Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು...

ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು 'ಕಮಲಪಕ್ಷ'ಕ್ಕೆ ಸಿದ್ಧಿಸಿರುವ ಕಲೆ: ಜೆಡಿಎಸ್ ಟೀಕೆ

ಮುಂದುವರಿದ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದ 'ಆಹ್ವಾನ' ರಾಜಕೀಯ

12 Nov 2022 10:50 AM IST
share
ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ: ಜೆಡಿಎಸ್ ಟೀಕೆ
ಮುಂದುವರಿದ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದ 'ಆಹ್ವಾನ' ರಾಜಕೀಯ

ಬೆಂಗಳೂರು, ನ.12: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಆಹ್ವಾನ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಆರೋಪ-ಪ್ರತ್ಯಾರೋಪ ಮುಂದುವರಿದಿದೆ.

ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸಿಲ್ಲ ಎಂಬ ಜೆಡಿಎಸ್ ಕಿಡಿಕಾರಿದ ಬೆನ್ನಲ್ಲೇ ದೇವೇಗೌಡರನ್ನು ಆಹ್ವಾನಿಸಿದ್ದಾಗಿ ಬಿಜೆಪಿ ಟ್ವೀಟ್ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿ ಮತ್ತೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, "ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದೆ.

"ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ?" ಎಂದು ಜೆಡಿಎಸ್ ಪ್ರಶ್ನಿಸಿದೆ.

"ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೆತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?  ಮರುದಿನ 12:50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12:30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?" ಎಂದು ಟೀಕಿಸಿದೆ.

"ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಕತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ" ಎಂದು ವ್ಯಂಗ್ಯವಾಡಿದೆ.

ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?

'ಸಬ್ ಕಾ ಸಾಥ್, ಸಬ್ ಕಾ ವಿಕಾಸ್'; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ

ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ? ಎಂದು ಜೆಡಿಎಸ್ ಸವಾಲು ಹಾಕಿದೆ.

ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದೇವೇಗೌಡರಿಗಿಲ್ಲ ಆಹ್ವಾನ: ಜೆಡಿಎಸ್ ಕಿಡಿ

ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ.
ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ. 5/8 pic.twitter.com/e0fdTqHB1X

— Janata Dal Secular (@JanataDal_S) November 12, 2022
share
Next Story
X