Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುರಕ್ಷತೆ ಮುಖ್ಯ, ಕಾಶ್ಮೀರಿ ಪಂಡಿತರನ್ನು...

ಸುರಕ್ಷತೆ ಮುಖ್ಯ, ಕಾಶ್ಮೀರಿ ಪಂಡಿತರನ್ನು ಜಮ್ಮುಗೆ ಸ್ಥಳಾಂತರಿಸಬೇಕು: ಗುಲಾಂ ನಬಿ ಆಜಾದ್

26 Dec 2022 8:49 PM IST
share
ಸುರಕ್ಷತೆ ಮುಖ್ಯ, ಕಾಶ್ಮೀರಿ ಪಂಡಿತರನ್ನು ಜಮ್ಮುಗೆ ಸ್ಥಳಾಂತರಿಸಬೇಕು: ಗುಲಾಂ ನಬಿ ಆಜಾದ್

ಹೊಸದಿಲ್ಲಿ,ಡಿ.26: ಕಾಶ್ಮೀರಿ ಪಂಡಿತರ ಸುರಕ್ಷತೆಗಾಗಿ ಸೋಮವಾರ ಕರೆ ನೀಡಿದ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್(Ghulam Nabi Azad) ಅವರು,ಕಾಶ್ಮೀರ ಕಣಿವೆಯಲ್ಲಿನ ಸ್ಥಿತಿಯಲ್ಲಿ ಸುಧಾರಣೆಯಾಗುವವರೆಗೂ ಅವರನ್ನು ಜಮ್ಮುವಿಗೆ ಸ್ಥಳಾಂತರಿಸಬೇಕು ಎಂದು ಹೇಳಿದರು. ಈ ವರ್ಷ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆಗಳು ಮತ್ತು ನಾಗರಿಕರ ಹತ್ಯೆಗಳಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪಂಡಿತರ ಕುರಿತು  ಈ ಹೇಳಿಕೆ ಹೊರಬಿದ್ದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆಜಾದ್,‘ನನ್ನ ಅಧಿಕಾರಾವಧಿಯಲ್ಲಿ ಪಂಡಿತರಿಗೆ ಉದ್ಯೋಗಳನ್ನು ನೀಡಲು ಪ್ರಸ್ತಾವವನ್ನು ನಾವು ಮನಮೋಹನ ಸಿಂಗ್ (Manmohan Singh) ಸರಕಾರಕ್ಕೆ ಸಲ್ಲಿಸಿದ್ದೆವು. ಸುಮಾರು 3,000 ಪಂಡಿತರಿಗೆ ಉದ್ಯೋಗಗಳನ್ನು ಒದಗಿಸಲಾಗಿತ್ತು. ಆದರೆ ಆ ಸಮಯದಲ್ಲಿ ಅವರಿಗೆ ಯಾರೂ ತೊಂದರೆಯನ್ನುಂಟು ಮಾಡಿರಲಿಲ್ಲ. ಆದರೆ ಈಗ ಹಲವಾರು ಘಟನೆಗಳು ವರದಿಯಾಗಿವೆ. ಜೀವವು ಅತ್ಯಂತ ಮುಖ್ಯವಾಗಿದೆ. ಸುರಕ್ಷತೆಗಾಗಿ ಕಾಶ್ಮೀರಿ ಪಂಡಿತರನ್ನು ಜಮ್ಮುಗೆ ಸ್ಥಳಾಂತರಿಸಬೇಕು ಎನ್ನುವುದು ನನ್ನ ಸಲಹೆ. ಪರಿಸ್ಥಿತಿಯಲ್ಲಿ ಸುಧಾರಣೆಯಾದ ಬಳಿಕ ಅವರನ್ನು ವಾಪಸ್ ಕರೆಸಬಹುದು ’ಎಂದರು.

‘ಜೀವಗಳಿಗಿಂತ ಉದ್ಯೋಗಗಳು ಹೆಚ್ಚು ಮುಖ್ಯವಲ್ಲ. ಈ ಬಗ್ಗೆ ಈಗಿನ ಆಡಳಿತವು ಏನನ್ನು ಯೋಚಿಸುತ್ತಿದೆ ಎನ್ನುವುದು ನನಗೆ ಖಚಿತವಿಲ್ಲ. ಆದರೆ ನಾವು ಅಧಿಕಾರಕ್ಕೆ ಮರಳಿದರೆ ಅದನ್ನು ಮಾಡುತ್ತೇವೆ. ಸುರಕ್ಷತಾ ಮತ್ತು ಭದ್ರತಾ ಕಳವಳಗಳ ದೃಷ್ಟಿಯಿಂದ ಕಾಶ್ಮೀರಿ ಪಂಡಿತರ ಸ್ಥಳಾಂತರಕ್ಕೆ ಮನವಿಗಳನ್ನು ಮಾಡಲಾಗಿದೆ ’ ಎಂದೂ ಆಜಾದ್ ಹೇಳಿದರು.

share
Next Story
X