್ಯಮಂತ್ರಿಗಳ ವಾರ್ಷಿಕ ರತ್ನ ಪ್ರಶಸ್ತಿಯನ್ನು ಕೆಎಸ್‌ಐಸಿ ನಿಗಮ ಪಡೆದಿದೆ ಎಂದು ಬಾನುಪ್ರಕಾಶ್ ತಿಳಿಸಿದರು.

ಪ್ರದರ್ಶನವು ಡಿ. 8ರವರೆಗೆ ಪ್ರತಿದಿನ ಬೆಳಗ್ಗೆ 10ರಿಂದ ರಾತ್ರಿ 8 ಗಂಟೆಯವರೆಗೆ ತೆರೆದಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X