Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲೆಯಲ್ಲಿ ಅಸ್ವಸ್ಥರಾದ...

ಶಾಲೆಯಲ್ಲಿ ಅಸ್ವಸ್ಥರಾದ ವಿದ್ಯಾರ್ಥಿನಿಯರಿಗೆ 'ಮಾಂತ್ರಿಕ'ನಿಂದ ಚಿಕಿತ್ಸೆ: ಉತ್ತರಪ್ರದೇಶ ಸರಕಾರಕ್ಕೆ NHRC ನೋಟಿಸ್

24 Dec 2022 8:39 PM IST
share
ಶಾಲೆಯಲ್ಲಿ ಅಸ್ವಸ್ಥರಾದ ವಿದ್ಯಾರ್ಥಿನಿಯರಿಗೆ ಮಾಂತ್ರಿಕನಿಂದ ಚಿಕಿತ್ಸೆ: ಉತ್ತರಪ್ರದೇಶ ಸರಕಾರಕ್ಕೆ NHRC ನೋಟಿಸ್

ಹೊಸದಿಲ್ಲಿ: ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲು ‘ಮಂತ್ರವಾದಿ’(Magician) ಎನ್ನಲಾದ ವ್ಯಕ್ತಿಯೊಬ್ಬನನ್ನು ಮಹೋಬ ಜಿಲ್ಲೆಯ ಸರಕಾರಿ ಶಾಲೆಯೊಂದರ ಆಡಳಿತವು ಕರೆಸಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ (NHRC)ವು ಶುಕ್ರವಾರ ಉತ್ತರಪ್ರದೇಶ ಸರಕಾರಕ್ಕೆ ನೋಟಿಸ್ ನೀಡಿದೆ.

ಡಿಸೆಂಬರ್ 20ರಂದು, 15 ವಿದ್ಯಾರ್ಥಿನಿಯರು ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಅಸ್ವಸ್ಥರಾದರು. ಆಗ ಶಾಲಾ ಆಡಳಿತವು ಅವರಿಗೆ ಚಿಕಿತ್ಸೆ ನೀಡುವುದಕ್ಕಾಗಿ ಓರ್ವ ಮಂತ್ರವಾದಿಯನ್ನು ಕರೆಸಿಕೊಂಡಿತು ಎಂದು ‘ಆಜ್ ತಕ್’ ವರದಿ ಮಾಡಿದೆ. ಆದರೆ, ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಎಂದು ವರದಿಯಾಗಿದೆ.

‘ಮಂತ್ರವಾದಿ’ಯು ವಿದ್ಯಾರ್ಥಿನಿಯರಿಗೆ ‘ಚಿಕಿತ್ಸೆ’ ನೀಡುವುದನ್ನು ತೋರಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಮಾಧ್ಯಮ ವರದಿಗಳ ವಿಷಯವು ನಿಜವೆಂದಾದರೆ, ವಿದ್ಯಾರ್ಥಿಗಳ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಹೇಳಿದೆ.

‘‘ಅದೂ ಅಲ್ಲದೆ, ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಊಟವನ್ನು ಪೂರೈಸಿರುವಂತೆ ಕಂಡುಬರುತ್ತದೆ. ಅದರಿಂದಾಗಿಯೇ ಅವರು ಅಸ್ವಸ್ಥರಾಗಿದ್ದಾರೆ. ಇದು ಸಂಬಂಧಿತ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂಬ ಅಭಿಪ್ರಾಯವನ್ನೂ ಆಯೋಗ ಹೊಂದಿದೆ’’ ಎಂದು ಅದು ಹೇಳಿದೆ. ‘‘ಎಲ್ಲಕ್ಕಿಂತ ಹೆಚ್ಚಾಗಿ, ಶಾಲಾ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ದೃಷ್ಟಿಕೋನವನ್ನು ಬೆಳೆಸಬೇಕಲ್ಲದೆ, ಇಂಥ ಮೂಢನಂಬಿಕೆಗಳನ್ನು ಅವರಲ್ಲಿ ಬಿತ್ತಬಾರದು’’ ಎಂಬುದಾಗಿಯೂ NHRC ಹೇಳಿದೆ.

ನಾಲ್ಕು ವಾರಗಳಲ್ಲಿ ಉತ್ತರ ನೀಡುವಂತೆ ಆಯೋಗವು ಉತ್ತರಪ್ರದೇಶ ಸರಕಾರಕ್ಕೆ ಸೂಚಿಸಿದೆ. ‘‘ರಾಜ್ಯದಲ್ಲಿ ಇನ್ನು ಮುಂದೆ ಇಂಥ ಘಟನೆಗಳು ಮರಳದಂತೆ ನೋಡಿಕೊಳ್ಳಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಅಥವಾ ತೆಗೆದುಕೊಳ್ಳಲಾಗುವುದು ಎನ್ನುವುದನ್ನೂ ವಿವರಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಲಾಗಿದೆ’’ ಎಂದು ಆಯೋಗ ಹೇಳಿದೆ.

share
Next Story
X