Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''ಸರ್ಕಾರಕ್ಕೆ ಅಂತಃಕರಣವಿಲ್ಲ, ತಾಯ್ತನ...

''ಸರ್ಕಾರಕ್ಕೆ ಅಂತಃಕರಣವಿಲ್ಲ, ತಾಯ್ತನ ಮೊದಲೇ ಇಲ್ಲ'': ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ17 Jan 2022 9:26 PM IST
share
ಸರ್ಕಾರಕ್ಕೆ ಅಂತಃಕರಣವಿಲ್ಲ, ತಾಯ್ತನ ಮೊದಲೇ ಇಲ್ಲ: ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಆಕ್ರೋಶ

ಶಿವಮೊಗ್ಗ(ಜ.17):ರಾಜ್ಯ ಸರ್ಕಾರಕ್ಕೆ ಅಂತಃಕರಣವಿಲ್ಲ,ತಾಯ್ತನ ಮೊದಲೇ ಇಲ್ಲ ಎಂದು  ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಆಕ್ರೋಶವ್ಯಕ್ತಪಡಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಸರ್ಕಾರ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಾ. ಸೋಮಶೇಖರ್ ಶಿಮೊಗ್ಗಿ ಮತ್ತು ಪದಾಧಿಕಾರಿಗಳು ಅತಿಥಿ ಉಪನ್ಯಾಸಕರಿಗೆ ಭರ್ಜರಿ ಕೊಡುಗೆ ನೀಡಿದ್ದೇವೆ ಎಂದು ಹೇಳಿಕೊಳ್ಳುವ ಸರ್ಕಾರ ಮಾಡಿದ್ದೇ ಬೇರೆ. ಮುಷ್ಕರದಲ್ಲಿದ್ದ ಅತಿಥಿ ಉಪನ್ಯಾಸಕರನ್ನು ವಿಭಜನೆ ಮಾಡುವ ಷಡ್ಯಂತ್ರ ರೂಪಿಸಿ ಇರುವ 8 ಗಂಟೆಯ ಕಾರ್ಯಭಾರವನ್ನು 16 ಗಂಟೆಗೆ ಏರಿಕೆ ಮಾಡಿ ಶೇ. 50 ರಷ್ಟು ಅತಿಥಿ ಉಪನ್ಯಾಸಕರ ತೆಗೆದು ಹಾಕುವುದು ಸರ್ಕಾರದ ಉದ್ದೇಶವಾಗಿದೆ ಎಂದು ಆರೋಪಿಸಿದರು.

ಇಬ್ಬರ ಅನ್ನವನ್ನು ಕಸಿದು ಒಬ್ಬರಿಗೆ ನೀಡುವ ಹುನ್ನಾರ ಸರ್ಕಾರದ ನಿರ್ಧಾರ ಹಿಂದಿದೆ. ಆದ್ದರಿಂದ ಸರ್ಕಾರದ ಈ ನಿರ್ಧಾರವನ್ನು ಅತಿಥಿ ಉಪನ್ಯಾಸಕರು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಮತ್ತು ಹೋರಾಟ ಕೂಡ ಕೈಬಿಡುವುದಿಲ್ಲ ಎಂದು ತಿಳಿಸಿದರು.
 ಸರ್ಕಾರ ಅತಿಥಿ ಉಪನ್ಯಾಸಕರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದು, ಸರ್ಕಾರದ ನೂತನ ನಿರ್ಧಾರದಿಂದ ಸುಮಾರು 7500 ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ.ಅತಿಥಿ ಉಪನ್ಯಾಸಕರ ಅನ್ನ ಕಿತ್ತುಕೊಳ್ಳುವ ಸರ್ಕಾರದ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕೆಂದು  ಆಗ್ರಹಿಸಿದರು.

ಈ ಸರ್ಕಾರಕ್ಕೆ ಅಂತಃಕರಣವಿಲ್ಲ. ತಾಯ್ತನ ಮೊದಲೇ ಇಲ್ಲ. ನಾವು ಕೇಳುತ್ತಿರುವುದು ಸೇವಾ ಭದ್ರತೆ. ನಮ್ಮನ್ನು ಉಪನ್ಯಾಸಕರ ಸೇವೆಯಲ್ಲಿ ವಿಲೀನಗೊಳಿಸಬೇಕು. ಪ್ರಸ್ತುತ ಕೆಪಿಎಸ್ ನಿಯಮದಲ್ಲಿ ಇದಕ್ಕೆ ಅವಕಾಶ ಕೂಡ ಇದೆ. ಆದರೂ ರಾಜ್ಯ ಸರ್ಕಾರ ಈ ಅಂಶಗಳನ್ನು ಮರೆಮಾಚಿದೆ. ಯಾವುದೇ ಚರ್ಚೆ ಮಾಡದೇ ನಿಜವಾದ ಅಧ್ಯಯನದ ವರದಿ ನೀಡದೇ, ಸಾಧಕ ?ಬಾಧಕ ಗುರುತಿಸದೇ, ಸಲಹೆ ಪಡೆಯದೇ ಉನ್ನತ ಶಿಕ್ಷಣ ಸಚಿವರು ದಿಢೀರನೇ ಶೇ. 50 ರಷ್ಟು ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ತೆಗೆಯುವಂತಹ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ದೂರಿದರು.

ಹಾಗಾಗಿ ಸರ್ಕಾರದ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ನಮಗೆ ಉದ್ಯೋಗ ಭದ್ರತೆ ಬೇಕು. ರಾಜ್ಯ ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ಉದ್ಯೋಗ ಕಡಿತಗೊಳಿಸುವ ಮಾರಕ ಆದೇಶವನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಹೆಚ್. ಸರ್ವಜ್ಞಮೂರ್ತಿ, ರಾಜೇಶ್ ಕುಮಾರ್, ಸತೀಶ್, ಚಂದ್ರಪ್ಪ, ವಸಂತಕುಮಾರ್, ಎಂ.ಆರ್. ರೂಪಾ, ಪರಿಮಳ, ಡಾ. ಶೀಲಾ ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X