Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಾರಾಯಣಪುರ ಎಡದಂಡೆ ಕಾಲುವೆ ಅಕ್ರಮದಲ್ಲಿ...

ನಾರಾಯಣಪುರ ಎಡದಂಡೆ ಕಾಲುವೆ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ಪಟ್ಟಿ ಒದಗಿಸದ ನಿಗಮ

ಆರ್ಥಿಕ ಇಲಾಖೆಯ ನಿರ್ದೇಶನ ಉಲ್ಲಂಘನೆ

ಜಿ.ಮಹಾಂತೇಶ್ಜಿ.ಮಹಾಂತೇಶ್17 Jan 2023 9:01 AM IST
share
ನಾರಾಯಣಪುರ ಎಡದಂಡೆ ಕಾಲುವೆ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ಪಟ್ಟಿ ಒದಗಿಸದ ನಿಗಮ
ಆರ್ಥಿಕ ಇಲಾಖೆಯ ನಿರ್ದೇಶನ ಉಲ್ಲಂಘನೆ

ಬೆಂಗಳೂರು: ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ವಿಸ್ತರಣೆ, ನವೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಂದಾಜಿಸಿದ್ದ ಯೋಜನಾ ಮೊತ್ತಕ್ಕೆ ಸರಕಾರದ ಅನುಮೋದನೆ ಪಡೆಯದೇ ಮತ್ತು ನಿಯಮ ಉಲ್ಲಂಘಿಸಿ ೪೬೫ ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಗುತ್ತಿಗೆ ನೀಡಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ಪಟ್ಟಿಯನ್ನು ಕೃಷ್ಣಭಾಗ್ಯ ಜಲನಿಗಮ ಒದಗಿಸಿಲ್ಲ. ಪಟ್ಟಿ ಒದಗಿಸಬೇಕು ಎಂಬ ಆರ್ಥಿಕ ಇಲಾಖೆಯ ನಿರ್ದೇಶನವನ್ನೂ ನಿಗಮವು ಉಲ್ಲಂಘಿಸಿದೆ.

ಹಾಗೆಯೇ ನಿಗಮದ ಅಧಿಕಾರಿಗಳು ನೀಡಿದ್ದ ಸಮಜಾಯಿಷಿಯನ್ನು ಆರ್ಥಿಕ ಇಲಾಖೆಯು ಒಪ್ಪಿಲ್ಲ.  ಅಲ್ಲದೇ ಸಚಿವ ಸಂಪುಟದ ಅನುಮೋದನೆಯನ್ನೇ ಪಡೆಯದೇ ಟೆಂಡರ್ ಆಹ್ವಾನಿಸಿದ್ದಲ್ಲದೇ ಕಾಮಗಾರಿಯನ್ನೂ ಕೈಗೆತ್ತಿಕೊಂಡಿರುವುದನ್ನು ''the-file.in'' ಇದೀಗ ದಾಖಲೆ ಸಹಿತ ಬಹಿರಂಗಗೊಳಿಸುತ್ತಿದೆ. ಈ ಕುರಿತು ''the-file.in'' 500 ಕ್ಕೂ ಹೆಚ್ಚು ಪುಟಗಳನ್ನೊಳಗೊಂಡಿರುವ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

465 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಿಯಮಗಳ ಉಲ್ಲಂಘನೆ ಕುರಿತು ಕೃಷ್ಣಭಾಗ್ಯ ಜಲನಿಗಮದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದರು. ‘ಕಾಮಗಾರಿಗೆ ಸಂಬಂಧಿಸಿದಂತೆ ಕೃಷ್ಣಭಾಗ್ಯ ಜಲನಿಗಮ ನಿಯಮಿತದ ನಿರ್ದೇಶಕರ ಮಂಡಳಿ ಸಭೆಯು ಅನುಮೋದನೆಗಳಿಗೆ ಸಕ್ಷಮ ಪ್ರಾಧಿಕಾರವಾಗಿದ್ದು ಸದರಿ ಮಂಡಳಿ ಅನುಮೋದನೆಯಂತೆ ಅಧಿಕಾರಿಗಳು ಕಾರ್ಯನಿರ್ವಹಿಸಿರುತ್ತಾರೆ. ಹಾಗೂ ಇದರಲ್ಲಿ ಯಾವುದೇ ಲೋಪದೋಷವಾಗಿರುವುದಿಲ್ಲ. ಇದಕ್ಕೆ ಯಾವುದೇ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವ ಪ್ರಮೇಯ ಉದ್ಭವಿಸುವುದಿಲ್ಲ,’ ಎಂದು ಆರ್ಥಿಕ ಇಲಾಖೆಗೆ ಸಮಜಾಯಿಷಿ  ನೀಡಿತ್ತು.

ಸಮಜಾಯಿಷಿ ಒಪ್ಪದ ಆರ್ಥಿಕ ಇಲಾಖೆ: ‘ಕರ್ನಾಟಕ ಸರಕಾರ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ಮೊದಲನೇ ಅನುಸೂಚಿಯ 15() ಪ್ರಕಾರ ಮೂಲ ಅಂದಾಜು 10.00 ಕೋಟಿ ರೂ. ಮೀರಿದಲ್ಲಿ ಮತ್ತು ಪರಿಷ್ಕೃತ ಅಂದಾಜುಗಳು ಮೂಲ ಅಂದಾಜುಗಳಿಗಿಂತ ಶೇ.25ರಷ್ಟು ಅಥವಾ 10.00 ಕೋಟಿ ರೂ. ಗಳಷ್ಟು ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟನ್ನು ಮೀರಿದರೇ ಅದನ್ನು ಮತ್ತೆ ಸಚಿವ ಸಂಪುಟದ ಮುಂದೆ ಮಂಡಿಸಿ ಆಡಳಿತಾತ್ಮಕ ಅನುಮೋದನೆ ಪಡೆಯಬೇಕಾಗುತ್ತದೆ. ಆದ್ದರಿಂದ ಇಲಾಖೆಯು ನೀಡಿರುವ ಸ್ಪಷ್ಟೀಕರಣವನ್ನು ಒಪ್ಪಲು ಸಾಧ್ಯವಿರುವುದಿಲ್ಲ,’ ಎಂದು ಆರ್ಥಿಕ ಇಲಾಖೆಯ ವಿಶೇಷ ಅಧಿಕಾರಿ ವೈ.ಬಿ.ಹೊನ್ನಲಿಂಗಪ್ಪಅವರು ಟಿಪ್ಪಣಿಯಲ್ಲಿ ದಾಖಲಿಸಿದ್ದಾರೆ.

 ಅಡಳಿತ ಇಲಾಖೆಯು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ, ಅರ್ಥಿಕ ಇಲಾಖೆಯ ಗಮನಕ್ಕೂ ತರದೇ ರೂ. 465.00 ಕೋಟಿ ರೂ.ಗಳ ಕಾಮಗಾರಿಗಳಿಗೆ ಗುತ್ತಿಗೆ ನೀಡಿ ಕೈಗೆತ್ತಿಕೊಂಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರ್ಥಿಕ ಇಲಾಖೆಯು ಬಲವಾದ ಆಕ್ಷೇಪ ಎತ್ತಿತ್ತು. 

ಈ ಸಂಬಂಧ ಸದರಿ ಪ್ರಕ್ರಿಯೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಹಾಗೂ ಸದರಿ ಪ್ರಸ್ತಾವನೆಗೆ ವೆಚ್ಚ ಭರಿಸಲು ಇಲಾಖೆಯಡಿ ಯಾವ non-grounded  ಕಾಮಗಾರಿಗಳನ್ನು ಕಡಿತಗೊಳಿಸಲಾಗುವುದು ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ಅರ್ಥಿಕ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಕೆ ಗಾಯಿತ್ರಿ ಅವರು 2022ರ ಸೆಪ್ಟಂಬರ್ 13ರಂದು ಜಲಸಂಪನ್ಮೂಲ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X