Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಾಂಧೀಜಿಯವರ ಮಾರ್ಗದಲ್ಲಿ ನಡೆಯುವ ಸಂಕಲ್ಪ...

ಗಾಂಧೀಜಿಯವರ ಮಾರ್ಗದಲ್ಲಿ ನಡೆಯುವ ಸಂಕಲ್ಪ ಮಾಡಬೇಕು: ಬಸವರಾಜ ಬೊಮ್ಮಾಯಿ

30 Jan 2023 1:47 PM IST
share
ಗಾಂಧೀಜಿಯವರ ಮಾರ್ಗದಲ್ಲಿ ನಡೆಯುವ ಸಂಕಲ್ಪ ಮಾಡಬೇಕು: ಬಸವರಾಜ ಬೊಮ್ಮಾಯಿ

ಬೆಂಗಳೂರು, ಜ. 30: ಮಹಾತ್ಮಾ ಗಾಂಧೀಜಿಯವರು  ಹುತಾತ್ಮರಾದ ಈ  ದಿನದ  ಬಗ್ಗೆ ನಾವು ಚಿಂತನೆ ಮಾಡಿ ಆತ್ಮಾವಲೋಕನ ಮಾಡಿಕೊಂಡು ಗಾಂಧೀಜಿಯವರ ಮಾರ್ಗದಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವ ಸಂಕಲ್ಪವನ್ನು ಮಾಡಬೇಕು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ವಿಧಾಸೌಧ ಮತ್ತು ವಿಕಾಸಸೌಧದ  ನಡುವಿನ ಮಹಾತ್ಮಾ ಗಾಂಧಿಜೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಎರಡು ನಿಮಿಷಗಳ ಮೌನಾಚರಣೆ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮಹಾತ್ಮಾ ಗಾಂಧಿ ಅವರು ಹೇಳಿರುವಂತೆ ಅವರ  ಜೀವನವೇ ಒಂದು ಸಂದೇಶ. ಅವರ ಜೀವನವನ್ನು ಓದಿ, ತಿಳಿದುಕೊಂಡು, ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ. ಅವರ ಜೀವನದ ಆಧಾರ ನೈತಿಕತೆ ಮತ್ತು ಸತ್ಯ. ಇವೆರಡನ್ನೂ ಅತ್ಯಂತ ಶುದ್ಧವಾಗಿ ಪ್ರತಿಪಾದಿಸಿದ್ದರು. ಸದಾಕಾಲ ತಮ್ಮನ್ನು ತಾವೇ ಪರೀಕ್ಷೆಗೆ ಒಳಪಡಿಸಿಕೊಂಡು ಪರಿಶುದ್ಧವಾಗುತ್ತಿದ್ದರು. ಇಂಥ ಪ್ರಕ್ರಿಯೆ ಗಾಂಧೀಜಿಯವರು ಜೀವನದುದ್ದಕ್ಕೂ ನಡೆಸಿಕೊಂಡು ಬಂದಿರುವುದು ನಾವು ನೋಡುತ್ತೇವೆ. ಅಹಿಂಸೆಯಲ್ಲಿ ಬಹಳ ದೊಡ್ಡ ಶಕ್ತಿ ಇದೆ ಎಂದು ಇಡೀ ಜಗತ್ತಿಗೆ ತೋರಿಸಿಕೊಟ್ಟವರು. ಅಹಿಂಸೆಯಿಂದ  ದೇಶಕ್ಕೆ  ಸ್ವಾತಂತ್ರ್ಯ ತಂದುಕೊಡುವವರಲ್ಲಿ ಮುಂಚೂಣಿಯಲ್ಲಿದ್ದರು ಎಂದರು.

ಹೊಸ ದಿಕ್ಸೂಚಿ: ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಅನಾಮಧೇಯರು ತಮ್ಮ ಆಸ್ತಿಪಾಸ್ತಿ ಗಳನ್ನು ತ್ಯಾಗ ಮಾಡಿದ್ದರು. ಗಟ್ಟಿ ನಿಲುವು ತೆಗೆದುಕೊಂಡು ಹೋರಾಟಕ್ಕೆ ಹೊಸ ದಿಕ್ಸೂಚಿ ನೀಡಿದ ಸುಭಾಶ್ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಲೋಕ ಮಾನ್ಯ ತಿಲಕ್ ಮುಂತಾದವರೂ ಕೂಡ  ಆ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು.  ಇವೆಲ್ಲವನ್ನೂ  ಕ್ರೋಢಿಕರಿಸಿ ಜನಸಾಮಾನ್ಯರಲ್ಲಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಿ ಸತ್ಯಾಗ್ರಹ ನಡೆಸಿ ಆಂದೋಲನ ರೀತಿಯಲ್ಲಿ ಸ್ವಾತಂತ್ರ್ಯ ಹೋರಾಟವನ್ನು ಪರಿವರ್ತನೆ ಮಾಡಿ ಬ್ರಿಟಿಷರ ಜೊತೆ ಕಠಿಣ ಮಾತುಕತೆ ನಡೆಸಿ ದೇಶಕ್ಕೆ ಸ್ವಾತಂತ್ರ್ಯ  ಕೊಡಿಸಿದರು. ಗಾಂಧೀಜಿ ಅವರ ತತ್ವ ಆದರ್ಶಗಳ ಮೇಲೆ ಈ ದೇಶದ ಸಾರ್ವಜನಿಕ ಜೀವನದಲ್ಲಿ ನೈತಿಕತೆ ಬರುವುದು ಅಗತ್ಯವಿದೆ. ಒಂದು ರೀತಿಯಲ್ಲಿ ರಾಷ್ಟ್ರೀಯ ವ್ಯಕ್ತಿತ್ವ ಗಾಂಧಿಜಿಯವರಲ್ಲಿ ಇತ್ತು.‌ ದೇಶಕ್ಕೆ ಬಹಳ ದೊಡ್ಡ ಚರಿತ್ರೆ ಇದೆ. ಬೇಕಾಗಿರುವುದು ಚಾರಿತ್ರ್ಯ . ಅವರಿಗೆ ಭಾವಪೂರ್ವಕವಾಗಿ, ಹೃದಯದಂತರಾಳದಿಂದ, ಶ್ರದ್ಧಾಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ ಎಂದರು.

ಆಯವ್ಯಯದಲ್ಲಿ ದುಡಿಯುವ ವರ್ಗಕ್ಕೆ ಆದ್ಯತೆ: ಬಜೆಟ್ ನಲ್ಲಿ ಎಲ್ಲ ವರ್ಗದವರಿಗೆ ಆದ್ಯತೆ ನೀಡಲಾಗುತ್ತದೆ. ರೈತರು, ಮಹಿಳೆಯರು, ಕಾರ್ಮಿಕರು ಎಲ್ಲರಿಗೂ, ವಿಶೇಷವಾಗಿ ದುಡಿಯುವ ವರ್ಗಕ್ಕೆ  ಆದ್ಯತೆ ನೀಡಲಾಗುತ್ತದೆ. ಆರ್ಥಿಕವಾಗಿ ಅವರನ್ನು ಮೇಲೆತ್ತುವ ಕೆಲಸ ಪ್ರಾಥಮಿಕವಾಗಿ ಆಗಬೇಕು. ಆ ನಿಟ್ಟಿನಲ್ಲಿ  ಕಾರ್ಯಕ್ರಮಗಳು ಇರಲಿವೆ  ಎಂದರು.

ಸಚಿವ ಸಂಪುಟ ವಿಸ್ತರಣೆ: ಸಂಪುಟ ವಿಸ್ತರಣೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

share
Next Story
X