Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 4-5 ವರ್ಷಗಳಲ್ಲಿ ಕರ್ನಾಟಕ ವಿಶ್ವದ ಅತಿ...

4-5 ವರ್ಷಗಳಲ್ಲಿ ಕರ್ನಾಟಕ ವಿಶ್ವದ ಅತಿ ದೊಡ್ಡ ಉಕ್ಕು ಉತ್ಪಾದಿಸುವ ರಾಜ್ಯವಾಗಲಿದೆ: ಸಿಎಂ ಬೊಮ್ಮಾಯಿ

3 Dec 2022 2:30 PM IST
share
4-5 ವರ್ಷಗಳಲ್ಲಿ ಕರ್ನಾಟಕ ವಿಶ್ವದ ಅತಿ ದೊಡ್ಡ ಉಕ್ಕು ಉತ್ಪಾದಿಸುವ ರಾಜ್ಯವಾಗಲಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಡಿ 03: ಕರ್ನಾಟಕದಲ್ಲಿ ಅತಿ ದೊಡ್ಡ ಕಬ್ಬಿಣದ ಕಾರ್ಖಾನೆ ಇದ್ದು  4-5 ವರ್ಷಗಳಲ್ಲಿ ವಿಶ್ವದ ಅತಿ ದೊಡ್ಡ ಕಬ್ಬಿಣ ಅದಿರು ಉತ್ಪಾದನೆ ಮಾಡುವ ರಾಜ್ಯವಾಗಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಭಾರತ ಸರ್ಕಾರದ ಕಲ್ಲಿದ್ದಲು ಮತ್ತು ಗಣಿ ಸಚಿವಾಲಯದಿಂದ ಹಮ್ಮಿಕೊಂಡಿದ್ದ  ವಾಣಿಜ್ಯ ಕಲ್ಲಿದ್ದಲು ಗಣಿ ಹರಾಜು ಮತ್ತು ಗಣಿಗಾರಿಕೆ ವಲಯದಲ್ಲಿನ ಅವಕಾಶಗಳ ಕುರಿತ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.

ಒರಿಸ್ಸಾ  ಗಣಿಗಾರಿಕೆಯ ರಾಜ್ಯವಾಗಿದೆ. ಅಲ್ಲಿ ಗಣಿಗಾರಿಕೆ ಪ್ರಮುಖ ಉದ್ಯಮ, ಅದನ್ನು ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವುದು ಸರಿಯಲ್ಲ. ಅಲ್ಲಿನ ನೀತಿಗಳನ್ನೇ ಇತರೆ ರಾಜ್ಯಗಳಿಗೆ ಅನ್ವಯಿಸುವುದು ಕೂಡ  ಸೂಕ್ತವಲ್ಲ.  ರಾಜ್ಯದಲ್ಲಿರುವ  ಗುಣಮಟ್ಟದ ಗಣಿಗಳಿಂದ ಮಾತ್ರ ಉತ್ಪಾದನೆ ಸಾಧ್ಯವಾಗಲಿದೆ ಎಂದರು. 

ಇಂಧನ, ಗಣಿ ಹಾಗೂ ಉಕ್ಕು ಸಚಿವಾಲಯಗಳು ತಂತ್ರಜ್ಞಾನವನ್ನು ಬಳಕೆ ಮಾಡಬೇಕು ಹಾಗೂ  ಬೇಡಿಕೆಯಲ್ಲಿರುವ ಖನಿಜಗಳ ಉತ್ಪಾದನೆಗೆ ತೊಡಗಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. 

''ನಿಯಮಗಳ ಸರಳೀಕರಣ''

ಅನೇಕ ಗಣಿ ಕಂಪನಿಗಳು ಕೋಲಾರ ಚಿನ್ನದ ಗಣಿ ಮರು ಆರಂಭಿಸಲು ಮನವಿ ಸಲ್ಲಿಸಿವೆ. ಗಣಿ ನೀತಿಯಲ್ಲಿ  ರಾಜ್ಯ ಸರ್ಕಾರ ನಿಯಮಗಳನ್ನು ಸರಳಿಕರಣಗೊಳಿಸಿದೆ‌. ಗಣಿ ಉದ್ಯಮಿಗಳು ರಾಜ್ಯದಲ್ಲಿ ಗಣಿಗಾರಿಕೆ ನಡೆಸಲು ಆಗಮಿಸಿ‌ ಈ ಮೂಲಕ ರಾಜ್ಯದ ಆದಾಯ ವೃದ್ಧಿಗೆ ಕೊಡುಗೆ ನೀಡಬೇಕೆಂದರು. 

''ಮನುಕುಲದ ಭವಿಷ್ಯ''

ಭಗವಂತನ ಪಂಚಭೂತದಲ್ಲಿ ಭುಮಿತಾಯಿ ಒಬ್ಬಳು. ಭೂ ತಾಯಿ ಗರ್ಭದಲ್ಲಿ ಮನುಷ್ಯನ‌ ಭವಿಷ್ಯ ಇದೆ.‌ ಪಂಚಭೂತಗಳನ್ನು ದೈವ ಸಾಕ್ಷಿಯಾಗಿ ಕಾಣುತ್ತೇವೆ.  ಭೂಮಿಯಲ್ಲಿ ದೇವರ ಅಸ್ತಿತ್ವ ಕಾಣುತ್ತೇವೆ. ದೇವರ ಅಸ್ತಿತ್ವ ಮನುಕುಲದ ಒಳಿತಿಗಾಗಿ ಇದೆ. ಅದನ್ನು ಯಾವ ರೀತಿ ಉಪಯೋಗಿಸುತ್ತೇವೆ ಎನ್ನುವುದರ ಮೇಲೆ ಮನುಕುಲದ ಭವಿಷ್ಯ ಅಡಗಿದೆ ಎಂದರು. 

''ಅನ್ವೇಷಣೆ ಮತ್ತು ಶೋಷಣೆಯ ನಡುವೆ  ಸಮತೋಲನ ಕಾಯ್ದುಕೊಳ್ಳಬೇಕು''

ಗಣಿಗಳ ರಚನೆಯೇ ನಮಗೆ ಅವುಗಳ ಅನ್ವೇಷಣೆಯ ವಿಧಾನದ ಬಗ್ಗೆ ಹಾಗೂ ಶೋಷಣೆ ಮಾಡಬಾರದು ಎಂಬ  ಪಾಠ ಕಲಿಸುತ್ತವೆ.  ಅನ್ವೇಷಣೆ ಮತ್ತು ಶೋಷಣೆಯ ನಡುವೆ  ಸಮತೋಲನ ಕಾಯ್ದುಕೊಳ್ಳಬೇಕು. ಇದನ್ನು ಸಾಧಿಸಿದಾಗ ಸುಸ್ಥಿರತೆ ಸಾಧಿಸಬಹುದು. ಸುಸ್ಥಿರತೆ ಪ್ರಮುಖ ವಿಷಯವಾಗಿದ್ದು, ಈ ವಲಯದಲ್ಲಿ ಸುಸ್ಥಿರತೆಯನ್ನು ತರಬೇಕಿದೆ.  ಅತ್ಯುತ್ತಮ ಗಣಿ ಸಂಸ್ಕೃತಿಯನ್ನು ಜಾರಿಗೆ ತರಬೇಕಿದೆ.  5 ಸಾವಿರಕ್ಕೂ ಹೆಚ್ವು ಜನರಿಗೆ ಉದ್ಯೋಗ ಕಲ್ಪಿಸುವ ಗಣಿಗಾರಿಕೆ ವಲಯ, ಸರ್ಕಾರ ಕ್ಕೂ ಆದಾಯ ತರಲಿದೆ.  ಗಣಿಗಾರಿಕೆ ಸಂಸ್ಕೃತಿ. ಹೆಚ್ವಿನ ಚಿನ್ನ, ಗಣಿ ಹಾಗೂ ಪರಿಸರ ಸೂಕ್ಷ್ಮತೆಯನ್ನು ಕಾಪಾಡಿಕೊಳ್ಳುತ್ತದೆ ಹಾಗೂ ಸುಸ್ಥಿರತೆ ಯನ್ನೂ ತರಲಿದೆ. ವೈಜ್ಞಾನಿಕವಾಗಿ ಗಣಿಗಾರಿಕೆ ಮಾಡದಿದ್ದರೆ,  ಉತ್ಪಾದನೆಯನ್ನು ಹೆಚ್ಚುಗೊಳಿಸಲಾಗುವುದಿಲ್ಲ ಹಾಗೂ ಭವಿಷ್ಯಕ್ಕೆ ಉಳಿಯುವುದೂ ಇಲ್ಲ. ಅನ್ವೇಷಣೆ ಮಾಡಿದರೆ    ದೇಶ ಹಾಗೂ  ದೇಶದ ಆರ್ಥಿಕತೆಗೆ ಹಾಗೂ ಸಮಾಜಕ್ಕೆ ಒಳ್ಳೆಯದಾಗುತ್ತದೆ.‌ ಶೋಷಣೆ ಮಾಡಿದರೆ ಭವಿಷ್ಯದಿಂದ ಕಳುವು  ಮಾಡಿದಂತಾಗುತ್ತದೆ ಎಂದರು. 

► ''ಗಣಿಗಾರಿಕೆಯಲ್ಲಿ ಸುಸ್ಥಿರತೆ''

ಪ್ರಧಾನಿ ನರೇಂದ್ರ ಮೋದಿಯವರು ಒಬ್ಬ ದಾರ್ಶನಿಕ.  ಅವರ ಗುರಿಗಳ ಬಗ್ಗೆ ಅವರಿಗೆ ಸ್ಪಷ್ಟತೆ ಇದೆ. ಅವರು ಹಿಂದಿನ ಆಳ್ವಿಕೆಗಳ ತಪ್ಪುಗಳ ಬಗ್ಗೆ ಮಾಹಿತಿ ಇದೆ. ಆದ್ದರಿಂದ ನೂತನ ಗಣಿ ನೀತಿಯನ್ನು ಜಾರಿಗೆ ತಂದು ಗರಿಷ್ಠ ಉತ್ಪಾದನೆ ಹಾಗೂ ಸುಸ್ಥಿರತೆಯನ್ನು  ತಂದಿದ್ದಾರೆ.  ಪಾರದರ್ಶಕ, ವೈಜ್ಞಾನಿಕ ರೀತಿಯಲ್ಲಿ ಗಣಿಕಾರಿಕೆ ಕೈಗೊಳ್ಳಲು ನೂತನ ವಿಧಾನ, ಯಂತ್ರಗಳು ಬಂದಿವೆ. ಗಣಿಕಾರಿಕೆ ಯನ್ನು ವೃತ್ತಿ ಯಾಗಿ ಕೈಗೆತ್ತಿಕೊಳ್ಳಲು ಇದು ಸಕಾಲ. ಈ ರೀತಿಯ ವಾತಾವರಣ 7-8  ವರ್ಷಗಳ ಹಿಂದೆ ಇರಲಿಲ್ಲ ಎಂದರು.   

ಕರ್ನಾಟಕ 2.5 ಕೋಟಿ ರೂ ಮುಂದಿನ 3 ವರ್ಷದಲ್ಲಿ ನವೀಕರಣ‌ ಇಂಧನದಲ್ಲಿ ಬಂಡವಾಳ ಹೂಡಿಕೆ ಮಾಡಲಿದೆ.

ಇಂಧನ ದೇಶದ ಅಭಿವೃದ್ದಿಗೆ ಪೂರಕವಾಗಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿರುವ ಇತಿಮಿತಿಗಳನ್ನು ಮೀರಿ ಕ್ಷೇತ್ರ ಬೆಳೆಯುತ್ತಿದೆ.  ಕರ್ನಾಟಕ 2.5 ಕೋಟಿ ರೂ ಮುಂದಿನ 3 ವರ್ಷದಲ್ಲಿ ನವೀಕರಣ‌ ಇಂಧನದಲ್ಲಿ ಬಂಡವಾಳ ಹೂಡಿಕೆ ಮಾಡಲಿದೆ. ಕರ್ನಾಟಕ ಅತಿ ಹೆಚ್ಚು ನವೀಕರಿಸಬಹುದಾದ ಇಂಧನ ಉತ್ಪಾದಿಸುವ ರಾಜ್ಯವಾಗಿದೆ. ಹೈಡ್ರೋಜನ್ ಇಂಧನ ಹಾಗೂ ಕಡಲಿನಿಂದ  ಅಮೋನಿಯಾ ಉತ್ಪಾದನೆಗೆ 2 ಲಕ್ಷಕ್ಕಿಂತಲೂ ಹೆಚ್ವಿನ ಹೂಡಿಕೆ ಆಗುತ್ತಿದೆ. ಸಮೃದ್ಧ ಗಣಿಮೂಲ ಗಳನ್ನು ಹೊಂದಿರುವ ರಾಜ್ಯ ನಮ್ಮದು. ಚಿನ್ನ, ಬ್ರೋಮೈಡ್, ನಿಕಲ್ ಮುಂತಾದ  ಖನಿಜಗಳನ್ನು ಹೊಂದಿದೆ. ನಾವು ಉತ್ತಮ ಗಣಿ ನೀತಿ ಹೊಂದಿದ್ದೇವೆ. ಸರ್ಕಾರ  ಹೂಡಿಕೆದಾರರ  ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುವ ಭರವಸೆ ನೀಡಿದರು. 

ಕಲ್ಲಿದ್ದಲು ಹಾಗು ಕಬ್ಬಿಣ ಮತ್ತು ಉಕ್ಕು ಅತ್ಯಂತ ಮಹತ್ವದ ಗಣಿ ಉದ್ಯಮಗಳಾಗಿವೆ. ಕಲ್ಲಿದ್ದಲು ಗಣಿಗಾರಿಕೆಯಲ್ಲಿ ದೇಶದಲ್ಲಿ ಉತ್ತಮ ಸಾಧನೆ ಮಾಡಿದ್ದು, ಕೇಂದ್ರ ಗಣಿ ಸಚಿವ ಪ್ರಹ್ಲಾದ‌ಜೋಶಿ ಅವರ ನೇತೃತ್ವದಲ್ಲಿ ನಾಲ್ಕೈದು ವರ್ಷಗಳಲ್ಲಿ ಕಲ್ಲಿದ್ದಿಲಿನ ಉತ್ಪಾದನೆ ಹೆಚ್ಚಾಗಿದೆ ಎಂದರು. 500 ಮಿಲಿಯನ್ ಮೆಟ್ರಿಕ್ ಟನ್ ಉತ್ಪಾದನೆಯನ್ನು ಮುಂದಿನ 3- 4 ವರ್ಷಗಳಲ್ಲಿ ಮಾಡಲಿದ್ದು, ಉತ್ಪಾದನೆ ಶೀಘ್ರವೇ ಪ್ರಾರಂಭವಾಗಲಿದೆ. ಕಲ್ಲಿದ್ದಲು ಗಣಿಗಾರಿಕೆಯ ಇತಿಹಾಸದಲ್ಲಿಯೇ ಇದು ಅತ್ಯಂತ ಹೆಚ್ಚಿನ ಉತ್ಪಾದನೆಯಾಗಲಿದೆ. ಇದಕ್ಕಾಗಿ ಅವರನ್ನು ಅಭಿನಂದಿಸಿದರು. 

''ಗಣಿಗಾರಿಕೆಯಲ್ಲಿ ಗರಿಷ್ಠ ಉತ್ಪಾದನೆ''

ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸಲು ಇದು ನಮಗೆ ಸಹಾಯಕವಾಗಲಿದೆ. ಭಾರತವನ್ನು ಆರ್ಥಿಕತೆಯ ಶಕ್ತಿ ಕೇಂದ್ರವಾಗಿಸಲು ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಗರಿಷ್ಠ ಉತ್ಪಾದನೆಯನ್ನು ನಿಗದಿತ ಸಮಯದಲ್ಲಿ ಮಾಡಬೇಕಿದೆ.  

ಕಬ್ಬಿಣ ಮತ್ತು ಉಕ್ಕಿನ ಗಣಿಗಾರಿಕೆ ವಿಚಾರದಲ್ಲಿ ಸುಪ್ರಿಂ ಕೋರ್ಟ್ ಕೆಲವು ಮಾರ್ಗಸೂಚಿಗಳನ್ನು‌ ನೀಡಿದ್ದು,  ಅದರಂತೆ ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗುತ್ತಿದೆ. ಹರಾಜು ಪ್ರಕ್ರಿಯೆಯನ್ನು ದಕ್ಷ ಹಾಗೂ ಪಾರದರ್ಶಕವಾಗಿ  ಕೈಗೊಳ್ಳಲು  ಸೂಚಿಸಲಾಗಿದೆ. ಹರಾಜು ಪ್ರಕ್ರಿಯೆಯನ್ನು ದೊಡ್ಡ ಮಟ್ಟದಲ್ಲಿ ಕೈಗೊಳ್ಳುವ ಭರವಸೆ ಇದೆ.  16 ಬ್ಲಾಕ್ ಗಳ ಹರಾಜು ಪ್ರಕ್ರಿಯೆ ತಕ್ಷಣದಲ್ಲಿ ಆಗಲಿದ್ದು ಇನ್ನೂ 25 ಬ್ಲಾಕ್ ಗಳ ಹರಾಜು ಶೀಘ್ರವೇ ಆಗಲಿದೆ ಎಂದರು.

ಈ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್, ಕೇಂದ್ರ ಕಲ್ಲಿದ್ದಲು ಮತ್ತು ಗಣಿ  ಇಲಾಖೆ ಕಾರ್ಯದರ್ಶಿ  ಅಮೃತ್ ಲಾಲ್ ಮೀನಾ, ಸಂಜಯ್ ಮೊದಲಾದವರು ಉಪಸ್ಥಿತರಿದ್ದರು.

ಮುಖ್ಯ ಮಂತ್ರಿ @BSBommai ಅವರು ಇಂದು ಕಲ್ಲಿದ್ದಲು ಹಾಗೂ ಗಣಿ ಸಚಿವಾಲಯ ಹಮ್ಮಿಕೊಂಡಿದ್ದ ವಾಣಿಜ್ಯ ಕಲ್ಲಿದ್ದಲು ಗಣಿ ಹಾರಾಜು ಹಾಗೂ ಗಣಿ ವಲಯದಲ್ಲಿ ಅವಕಾಶಗಳು ಕುರಿತ ಹೂಡಿಕೆದಾರರ ಸಮಾವೇಶವನ್ನು ಉದ್ಘಾಟಿಸಿದರು.
1/2 pic.twitter.com/80XYtQEmOM

— CM of Karnataka (@CMofKarnataka) December 3, 2022
share
Next Story
X