Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಮಾನಸಿಕ ಅಸ್ವಸ್ಥ' ಘೋಷಣೆ ಹಿಂದೆ...

'ಮಾನಸಿಕ ಅಸ್ವಸ್ಥ' ಘೋಷಣೆ ಹಿಂದೆ ಪೂರ್ವಯೋಜಿತ ತಂತ್ರ: ಎಸ್‍ಡಿಪಿಐ ಮುಖಂಡ ಅಬ್ದುಲ್ ಮಜೀದ್

ಗೃಹ ಸಚಿವ ಬೊಮ್ಮಾಯಿ ರಾಜೀನಾಮೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Jan 2020 10:46 PM IST
share
ಮಾನಸಿಕ ಅಸ್ವಸ್ಥ ಘೋಷಣೆ ಹಿಂದೆ ಪೂರ್ವಯೋಜಿತ ತಂತ್ರ: ಎಸ್‍ಡಿಪಿಐ ಮುಖಂಡ ಅಬ್ದುಲ್ ಮಜೀದ್

ಮೈಸೂರು,ಜ.24: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಆರೋಪಿ ಆದಿತ್ಯರಾವ್ ಎಂಬಾತನ ಬಗ್ಗೆ ಕರ್ನಾಟಕ ರಾಜ್ಯ ಗೃಹ ಸಚಿವರು ಹಠಾತ್ತನೇ ಆತ ಮಾನಸಿಕ ಅಸ್ವಸ್ಥನೆಂದು ಘೋಷಿಸುವ ಹಿಂದೆ ಪೂರ್ವಯೋಜಿತ ತಂತ್ರಗಳು ಅಡಗಿವೆ. ಹಾಗಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಎಸ್‍ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಬ್ ಪ್ರಕರಣ ಸುದ್ದಿಯಾದ ತಕ್ಷಣ ಟಿವಿ ಮಾಧ್ಯಮಗಳು 'ಮುಸ್ಲಿಮ್ ಉಗ್ರ, ಇಸ್ಲಾಂ ಉಗ್ರ' ಇತ್ಯಾದಿ ಹಾಗೂ ಮಂದಿರಗಳಿಗೂ ಬಾಂಬ್ ಇಟ್ಟು ಸ್ಫೋಟಿಸುವ ಸಂಚು ಹಾಗೂ ಜಾಲ ಕಾರ್ಯವೆಸಗುತ್ತಿದೆ' ಎಂಬಿತ್ಯಾದಿ ವದಂತಿಗಳನ್ನು ಪ್ರಸಾರ ಮಾಡಿವೆ. ಕೆಲವು ಪತ್ರಿಕೆಗಳು ಸಹ ಇಂತಹ ಆಕ್ಷೇಪಕಾರೀ ಹಾಗೂ ಕೋಮುದ್ವೇಷ ಪ್ರಚೋದನೆಯ ವಿಷಯಗಳನ್ನು ಪ್ರಸಾರ ಮಾಡಿವೆ. ಇದು ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯ ಎಂದು ಹೇಳಿದರು.

ಬಾಂಬ್ ಆರೋಪಿ ಆದಿತ್ಯರಾವ್ ಎಂದು ತಿಳಿದಾಕ್ಷಣ ಟಿವಿ ವಾಹಿನಿಗಳು, ಪತ್ರಿಕೆಗಳು ರಾಗ ಬದಲಿಸಿದ್ದು ಅದು ಪಟಾಕಿಯೆಂದೂ, ಆತನು ಮಾನಸಿಕ ಅಸ್ವಸ್ಥನೆಂದೂ ವರ್ಣಿಸಿವೆ. ಆದಿತ್ಯರಾವ್‍ನಿಗಾಗಿ ಉಡುಪಿ, ಮಂಗಳೂರು, ಮಣಿಪಾಲ ಮುಂತಾದೆಡೆಗಳಲ್ಲಿ ಜಾಲಾಡಿದ ಪೊಲೀಸರಿಗೆ ಆತನನ್ನು ಪತ್ತೆ ಮಾಡಲು ಸಾಧ್ಯವಾಗದಿರುವುದು ಹಾಗೂ ಆದಿತ್ಯ ರಾವ್ ರಾತ್ರಿ ಪ್ರಯಾಣಿಸಿ ಬೆಂಗಳೂರು ತೆರಳಿ ಪೊಲೀಸರ ಮುಂದೆ ಶರಣಾಗಿರುವುದು ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿರುವುದು ವ್ಯಕ್ತವಾಗುತ್ತಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸುವ ಕೃತ್ಯದ ಹಿಂದೆ ಯಾವ ಭಯೋತ್ಪಾದಕ ಶಕ್ತಿಗಳು ಇವೆ ಹಾಗೂ ಇದರ ಸೂತ್ರಧಾರರು ಯಾರು ಮತ್ತು ಕೆಲವು ಮಾಧ್ಯಮಗಳ ಭಯೋತ್ಪಾದನಾ ಮನೋಭಾವವನ್ನು ಕಠಿಣ ತನಿಖೆಗೊಳಪಡಿಸಬೇಕು ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬೇಜವಾಬ್ದಾರಿಯುತ ಹೇಳಿಕೆಯನ್ನು ನೀಡಿ ಪ್ರಕರಣದ ದಿಕ್ಕು ತಪ್ಪಿಸಲು ಯತ್ನಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಗೃಹ ಸಚಿವ ಸ್ಥಾನಕ್ಕೆ ಅನರ್ಹರಾಗಿದ್ದು ಕೂಡಲೇ ರಾಜೀನಾಮೆ ನೀಡಬೇಕೆಂದು ಅಬ್ದುಲ್ ಮಜೀದ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್, ಜಿಲ್ಲಾ ಮುಖಂಡರಾದ ಮನ್ಸೂರ್ ಮತ್ತು ಝಕಾ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X