Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಂತಹ ಸ್ಥಳಗಳಲ್ಲಿ ಚುನಾವಣೆ ತಡೆಯಲು...

ಭಾರತದಂತಹ ಸ್ಥಳಗಳಲ್ಲಿ ಚುನಾವಣೆ ತಡೆಯಲು ಸಾಧ್ಯವಿಲ್ಲ: ಜೈಶಂಕರ್

ವಾರ್ತಾಭಾರತಿವಾರ್ತಾಭಾರತಿ6 May 2021 12:04 AM IST
share
ಭಾರತದಂತಹ ಸ್ಥಳಗಳಲ್ಲಿ ಚುನಾವಣೆ ತಡೆಯಲು ಸಾಧ್ಯವಿಲ್ಲ: ಜೈಶಂಕರ್

ಹೊಸದಿಲ್ಲಿ, ಮೇ 5: ಭಾರತದಂತಹ ಪ್ರಜಾತಂತ್ರವಾದಿ ದೇಶಗಳಲ್ಲಿ ಚುನಾವಣೆಗಳನ್ನು ತಡೆಯಲು ಸಾಧ್ಯವಾಗದು ಎಂದು ವಿದೇಶ ವ್ಯವಹಾರ ಇಲಾಖೆಯ ಸಚಿವ ಎಸ್. ಜೈಶಂಕರ್ ಬುಧವಾರ ಹೇಳಿದ್ದಾರೆ.

ಕೊರೋನ ಸೋಂಕಿನ ಸುತ್ತಮುತ್ತಲಿನ ರಾಜಕೀಯ ಮತ್ತು ಮಾಧ್ಯಮಗಳ ವಿಮರ್ಶಾತ್ಮಕ ವರದಿಗಾರಿಕೆ ಅಂತ್ಯವಾಗಬೇಕು ಎಂದು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ಭಾರತದಂತಹ ದೇಶದಲ್ಲಿ ಚುನಾವಣೆ ತಡೆಯಲು ಸಾಧ್ಯವಿಲ್ಲ. ನಾನು ಚಿಕ್ಕವನಿದ್ದಾಗ ಒಮ್ಮೆ ದೇಶದಲ್ಲಿ ಚುನಾವಣೆಯನ್ನು ತಡೆಯಲಾಗಿತ್ತು. ಅದನ್ನು ಮತ್ತೊಮ್ಮೆ ನೆನಪಿಸಿಕೊಳ್ಳಲು ನನಗೆ ಇಷ್ಟವಿಲ್ಲ ಎಂದು 1975ರಲ್ಲಿ ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಿರುವುದನ್ನು ಪರೋಕ್ಷವಾಗಿ ಉಲ್ಲೇಖಿಸಿ ಹೇಳಿದರು. ಕೊರೋನ ಸೋಂಕಿನ ವಿರುದ್ಧ ಕ್ರಮಕೈಗೊಳ್ಳುವ ಬದಲು ಬಿಜೆಪಿ ಚುನಾವಣೆಗೆ ಆದ್ಯತೆ ನೀಡಿತ್ತು ಎಂಬ ಟೀಕೆಯನ್ನು ತಳ್ಳಿಹಾಕಿದ ಅವರು ‘ಆ ಪಕ್ಷದ ನಾಯಕರು ನಡೆಸಿದ ರ್ಯಾಲಿಯಲ್ಲಿ ಸೇರಿದ್ದ ಬೃಹತ್ ಜನಸ್ತೋಮದಿಂದ ಸೋಂಕು ಹರಡಿದೆ. ಆ ನಾಯಕರು ಮಾಸ್ಕ್ ಧರಿಸಿರಲಿಲ್ಲ’ ಎಂದು ಇನ್ನೊಂದು ಪಕ್ಷದವರು ದೂರಬಹುದು. ಹೀಗೆ ಪರಸ್ಪರ ದೂರು ವಿನಿಮಯ ಮಾಡಿಕೊಳ್ಳಬಹುದು ಎಂದುತ್ತರಿಸಿದರು.

ದೇಶದಲ್ಲಿ ಭಾರೀ ಪ್ರಮಾಣದಲ್ಲಿ ಸೋಂಕು ಉಲ್ಬಣಗೊಂಡ ಸಂದರ್ಭದಲ್ಲೇ ಕೊರೋನ ಲಸಿಕೆಯನ್ನು ರಫ್ತು ಮಾಡಿದ್ದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೊರೋನ ಸೋಂಕು ಜಾಗತಿಕ ಸಮಸ್ಯೆಯಾಗಿದೆ. ಇವತ್ತು ನಮಗೆ, ನಾಳೆ ಮತ್ತೊಬ್ಬರಿಗೆ ಈ ಸಮಸ್ಯೆ ಕಾಡಬಹುದು. ಇವತ್ತು ನಾವು ವಿಶ್ವಕ್ಕೆ ನೆರವಾದರೆ ನಾಳೆ ನಮಗೆ ವಿಶ್ವದ ನೆರವು ದೊರಕುತ್ತದೆ ಎಂದರು.

ಕೊರೋನ ಸೋಂಕಿನ ಬಿಕ್ಕಟ್ಟು ಎದುರಿಸಲು ಭಾರತಕ್ಕೆ ವಿಶ್ವದ ರಾಷ್ಟ್ರಗಳು ನೆರವು ನೀಡಿದೆ ಎಂದು ವಿಶ್ಲೇಷಿಸುವುದು ಸರಿಯಲ್ಲ. ಇದು ಮಿತೃತ್ವ ಅಥವಾ ಸ್ನೇಹಪರತೆಯಿಂದ ನೀಡುವ ಬೆಂಬಲವಾಗಿದೆ ಎಂದು ಜೈಶಂಕರ್ ಹೇಳಿದರು. ಸಮಸ್ಯೆಯನ್ನು ವಿಶ್ಲೇಷಿಸುವಾಗ ಸಾರ್ವಜನಿಕರ ಆರೋಗ್ಯಕ್ಕೆ ಮಹತ್ವ ನೀಡಬೇಕು. ಕೆಲವು ಮಾಧ್ಯಮಗಳ ಸಂಪಾದಕೀಯ ಬರಹ ತುಂಬಾ ತೀಕ್ಷ್ಣವಾಗಿರುತ್ತದೆ. ಕಾಲ್ಪನಿಕ ಕತೆ, ಕಾದಂಬರಿ ಬರೆಯುವವರು ಸುದ್ಧಿಗಳನ್ನು ವಿಶ್ಲೇಷಿಸುವುದನ್ನೂ ಗಮನಿಸಿದ್ದೇನೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X