Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇವದಾಸಿ ಪದ್ಧತಿ ನಿರ್ಮೂಲನಕ್ಕೆ ಕಾನೂನು...

ದೇವದಾಸಿ ಪದ್ಧತಿ ನಿರ್ಮೂಲನಕ್ಕೆ ಕಾನೂನು ಕಟ್ಟುನಿಟ್ಟಿನ ಅನುಷ್ಠಾನ: ಸಚಿವ ಹಾಲಪ್ಪ ಆಚಾರ್

8 Dec 2022 7:24 PM IST
share
ದೇವದಾಸಿ ಪದ್ಧತಿ ನಿರ್ಮೂಲನಕ್ಕೆ ಕಾನೂನು ಕಟ್ಟುನಿಟ್ಟಿನ ಅನುಷ್ಠಾನ: ಸಚಿವ ಹಾಲಪ್ಪ ಆಚಾರ್

ಬೆಂಗಳೂರು, ಡಿ.8: ರಾಜ್ಯದಲ್ಲಿ ಬಾಲ್ಯವಿವಾಹ ತಡೆಗಟ್ಟಲು ಇರುವ ಕಠಿಣ ಕ್ರಮಗಳಂತೆಯೇ, ದೇವದಾಸಿ ಪದ್ಧತಿಯ ಆಚರಣೆಯನ್ನು ತಡೆಗಟ್ಟಲು ಇರುವ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನದ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ವಿಧಾನಸೌಧದಲ್ಲಿ ನಡೆದ ‘ಮಾಜಿ ದೇವದಾಸಿ ಮಹಿಳೆಯರ ಮತ್ತು ಮಕ್ಕಳ ಕುಂದು ಕೊರತೆಗಳು ಹಾಗೂ ಅವುಗಳಿಗೆ ಇರುವ ಪರಿಹಾರಗಳು’ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಾಲ್ಯ ವಿವಾಹವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲಾಗುತ್ತಿದೆ. ಯಾವುದೇ ಬಾಲ್ಯವಿವಾಹ ನಡೆದಾಗ ಅದರಲ್ಲಿ ಭಾಗಿಯಾಗುವವರನ್ನ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುತ್ತಿದೆ ಎಂದರು.

ಇದರಿಂದ ಬಾಲ್ಯವಿವಾಹದಲ್ಲಿ ತೊಡಗಿಕೊಳ್ಳುವವರ ಸಂಖ್ಯೆ ಪರಿಣಾಮಕಾರಿಯಾಗಿ ಕಡಿಮೆ ಆಗಿದೆ. ಆದರೆ, ದೇವದಾಸಿ ಪದ್ಧತಿಗೆ ಇನ್ನು ಹಲವು ಮಹಿಳೆಯರನ್ನ ಕಾನೂನುಬಾಹಿರವಾಗಿ ತಳ್ಳಲಾಗುತ್ತಿದೆ. ಇದನ್ನ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಇರುವ ಕಾನೂನಿನ ಕಟ್ಟುನಿಟ್ಟಿನ ಬಳಕೆ ಆಗಬೇಕಿದೆ ಎಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಗೆ ಬಾಲ್ಯ ವಿವಾಹ ತಡೆಗಟ್ಟಲು ಇರುವ ಅಧಿಕಾರದಂತೆಯೆ ಕಠಿಣವಾದ ಕ್ರಮಗಳನ್ನ ದೇವದಾಸಿ ಪದ್ಧತಿಗೆ ಹೊಸದಾಗಿ ಮಹಿಳೆಯರನ್ನ ತಳ್ಳುವವರ ವಿರುದ್ಧ ಕೈಗೊಳ್ಳಬೇಕು, ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಲಪ್ಪ ಆಚಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ರಾಜ್ಯಾದ್ಯಂತ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಇದರಿಂದ ಬಾಲ್ಯವಿವಾಹದಂತಹ ಪ್ರಕರಣಗಳು ಬಹಳಷ್ಟು ಕಡಿಮೆಯಾಗಿವೆ. ಇದೇ ರೀತಿಯಲ್ಲಿ ದೇವದಾಸಿ ಪದ್ಧತಿಯ ನಿಷೇಧದ ಬಗ್ಗೆ, ಕಾನೂನು ಬಾಹಿರವಾಗಿ ಮಹಿಳೆಯರನ್ನ ದೇವದಾಸಿಯನ್ನಾಗಿಸುವವರ ವಿರುದ್ಧ ಕೈಗೊಳ್ಳುವ ಕಠಿಣ ಶಿಕ್ಷೆಯ ಬಗ್ಗೆ, ದೇವದಾಸಿ ಪದ್ಧತಿಗೆ ಒಳಗಾಗುತ್ತಿರುವವರ ರಕ್ಷಣೆಗೆ ಇರುವ ಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಅವರು ಸೂಚಿಸಿದರು.

ಮಾಜಿ ದೇವದಾಸಿಯರ ಬಗ್ಗೆ ಸಮೀಕ್ಷೆ: 1993 ಮತ್ತು 94ರಲ್ಲಿ ಹಾಗೂ 2007 ಮತ್ತು 08 ರಲ್ಲಿ ದೇವದಾಸಿಯರ ಬಗ್ಗೆ ಸಮೀಕ್ಷೆ ನಡೆಸಲಾಗಿದೆ. ವಲಸೆ, ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗುವ ಭಯದಂತಹ ಕಾರಣಗಳಿಂದ ಹಲವಾರು ದೇವದಾಸಿಯರು ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇನ್ನೊಮ್ಮೆ ಸಮೀಕ್ಷೆ ನಡೆಸುವುದು ಸೂಕ್ತ. ಇದರಿಂದ ರಾಜ್ಯದಲ್ಲಿರುವ ಮಾಜಿ ದೇವದಾಸಿಯರ ಸಂಖ್ಯೆ, ದೇವದಾಸಿ ನಿಷೇಧ ಅಧಿನಿಯಮದ ಅನುಷ್ಠಾನದ ಪರಿಣಾಮಗಳನ್ನು ತಿಳಿದುಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಹಾಲಪ್ಪ ಆಚಾರ್ ಸೂಚನೆ ನೀಡಿದರು.

ಶಿಕ್ಷಣ ಇಲಾಖೆಯ ನಮೂನೆಗಳಲ್ಲಿ ಮಾಜಿ ದೇವದಾಸಿಯರ ಮಕ್ಕಳ ತಂದೆ ಹೆಸರು ಕಡ್ಡಾಯವಾಗಿರದೆ, ಐಚ್ಚಿಕವಾಗಿರುವಂತೆ ಮಾಡುವ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸುವಂತೆ ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯಾರ್ಥಿಗಳ ವೇತನ, ಹಾಸ್ಟೆಲ್, ಶಾಲಾ, ಕಾಲೇಜಿನ ಸೀಟಿನಲ್ಲಿ ಮಾಜಿ ದೇವದಾಸಿ ಮಕ್ಕಳಿಗೆ ಒಳ ಮೀಸಲಾತಿಯನ್ನು ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಚರ್ಚಿಸಲಾಯಿತು.

ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಈಗಾಗಲೇ ನಿವೇಶನ ರಹಿತ ಅಲೆಮಾರಿ ಸಮುದಾಯಕ್ಕೆ ನೀಡುತ್ತಿರುವ ವಸತಿ ಸೌಲಭ್ಯದ ಮಾದರಿಯಂತೆ ಮಾಜಿ ದೇವದಾಸಿಯರಿಗೆ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆಯೂ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳ ಉಪಸ್ಥಿತರಿದ್ದರು.

share
Next Story
X