Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಸ್ಸಾರ್ಟಿಸಿ ಮೊದಲನೇ ವಾಹನಕ್ಕೂ ಅಮೃತ...

ಕೆಎಸ್ಸಾರ್ಟಿಸಿ ಮೊದಲನೇ ವಾಹನಕ್ಕೂ ಅಮೃತ ಮಹೋತ್ಸವ ಸಂಭ್ರಮ: ಅನ್ಬುಕುಮಾರ್

ವಾರ್ತಾಭಾರತಿವಾರ್ತಾಭಾರತಿ15 Aug 2022 10:32 PM IST
share
ಕೆಎಸ್ಸಾರ್ಟಿಸಿ ಮೊದಲನೇ ವಾಹನಕ್ಕೂ ಅಮೃತ ಮಹೋತ್ಸವ ಸಂಭ್ರಮ: ಅನ್ಬುಕುಮಾರ್

ಬೆಂಗಳೂರು, ಆ. 15: ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೊದಲನೇ ವಾಹನವಾದ ‘ಶ್ರೀ ಬನಶಂಕರಿ ಬಸ್’ ಈ ವರ್ಷ ತನ್ನ ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು, ಇದನ್ನು ಸಾರಿಗೆ ನಿಗಮದ ಆರಂಭದ ವಾಹನದ ಕುರುಹಾಗಿ ಕೇಂದ್ರ ಕಚೇರಿಯ ಮುಂದೆ ನಿಲ್ಲಿಸಲಾಗಿರುವುದು ಹೆಮ್ಮೆಯ ವಿಷಯ' ಎಂದು ಕೆಎಸ್ಸಾರ್ಟಿಸಿ (KSRTC) ವ್ಯವಸ್ಥಾಪಕ ನಿರ್ದೇಶನ ವಿ.ಅನ್ಬುಕುಮಾರ್ ಇಂದಿಲ್ಲಿ ಬಣ್ಣಿಸಿದ್ದಾರೆ.

ಸೋಮವಾರ ಇಲ್ಲಿನ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸಂಸ್ಥೆಯ ಸಮಸ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಶುಭಾಶಯಗಳನ್ನು ಕೋರಿದರು.

‘ನಿಗಮದ ಎಲ್ಲ ಘಟಕ, ಬಸ್ ನಿಲ್ದಾಣ, ವಿಭಾಗ ಕಚೇರಿಗಳಲ್ಲಿಯೂ ಸ್ವಾತಂತ್ರ್ಯದ ಅಮೃತೋತ್ಸವದ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಭ್ರಮಿಸಲಾಗುತ್ತಿದೆ. ದೇಶವು ಇಡೀ ವಿಶ್ವದಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವವೆಂಬ ಹೆಗ್ಗಳಿಕೆಯನ್ನು ಹೊಂದಿದೆ. ತಮ್ಮ ಪ್ರಾಣವನ್ನು ದೇಶಕ್ಕಾಗಿ ತ್ಯಾಗ ಮಾಡಿದ ವೀರ ಸ್ವಾತಂತ್ರ್ಯಯೋಧರ ಧೈರ್ಯ ಹಾಗೂ ಬಲಿದಾನವನ್ನು ನೆನಪಿಸಿಕೊಳ್ಳುವ ಮತ್ತು ಅವಿರತ ಹೋರಾಟದ ಕಾರಣದಿಂದ ದಾಸ್ಯದ ಸಂಕೋಲೆಯಿಂದ ಬಿಡುಗಡೆಯಾದ ಮಹತ್ವದ ದಿನದ ಸಂಭ್ರಮ ಇದಾಗಿದೆ' ಎಂದು ನುಡಿದರು.

‘ಭಾರತೀಯರಲ್ಲಿ ದೇಶಪ್ರೇಮ ಹಾಗೂ ರಾಷ್ಟ್ರೀಯತೆ ರಕ್ತಗತವಾಗಿ ಬಂದಿದೆ. ನಮ್ಮ ದೇಶವು ಎಲ್ಲ ರೀತಿಯ ಜನರು, ಸಂಸ್ಕೃತಿ, ಆಚರಣೆಗಳ ಶ್ರೀಮಂತ ನೆಲೆವೀಡಾಗಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ, ಗೌರವಿಸುವ ಸಂದರ್ಭ ಇದಾಗಿದೆ. ಕೋವಿಡ್ ಸಂದರ್ಭದಲ್ಲಿ ನಿಗಮವು ಅನುಭವಿಸುತ್ತಿದ್ದ ಆರ್ಥಿಕ ತೊಂದರೆಯಿಂದ ಎರಡು ವರ್ಷಗಳಲ್ಲಿ ಯಾವುದೇ ರೀತಿಯ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಿಬ್ಬಂದಿಗಳಿಗೆ ಏರ್ಪಡಿಸಲಾಗಿರಲಿಲ್ಲ. ಆದರೆ ಪ್ರಸ್ತುತ ವರುಷದಲ್ಲಿ ಘಟಕ ಮಟ್ಟದಲ್ಲಿಯೂ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು' ಎಂದರು.

‘ಸಿಬ್ಬಂದಿಗಳು ಆಹ್ಲಾದಕರ ವಾತಾವರಣದಲ್ಲಿ ಕೆಲಸ ಮಾಡಿದರೆ ನಿಗಮದ ಉತ್ಪಾದಕತೆಯು ಅಭಿವೃದ್ಧಿ ಹೊಂದುತ್ತದೆ. ಅವರುಗಳೊಡನೆ ಅತೀಹೆಚ್ಚು ಸಮಯ ಕಚೇರಿಯಲ್ಲಿ ಕಾರ್ಯನಿರ್ವಹಿಸುವುದರಿಂದ ಸಿಬ್ಬಂದಿಗಳೊಡನೆ ಒಡನಾಟ ಸೌಹಾರ್ದತೆಯಿಂದ ಕೂಡಿರುವುದಕ್ಕೆ ಈ ರೀತಿಯ ಕಾರ್ಯಕ್ರಮಗಳು ಪೂರಕವಾಗಲಿದೆ ಎಂದು ಅನ್ಬುಕುಮಾರ್ ತಿಳಿಸಿದರು.

ಇದೇ ಸಂದರ್ಭದಲ್ಲಿ ನಿಗಮದ ಆಂತರಿಕ ನಿಯತಕಾಲಿಕವಾದ ‘ಸಾರಿಗೆ ಸಂಪದ' ಪತ್ರಿಕೆಯನ್ನು ಕೋವಿಡ್ ಕಾರಣದಿಂದ ಸ್ಥಗಿತಗೊಳಿಸಲಾಗಿದ್ದು, ನಿಗಮದಲ್ಲಿನ ಎಲ್ಲ ವಿದ್ಯಮಾನಗಳು ಪ್ರತಿಯೊಬ್ಬ ಸಿಬ್ಬಂದಿಗೂ ತಲುಪಬೇಕಾಗಿರುವ ಅವಶ್ಯಕತೆಯನ್ನು ಮನಗೊಂಡು, ಸಾರಿಗೆ ಸಂಪದದ ಮುದ್ರಣ ಪುನರಾಂಭಿಸಿ, 75ನೆ ಸ್ವಾತಂತ್ರ್ಯದ ವಿಶೇಷ ಆವೃತ್ತಿಯನ್ನು ಇಂದು ಬಿಡುಗಡೆ ಮಾಡಲಾಯಿತು.ಕಾರ್ಯಕ್ರಮದಲ್ಲಿ, ಬಿಎಂಟಿಸಿಯ ನಿರ್ದೇಶಕರಾದ ಜಿ.ರಾಧಿಕಾ, ಸೂರ್ಯ ಸೇನ್, ಡಾ.ನವೀನ್ ಭಟ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X