Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಂತ್ರಜ್ಞಾನ ಅಭಿವೃದ್ಧಿ ಮೂಲಕ ಬಲಿಷ್ಠ...

ತಂತ್ರಜ್ಞಾನ ಅಭಿವೃದ್ಧಿ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಧಾರವಾಡದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ

28 Jan 2023 6:49 PM IST
share
ತಂತ್ರಜ್ಞಾನ ಅಭಿವೃದ್ಧಿ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಧಾರವಾಡದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ

ಬೆಂಗಳೂರು, ಜ. 28: ಅಪರಾಧ ಕೃತ್ಯಗಳನ್ನು ಸಾಭೀತುಪಡಿಸಲು ಥರ್ಡ್ ಡಿಗ್ರಿ ಟ್ರಿಟ್‍ಮೆಂಟ್ ಕಾಲಈಗಿಲ್ಲ. ಆದರೆ, ಕಾನೂನಾತ್ಮಕವಾಗಿ ಆರೋಪಿಗೆ ಶಿಕ್ಷೆ ಆಗುವಂತೆ ಮಾಡಲು ವಿಧಿ ವಿಜ್ಞಾನ ಆಧಾರಿತ ಸಾಕ್ಷ್ಯ ಸಂಗ್ರಹ ಅಗತ್ಯ. ಈ ನಿಟ್ಟಿನಲ್ಲಿ ವಿಧಿ ವಿಜ್ಞಾನ ವಿವಿಗಳ ಸ್ಥಾಪನೆಯೂ ಸಹಕಾರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ರಾಷ್ಟೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯದ 9ನೆ ಕ್ಯಾಂಪಸ್‍ಗೆ ಭೂಮಿಪೂಜೆ ನೆರವೇರಿಸಿಮಾತನಾಡಿದ ಅವರು, ದೇಶದಲ್ಲಿ ಸದ್ಯಲ್ಲಿರುವ ಭಾರತೀಯ ದಂಡ ಸಂಹಿತೆ(ಐಪಿಸಿ), ಸಿಆರ್‍ಪಿಸಿ, ಸಾಕ್ಷ್ಯ ಸಂಗ್ರಹ ಕಾಯ್ದೆಗಳಿಗೆ ಅಗತ್ಯ ತಿದ್ದುಪಡಿ ತರುವುದರ ಜತೆಗೆ, ವಿಧಿ ವಿಜ್ಞಾನ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಿಸಲಾಗುವುದು ಎಂದು ಹೇಳಿದರು.

ಕೇಂದ್ರ ಗೃಹಸಚಿವ ಲಾಲ್‍ಕೃಷ್ಣ ಅಡ್ವಾಣಿ ಅವರು 2002ರಲ್ಲಿ ಮೊದಲಬಾರಿಗೆ ವಿಧಿ ವಿಜ್ಞಾನ ನಿರ್ದೇಶನಾಲಯ ಆರಂಭಿಸಿದರು. ಅದರ ಆಧಾರದಲ್ಲಿ ಗುಜರಾತ್ ಸಿಎಂ ಆಗಿದ್ದ ಮೋದಿ ಅವರು ವಿಧಿ ವಿಜ್ಞಾನ ಪ್ರಯೋಗಾಲಯ ಆರಂಭಿಸುವ ಯೋಜನೆ ರೂಪಿಸಿದರು. ಮೂಲಸೌಕರ್ಯ ಕಲ್ಪಿಸಿದರೂ ತಜ್ಞರ ಕೊರತೆ ಎದುರಾಯಿತು. ಇದನ್ನು ನಿಗಿಸಲು ವಿಧಿ ವಿಜ್ಞಾನ ವಿಷಯ ಕೋರ್ಸ್ ಆರಂಭಿಸಲು ಗುಜರಾತ್ ಸರಕಾರ ನಿರ್ಧರಿಸಿ ವಿವಿ ಆರಂಭಿಸಿತು ಎಂದು ಅವರು ವಿವರಿಸಿದರು.

ಆದರೆ, ವಿವಿಯಿಂದ ಹೊರ ಬರುತ್ತಿರುವ ಪರಿಣಿತರ ಸಂಖ್ಯೆ ಕಡಿಮೆ ಇದ್ದ ಕಾರಣ ವಿವಿಧ ರಾಜ್ಯಗಳಲ್ಲಿ ವಿವಿಗಳ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. ಇದರಿಂದ ದೇಶದ ವಿಧಿ ವಿಜ್ಞಾನ ಕ್ಷೇತ್ರಕ್ಕೆ ಆಗತ್ಯ ಇರುವ 8ರಿಂದ 10 ಸಾವಿರ ತಜ್ಞರು ಸಿಗಲಿದ್ದಾರೆ ಎಂದ ಅವರು, ವಿಧಿ ವಿಜ್ಞಾನ ಕೋರ್ಸ್ ಮೂಲಕ 12ನೆ ತರಗತಿ ನಂತರ ಈ ಕೋರ್ಸ್ ಕಲಿಯಬಹುದು. ಇದರಿಂದ ಶೇ.100 ರಷ್ಟು ಉದ್ಯೋಗ ಖಾತ್ರಿ ಇರಲಿದೆ ಎಂದು ಹೇಳಿದರು.

ಜಗತ್ತಿನ ಇತರ ರಾಷ್ಟ್ರಗಳ ಸಮನಾಗಿ ನಿಲ್ಲಬೇಕಾದರೆ ದೇಶದ ವಿಧಿ ವಿಜ್ಞಾನ ಕ್ಷೇತ್ರ ಬಲಿಷ್ಠಗೊಳಿಸಬೇಕು. ಅದಕ್ಕೆ ಅಗತ್ಯವಿರುವ ತಜ್ಞರನ್ನು ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಾರಂಭವಾದ ಧಾರವಾಡದ ಈ ವಿವಿ ಕ್ಯಾಂಪಸ್ ರಾಜ್ಯದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ ಹಾಗೂ ಪೊಲೀಸ್ ವ್ಯವಸ್ಥೆ ಬಲಿಷ್ಠಗೊಳಿಸಲು ಸಹಕಾರಿ ಎಂದು ಅಮಿತ್ ಶಾ ನುಡಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಕುಲಪತಿ ಡಾ.ವ್ಯಾಸ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ. ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ರಜನಿಶ್ ಗೊಯಲ್, ರಾಜ್ಯ  ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಇನ್ನಿತರರು ಹಾಜರಿದ್ದರು.

share
Next Story
X