Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರಿನಲ್ಲಿ ಬಾಣಂತಿ, ಹಸುಗೂಸುಗಳ...

ತುಮಕೂರಿನಲ್ಲಿ ಬಾಣಂತಿ, ಹಸುಗೂಸುಗಳ ಸಾವು ಪ್ರಕರಣ: ಸಚಿವ ಡಾ.ಸುಧಾಕರ್ ವಜಾಕ್ಕೆ ಕುಮಾರಸ್ವಾಮಿ ಆಗ್ರಹ

3 Nov 2022 9:46 PM IST
share
ತುಮಕೂರಿನಲ್ಲಿ  ಬಾಣಂತಿ, ಹಸುಗೂಸುಗಳ ಸಾವು ಪ್ರಕರಣ: ಸಚಿವ ಡಾ.ಸುಧಾಕರ್ ವಜಾಕ್ಕೆ ಕುಮಾರಸ್ವಾಮಿ ಆಗ್ರಹ

ಬೆಂಗಳೂರು, ನ. 3: ‘ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿ ಬದಲಾವಣೆ, ಅಬ್ಬರದ ಪ್ರಚಾರವೆ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೇವಲ ರಾಜಕೀಯ, ಚುನಾವಣೆ, ಪ್ರಚಾರದಲ್ಲಿ ಮುಳುಗೇಳುತ್ತಿರುವ ಬಿಜೆಪಿ ಸರಕಾರದ ಆಡಳಿತದ ಕರಾಳ ಮುಖದ ಬಗ್ಗೆ (ಮಂಡ್ಯದ ಘಟನೆ) ಸ್ವಲ್ಪ ಹೊತ್ತಿನ ಹಿಂದೆ ನಾನು ಟ್ವೀಟ್ ಮಾಡಿದ್ದೆ. ಆದರೆ, ಅದಕ್ಕಿಂತ ಭಯಾನಕ ಹಾಗೂ ಕರುಳು ಹಿಂಡುವ, ಇಡಿ ಕರ್ನಾಟಕವೇ ತಲೆ ತಗ್ಗಿಸುವ ದುರ್ಘಟನೆ ತುಮಕೂರಿನಲ್ಲಿ ನಡೆದಿದೆ’ ಎಂದು ಗಮನ ಸೆಳೆದಿದ್ದಾರೆ.

‘ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ’ ಎಂದು ಎಚ್‍ಡಿಕೆ ವಾಗ್ದಾಳಿ ನಡೆಸಿದ್ದಾರೆ.

‘ಪ್ರಸವ ವೇದನೆಯಿಂದ ಬಳಲುತ್ತಿದ್ದ ತುಮಕೂರಿನ ಭಾರತೀನಗರದ ಕಸ್ತೂರಿ(30)ಎಂಬ ಮಹಿಳೆಯನ್ನು ನಿನ್ನೆ ತಡರಾತ್ರಿ ಸ್ಥಳೀಯರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ, ಕರ್ತವ್ಯದಲ್ಲಿದ್ದ ವೈದ್ಯೆ, ಆ ಗರ್ಭಿಣಿಗೆ ಹೆರಿಗೆ ಮಾಡಿಸದೆ ತಾಯಿ ಕಾರ್ಡ್ ಮಾಡಿಸಿಲ್ಲ ಎನ್ನುವ ನೆಪ ಹೇಳಿ ನಿರ್ದಯವಾಗಿ ವಾಪಸ್ ಕಳುಹಿಸಿದ್ದಾರೆ’ ಎಂದು ಅವರು ದೂರಿದ್ದಾರೆ.

‘ಹೆರಿಗೆ ನೋವಿನಿಂದ ನರಳುತ್ತಿದ್ದ ಆ ಮಹಿಳೆ, ತನಗೆ ಹೆರಿಗೆ ಮಾಡಿಸಿ ಎಂದು ಆ ವೈದ್ಯೆಯನ್ನು ಪರಿಪರಿಯಾಗಿ ಅಂಗಲಾಚಿದ್ದಾರೆ. ಆದರೆ, ದರ್ಪದಿಂದ ವರ್ತಿಸಿದ ವೈದ್ಯೆ, ಹೆರಿಗೆ ಮಾಡಿಸದೆ ಮಾನವೀಯತೆಯನ್ನೇ ಮರೆತು ಆಕೆಯನ್ನು ವಾಪಸ್ ಕಳುಹಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೋಗಿ ಹೆರಿಗೆ ಮಾಡಿಸಿಕೋ ಎಂದು ತಾಕೀತು ಮಾಡಿದ್ದಾರೆ’ ಎಂದು ಅವರು ಉಲ್ಲೇಖಿಸಿದ್ದಾರೆ.

‘ಬೇರೆ ದಾರಿ ಇಲ್ಲದೆ, ಹಣವೂ ಇಲ್ಲದೆ ಹೊಟ್ಟೆ ನೋವಿನಲ್ಲೇ ಮನೆಗೆ ವಾಪಸ್ ಬಂದಿದ್ದ ಆ ಮಹಿಳೆ, ಇಡೀ ರಾತ್ರಿ ನರಳಿನರಳಿ ಬೆಳಗಿನಜಾವ ಒಂದು ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ತೀವ್ರ ರಕ್ತಸ್ರಾವವಾಗಿ ಎರಡು ಮಕ್ಕಳ ಜತೆಗೆ ತಾನೂ ಸಾವನ್ನಪ್ಪಿದ್ದಾರೆ. 6 ವರ್ಷದ ಇನ್ನೊಂದು ಹೆಣ್ಣು ಮಗು ತಬ್ಬಲಿ ಆಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು’ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

‘ಕೂಡಲೇ ಆ ವೈದ್ಯೆಯನ್ನು ಸೇವೆಯಿಂದ ವಜಾ ಮಾಡಬೇಕು. ಕರ್ತವ್ಯಲೋಪ ಎಸಗಿದ ಇತರೆ ಸಿಬ್ಬಂದಿಗೂ ತಕ್ಕಶಾಸ್ತಿ ಮಾಡಬೇಕು. ಜಿಲ್ಲಾಸ್ಪತ್ರೆಯ ಅಧಿಕ್ಷರನ್ನೂ ಇದಕ್ಕೆ ಹೊಣೆ ಮಾಡಿ ಮನೆಗೆ ಕಳಿಸಬೇಕು. ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

share
Next Story
X