Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಲ್ಲೇಶ್ವರಂ: ಸಚಿವ ಡಾ.ಅಶ್ವತ್ಥನಾರಾಯಣರ...

ಮಲ್ಲೇಶ್ವರಂ: ಸಚಿವ ಡಾ.ಅಶ್ವತ್ಥನಾರಾಯಣರ ಹುಟ್ಟುಹಬ್ಬ ಆಚರಣೆ

2 Feb 2023 12:55 PM IST
share
ಮಲ್ಲೇಶ್ವರಂ: ಸಚಿವ ಡಾ.ಅಶ್ವತ್ಥನಾರಾಯಣರ ಹುಟ್ಟುಹಬ್ಬ ಆಚರಣೆ

ಬೆಂಗಳೂರು, ಫೆ.2: ಉನ್ನತ ಶಿಕ್ಷಣ ಸಚಿವ ಮತ್ತು ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ 54ನೇ ಹುಟ್ಟುಹಬ್ಬವನ್ನು ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯ ಹಲವೆಡೆಗಳಲ್ಲಿ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಸಮ್ಮುಖದಲ್ಲಿ ಗುರುವಾರ ಆಚರಿಸಲಾಯಿತು. ಸಚಿವರು ಎಲ್ಲರೊಂದಿಗೂ ಖುಷಿಯಿಂದ ಕಲೆತು, ಶುಭಾಶಯಗಳನ್ನು ಸ್ವೀಕರಿಸಿದರು.

ಬೆಳಿಗ್ಗೆ 6 ಗಂಟೆಗೆ ಆರಂಭವಾದ ಹುಟ್ಟುಹಬ್ಬದ ಆಚರಣೆಯು ಆರ್.ಎಂ.ವಿ. ಉದ್ಯಾನ, ಡಾ.ಶಿವಪ್ರಸಾದ್ ಉದ್ಯಾನವನ, ಸ್ಯಾಂಕಿ ಕೆರೆ, ಸುಬ್ರಹ್ಮಣ್ಯ ನಗರ, ಪ್ಯಾಲೇಸ್ ಗುಟ್ಟಹಳ್ಳಿ ಮತ್ತು ಮಲ್ಲೇಶ್ವರಂ 8ನೇ ಅಡ್ಡರಸ್ತೆಗಳಲ್ಲಿ ನಡೆಯಿತು.  ಯತಿರಾಜ ಮಠಕ್ಕೆ ತೆರಳಿ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಎಲ್ಲೆಡೆಗಳಲ್ಲೂ ಅಭಿಮಾನಿಗಳು ಕೇಕ್ ಕತ್ತರಿಸಿ, ನೆರೆದಿದ್ದ ಜನರಿಗೆ ವಿತರಿಸಿದರು; ಜತೆಗೆ ಎಲ್ಲೆಡೆಗಳಲ್ಲೂ ನೆರೆದಿದ್ದವರಿಗೆ ಉಪಾಹಾರ ಮತ್ತು ಭೋಜನ ವ್ಯವಸ್ಥೆ ಮಾಡಲಾಗಿತ್ತು.

ಮಲ್ಲೇಶ್ವರಂ 8ನೇ ಅಡ್ಡರಸ್ತೆಯಲ್ಲಿ ಅಲ್ಲಿನ ಬೀದಿಬದಿ ವ್ಯಾಪಾರಿಗಳು ಸಚಿವರ ಹುಟ್ಟುಹಬ್ಬ ಏರ್ಪಡಿಸಿ, ಬೃಹತ್ ಸೇಬಿನ ಹಾರ ಹಾಕಿ ಸಂಭ್ರಮಿಸಿದರು. ಜತೆಗೆ ಅವರೆಲ್ಲ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ, ನೋಟ್ ಬುಕ್ ಮತ್ತು ಬ್ಯಾಗ್ ಗಳನ್ನು ವಿತರಿಸಿದರು.

ಸ್ಯಾಂಕಿ ಉದ್ಯಾನದಲ್ಲಿ ಸಚಿವರು ಬೆಳಗಿನ ವಾಯುವಿಹಾರಿಗಳ ಜತೆ ಒಂದು ಗಂಟೆಗೂ ಹೆಚ್ಚು ಹೊತ್ತು ಕಳೆದು, ಶುಭಾಶಯಗಳನ್ನು ಸ್ವೀಕರಿಸಿದರು. ಸುಬ್ರಹ್ಮಣ್ಯ ನಗರದಲ್ಲಿ ಸಚಿವರ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ಸುಬ್ರಹ್ಮಣ್ಯ ನಗರ ಕ್ರಿಕೆಟ್ ಕ್ಲಬ್ ಏರ್ಪಡಿಸಿದ್ದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ವಿಜೇತ ತಂಡಗಳಿಗೆ ಬಹುಮಾನ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕಿ ಕಾವೇರಿ ಕೇದಾರನಾಥ್, ಸುರೇಶ್ ಗೌಡ, ಜೈಪಾಲ್ ಮುಂತಾದವರು ಭಾಗವಹಿಸಿದ್ದರು.

15 ದಿನಗಳಲ್ಲಿ ಡಾಮರೀಕರಣ: ಸುಬ್ರಹ್ಮಣ್ಯ ನಗರದಲ್ಲಿ ಮಾತನಾಡಿದ ಸಚಿವರು, ಇನ್ನು 15 ದಿನಗಳಲ್ಲಿ ಬಡಾವಣೆಯ ಎಲ್ಲ ರಸ್ತೆಗಳನ್ನೂ ಡಾಮರೀಕರಣ ಮಾಡಲಾಗುವುದು. ಜತೆಗೆ ಒಂದು ತಿಂಗಳಲ್ಲಿ ಬಡಾವಣೆಯಲ್ಲಿ ನಮ್ಮ ಕ್ಲಿನಿಕ್, ಡಿಜಿಟಲ್ ಕ್ಲಿನಿಕ್ ಮತ್ತು ವರ್ಚುಯಲ್ ಕ್ಲಿನಿಕ್ ಉದ್ಘಾಟಿಸಲಾಗುವುದು" ಎಂದರು.

ಕೇರಳದಲ್ಲಿ ವಿಶೇಷ ಪೂಜೆ: ಸಚಿವರ ಹುಟ್ಟುಹಬ್ಬದ ಪ್ರಯುಕ್ತ ಕೇರಳದ ತಿರುವನಂತಪುರದ ಅನಂತ ಪದ್ಮನಾಭ ಮತ್ತು ಗುರುವಾಯೂರಿನ ಕೃಷ್ಣ ದೇಗುಲ ಸೇರಿದಂತೆ ಅಲ್ಲಿನ 60 ದೇವಾಲಯಗಳಲ್ಲಿ ಚಲನಚಿತ್ರ ನಿರ್ದೇಶಕ ವಿಜೀಶ್ ವಿಶೇಷ ಪೂಜೆ ಏರ್ಪಡಿಸಿದ್ದರು.

ನಮ್ಮ ಮಲ್ಲೇಶ್ವರದ ಸನ್ನಿಧಿ ಹಾಗೂ ನಂದಿನಿ ಎಂಬ ಇಬ್ಬರು ಪುಟ್ಟ ಮಕ್ಕಳು ನೀಡಿರುವ ಜನ್ಮ ದಿನದ ಉಡುಗೊರೆ. ನಿಷ್ಕಲ್ಮಶ ಮನಸ್ಸುಗಳಿಗೆ ನನ್ನ ಪ್ರೀತಿ ಪೂರ್ವಕ ಧನ್ಯವಾದಗಳು. pic.twitter.com/8yedkoxJ1c

— Dr. Ashwathnarayan C. N. (@drashwathcn) February 2, 2023
share
Next Story
X