ಮಂಗಳೂರು: ಮತ್ಸ್ಯ ಸಂಪದಕ್ಕೆ ಶಿಲಾನ್ಯಾಸ

ಮಂಗಳೂರು : ನಗರದ ಉರ್ವಾ ಲೋಕಾಯುಕ್ತರ ಕಚೇರಿಯ ಬಳಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿಗಮದ ನೂತನ ಪ್ರಧಾನ ಕಚೇರಿ ಸಂಕೀರ್ಣ ಮತ್ಸ್ಯ ಸಂಪದಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನರು ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಲಾಲಾಜಿ ಮೆಂಡನ್, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
Next Story





