Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಕ್ಕೆ ಸಿಗಲಿದೆ 24/7 ಪ್ರಾಥಮಿಕ...

ರಾಜ್ಯಕ್ಕೆ ಸಿಗಲಿದೆ 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳು: ಸಚಿವ ಡಾ.ಕೆ. ಸುಧಾಕರ್

ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪಿಎಚ್‍ಸಿ ನಿರ್ಮಾಣಕ್ಕೆ ಕ್ರಮ

ವಾರ್ತಾಭಾರತಿವಾರ್ತಾಭಾರತಿ12 Nov 2020 8:11 PM IST
share
ರಾಜ್ಯಕ್ಕೆ ಸಿಗಲಿದೆ 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳು: ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು, ನ.12: ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಮಾಜಿ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಹಾಗೂ ವೈದ್ಯ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯದಲ್ಲಿ 2,300 ಕ್ಕೂ ಅಧಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. 30 ಸಾವಿರ ಜನರಿಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕೆಂಬ ನಿಯಮವಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಈ ನಿಯಮದಂತೆ ಆಸ್ಪತ್ರೆ ಇಲ್ಲ. ವಿಶ್ವಬ್ಯಾಂಕ್ ಸಹಕಾರದಿಂದ ಮೂರು ವರ್ಷಗಳಲ್ಲಿ ಪಿಎಚ್ ಸಿಗಳನ್ನು ನಿರ್ಮಿಸಲಾಗುವುದು. ಜೊತೆಗೆ ಈಗ ಇರುವ ಪಿಎಚ್ ಸಿಗಳನ್ನು 24/7 ಸೇವೆ ನೀಡುವ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಆರಂಭವಾಗಿ ದೊಡ್ಡ ಆಸ್ಪತ್ರೆಗಳವರೆಗೂ ಗುಣಮಟ್ಟದಲ್ಲಿ ರಾಜಿಯಾಗದಂತೆ ಕ್ರಮ ಕೈಗೊಳ್ಳಬೇಕಿದೆ. ಇದಕ್ಕಾಗಿ ಸಮಗ್ರವಾದ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ. ಕೆಲ ವೈದ್ಯರು ಗ್ರಾಮೀಣ ಪ್ರದೇಶಗಳಿಗೆ ಹೋಗಿ ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಾರೆ. ಆರೋಗ್ಯ ಸಿಬ್ಬಂದಿ ಸೇವೆ ಸಲ್ಲಿಸುವ ಪ್ರದೇಶದ ಆಧಾರದಲ್ಲಿ ಭಡ್ತಿ, ವೇತನ, ಮಕ್ಕಳಿಗೆ ಶಿಕ್ಷಣ ನೀಡುವ ಅಂಶಗಳನ್ನು ಈ ಹೊಸ ನೀತಿಯಲ್ಲಿ ಸೇರಿಸಲಾಗುವುದು ಎಂದು ಸುಧಾಕರ್ ವಿವರಿಸಿದರು.

1,250 ಎಂಬಿಬಿಎಸ್ ವೈದ್ಯರು, 950 ತಜ್ಞರು, 150 ದಂತ ವೈದ್ಯರು ಸೇರಿ 2,500 ವೈದ್ಯರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ಜೊತೆಗೆ 1,500 ಹಿರಿಯ ರೆಸಿಡೆಂಟ್ ವೈದ್ಯರನ್ನು ನೇಮಿಸಲಾಗುವುದು. ಡಿಸೆಂಬರ್ ಅಥವಾ ಜನವರಿ ವೇಳೆಗೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳಲ್ಲಿ ಹುದ್ದೆಗಳು ಭರ್ತಿಯಾಗಲಿದೆ. ಅರೆ ವೈದ್ಯಕೀಯ, ನರ್ಸಿಂಗ್ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಉದ್ದೇಶವಿದ್ದು, ಅದಕ್ಕೆ ತಕ್ಕಂತೆ ನೀತಿಯಲ್ಲಿ ಬದಲಾವಣೆ ತರಲಾಗುವುದು. ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಬೆಂಗಳೂರಿನಲ್ಲಿ ಕೋವಿಡ್ ಮರಣ ಪ್ರಮಾಣ ಶೇ.00.99ಗೆ ಇಳಿಕೆಯಾಗಿದೆ. ಜನರು ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಂಡು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಸುಧಾಕರ್ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X