Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸರಕಾರದ ಯೋಜನೆಗಳು ಪ್ರಗತಿಯಲ್ಲಿವೆಯೇ...

ಸರಕಾರದ ಯೋಜನೆಗಳು ಪ್ರಗತಿಯಲ್ಲಿವೆಯೇ ವಿನಃ ಪೂರ್ಣಗೊಂಡಿಲ್ಲ

ಜಿ.ಮಹಾಂತೇಶ್ಜಿ.ಮಹಾಂತೇಶ್6 Feb 2023 8:54 AM IST
share
ಸರಕಾರದ ಯೋಜನೆಗಳು ಪ್ರಗತಿಯಲ್ಲಿವೆಯೇ ವಿನಃ ಪೂರ್ಣಗೊಂಡಿಲ್ಲ

ಬೆಂಗಳೂರು: ಬೆಂಗಳೂರು ಜಲಮಂಡಳಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯ ಹೆಚ್ಚಿಸುವುದು ಸೇರಿದಂತೆ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ 2022-23ನೇ ಸಾಲಿನಲ್ಲಿ ಘೋಷಿಸಿದ್ದ ಮುಂದುವರಿದ ಯೋಜನೆಗಳು ಪ್ರಗತಿಯಲ್ಲಿವೆಯೇ ವಿನಃ ವರ್ಷ ಕಳೆದರೂ ಪೂರ್ಣಗೊಂಡಿಲ್ಲ.

2023-24ನೇ ಸಾಲಿನ ಆಯವ್ಯಯವನ್ನು ಇದೇ 10ರಂದು ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಜ್ಜ್ಜಾಗುತ್ತಿರುವ ಹೊತ್ತಿನಲ್ಲಿಯೇ 2022-23ನೇ ಸಾಲಿನ ಆಯವ್ಯಯ ಕಂಡಿಕೆಗಳ ವಿವರ ಮತ್ತು ವಸ್ತುಸ್ಥಿತಿ ಕುರಿತು ನಗರಾಭಿವೃದ್ಧಿ ಇಲಾಖೆಯು ಸಲ್ಲಿಸಿರುವ ವಿವರಗಳು ಮುನ್ನೆಲೆಗೆ ಬಂದಿವೆ. ಇದರ ವಿವರಗಳನ್ನೊಳಗೊಂಡ ಪ್ರತಿಯು ’'ಣhe-ಜಿiಟe.i’’ಗೆ ಲಭ್ಯವಾಗಿವೆ.

 ಬೆಂಗಳೂರು ನಗರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 6,000 ಕೋಟಿ ರೂ. ವೆಚ್ಚದಲ್ಲಿ ಅಮೃತ್ ನಗರೋತ್ಥಾನ ಯೋಜನೆ ಭಾಗವಾಗಿ ರಸ್ತೆ ಅಭಿವೃದ್ಧಿ, ಗ್ರೇಡ್ ಸೆಪರೇಟರ್, ಕೆರೆ ಅಭಿವೃದ್ಧಿ, ಬೃಹತ್ ನೀರುಗಾಲುವೆ ಅಭಿವೃದ್ಧಿ, ಉದ್ಯಾನಗಳ ಅಭಿವೃದ್ಧಿ ಚಟುವಟಿಕೆ, ಘನತ್ಯಾಜ್ಯ ನಿರ್ವಹಣೆ, ಬೀದಿ ದೀಪಗಳು, ಕೊಳಚೆಪ್ರದೇಶ ಅಭಿವೃದ್ಧಿ ಇತ್ಯಾದಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹಿಂದಿನ ಬಜೆಟ್‌ನಲ್ಲಿ ಹೊಸ ಯೋಜನೆ ಎಂದು ಘೋಷಿಸಲಾಗಿತ್ತು.

ಆದರೀಗ ಬಿಬಿಎಂಪಿಯಿಂದ ಇನ್ನೂ ಟೆಂಡರ್‌ಗಳನ್ನು ಆಹ್ವಾನಿಸುವ ಹಂತದಲ್ಲೇ ಇದೆ. ಎಲ್ಲ ವಿಧಾನಸಭಾ ಕ್ಷೇತ್ರವಾರು ಟೆಂಡರ್‌ಗಳನ್ನು ಆಹ್ವಾನಿಸುತ್ತಿದೆ ಎಂದು ವಿವರಣೆ ನೀಡಿರುವ ನಗರಾಭಿವೃದ್ಧಿ ಇಲಾಖೆಯು ಹಲವು ಟೆಂಡರ್‌ಗಳಿಗೆ ಸರಕಾರವು ಇನ್ನು ಅನುಮೋದನೆಯನ್ನೇ ನೀಡಿಲ್ಲ ಎಂಬುದು ತಿಳಿದು ಬಂದಿದೆ.

 ಬೆಂಗಳೂರು ನಗರದ ರಾಜಕಾಲುವೆಗಳಲ್ಲಿ ಕೊಳಚೆ ನೀರನ್ನು ಬೇರ್ಪಡಿಸಿ ಪುನರುಜ್ಜೀವನಗೊಳಿಸಿ ನಾಗರಿಕರಿಗೆ ವಿಹಾರ ತಾಣವಾಗಿ ಅಭಿವೃದ್ಧಿಪಡಿಸಲು 195.00 ಕೋಟಿ ರೂ. ವೆಚ್ಚದ  ಮುಂದುವರಿದ ಯೋಜನೆಗೆ ಸಂಬಂಧಿಸಿದಂತೆ ಇದುವರೆಗೆ ಶೇ.60ರಷ್ಟು ಪ್ರಗತಿ ಸಾಧಿಸಿದೆ. ಇದೇ ಮಾರ್ಚ್ 2023ರೊಳಗಾಗಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆಯಾದರೂ ಅದಕ್ಕೆ ಬದ್ಧತೆಯನ್ನು ಪ್ರದರ್ಶಿ ಸದಿರುವುದು ವಿವರಣೆ ಪಟ್ಟಿಯಿಂದ ಗೊತ್ತಾಗಿದೆ.

 ಮನೆಗಳು ಹಾಗೂ ವಸತಿ ಬಡಾವಣೆಗಳನ್ನು ನಿರ್ಮಿಸಲು ಅವಶ್ಯವಿರುವ ಹಲವು ಇಲಾಖೆಗಳ ಅನುಮತಿ ಪಡೆಯುವ ವಿಧಾನದಲ್ಲಿ ಸರಳೀಕರಣಗೊಳಿಸಲು ಉದ್ದೇಶಿಸಿದೆ ಎಂದು ಘೋಷಣೆ ಮಾಡಿದ್ದ ಇಲಾಖೆಯು, ಇನ್ನೂ ಅಂತರ್ಜಾಲ ತಂತ್ರಾಂಶದಲ್ಲಿ ಸಂಯೋಜನೆಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಿಲ್ಲ.

 ಬೆಂಗಳೂರು ನಗರದ ರಸ್ತೆಗಳಲ್ಲಿನ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು 2006ರಿಂದ ನೆನೆಗುದಿಗೆ ಬಿದ್ದಿದ್ದ ತುಮಕೂರು ರಸ್ತೆಯಿಂದ ಬಳ್ಳಾರಿ ರಸ್ತೆ ಹಾಗೂ ಹಳೇ ಮದ್ರಾಸ್ ರಸ್ತೆಯನ್ನು ಹಾದು ಹೋಗಿ ಹೊಸೂರು ರಸ್ತೆ ಸೇರುವ 73.0 ಕಿಮೀ ಉದ್ದ ಹಾಗೂ 100 ಮೀ ಅಗಲದ ಫೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ವೆಚ್ಚ ಸೇರಿ 21,091 ಕೋಟಿ ರೂ. ಅನುಮೋದಿಸಿತ್ತು. ಪ್ರಸಕ್ತ ವರ್ಷದಲ್ಲೇ ಕಾಮಗಾರಿ ನಿರ್ವಹಿಸಲು ಆಃಈಔಖಿ ಮಾದರಿಯಲ್ಲಿ ಗುತ್ತಿಗೆದಾರರೇ ಭೂ ಸ್ವಾಧೀನ ಮತ್ತು ನಿರ್ಮಾಣ ವೆಚ್ಚವನ್ನು ಭರಿಸುವುದರೊಂದಿಗೆ ಟೆಂಡರ್ ಕರೆದು ಕಾಮಗಾರಿ ಚಾಲನೆಗೊಳಿಸಲಾಗುವುದು ಎಂದು ಹೇಳಿತ್ತು.

 ಈ ಸಂಬಂಧ ಬಿಡಿಎಯು ಟೆಂಡರ್ ಕರೆದಿತ್ತಾದರೂ ಇದುವರೆಗೂ ಈ ಪ್ರಕ್ರಿಯೆಯು ಅಂತಿಮಗೊಂಡಿಲ್ಲ. 2022ರ ಜುಲೈ 16ರಂದು ಎರಡನೇ ಬಾರಿ ಟೆಂಡರ್ ಕರೆದಿತ್ತು. ಆದರೆ ಯಾವುದೇ ಬಿಡ್‌ದಾರರು ಭಾಗವಹಿಸಿಲ್ಲ. ಹೀಗಾಗಿ ಮೂರನೇ ಬಾರಿಗೆ ಟೆಂಡರ್ ಆಹ್ವಾನಿಸಲು ಕ್ರಮಕೈಗೊಂಡಿದೆ ಎಂದು ನಗರಾಭಿವೃದ್ಧಿ ಇಲಾಖೆಯು ಹೇಳಿದೆ.

ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಿಸಲು ಸ್ವಾಧೀನಪಡಿಸಿಕೊಂಡಿದ್ದ 2,671 ಎಕರೆ ಜಮೀನಿನ ಪೈಕಿ 1,297 ಎಕರೆ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಆಧುನಿಕ ಸ್ಮಾರ್ಟ್ ಸಿಟಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಕಳೆದ ಆಯವ್ಯಯದಲ್ಲಿ ಹೇಳಿತ್ತು. ಆದರೆ ಈ ಪ್ರಕ್ರಿಯೆಯು ಇನ್ನೂ ಪೂರ್ಣಗೊಂಡಿಲ್ಲ.

ಭೂ ಸ್ವಾಧೀನವಾಗಿರುವ ಜಮೀನಿನ ಪೈಕಿ 294 ಎಕರೆ 14 ಗುಂಟೆ ಜಮೀನಿನ ಭೂ ಮಾಲಕರ ತಕರಾರು ಮತ್ತು ಜಮೀನುಗಳ ಮೇಲೆ ವಿವಿಧ ನ್ಯಾಯಾಲಯಗಳಲ್ಲಿ ಮೊಕದ್ದಮೆ ದಾಖಲಾಗಿದೆ. ಇದರಿಂದಾಗಿ ಬಡಾವಣೆ ರಚನೆಯಲ್ಲಿ ವಿಳಂಬವಾಗಿದೆ ಎಂದು ಇಲಾಖೆಯು ಸಮಜಾಯಿಷಿ ನೀಡಿದೆ.

 ಇದೇ ಬಡಾವಣೆಗೆ ಸಂಬಂಧಿಸಿದಂತೆ ವಿವಿಧ ಬ್ಲಾಕ್‌ಗಳ ನಡುವೆ ಸಂಪರ್ಕ ಏರ್ಪಡಿಸಲು ಅತ್ಯವಶ್ಯಕವಾಗಿರುವ 35 ಸೇತುವೆಗಳ ನಿರ್ಮಾಣ ಕಾಮಗಾರಿಗಳಿಗಾಗಿ ಅಂದಾಜು 3,217.00 ಲಕ್ಷ ರೂ.ಗಳಲ್ಲಿ ಟೆಂಡರ್ ಆಹ್ವಾನಿಸಲು ಪ್ರಸ್ತಾವ ಸಲ್ಲಿಸಿದೆ.

ನೀರು ಸರಬರಾಜು, ಒಳಚರಂಡಿ ಹಾಗೂ ಯುಟಿಲಿಟಿ ಡಕ್ಟ್ ಕಾಮಗಾರಿಗಳಿಗಾಗಿ 1,169 ಕೋಟಿ ರೂ. ವ್ಯಯಿಸಿರುವ ಬಿಡಿಎಯು ಉಳಿಕೆ ಕಾಮಗಾರಿ ಪೂರ್ಣಗೊಳಿಸಲು 450.42 ಕೋಟಿ ರೂ. ಮತ್ತು ಸಿವಿಲ್ ಕಾಮಗಾರಿಗಾಗಿ 721.11 ಕೋಟಿ ರೂ.ವ್ಯಯಿಸಿದ್ದು ಉಳಿಕೆ ಕಾಮಗಾರಿ ಪೂರ್ಣಗೊಳಿಸಲು 239.43 ಕೋಟಿ ರೂ. ಅನುದಾನಕ್ಕಾಗಿ ಸರಕಾರವನ್ನು ಬಿಡಿಎಯು ಎದುರು ನೋಡುತ್ತಿದೆ.

 ಬನಶಂಕರಿ ಜಂಕ್ಷನ್‌ನಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ಸ್ಕೈವಾಕ್ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಲಾಗಿತ್ತಾದರೂ, ಈ ಸಂಬಂಧದ ಪ್ರಸ್ತಾವ ಸರಕಾರದ ಹಂತದಲ್ಲೇ ಇದೆ. ಕಡತವು ಆರ್ಥಿಕ ಇಲಾಖೆ ಸಹಮತಿಗಾಗಿ ಸಲ್ಲಿಕೆಯಾಗಿದೆಯೇ ವಿನಃ ವರ್ಷ ಕಳೆದರೂ ಸ್ಕೈವಾಕ್ ನಿರ್ಮಾಣವಾಗಿಲ್ಲ.

 3,885 ಕೋಟಿ ರೂ. ವೆಚ್ಚದಲ್ಲಿ 2022-23ನೇ ಸಾಲಿನಿಂದ 2024-25ನೇ ಸಾಲಿನ ಅವಧಿಯಲ್ಲಿ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದ ಸರಕಾರವು ಈ ಸಂಬಂಧ ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಯು ಇನ್ನೂ ಅನುಮೋದನೆ ಹಂತದಲ್ಲೇ ಇದೆ. ಒಟ್ಟು 288 ನಗರ ಸ್ಥಳೀಯ ಸಂಸ್ಥೆಗಳ ಟೆಂಡರ್ ಕರೆದಿದೆಯೇ ವಿನಃ ಕಾಮಗಾರಿಯನ್ನು ಕೈಗೆತ್ತಿಕೊಂಡಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

 ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 5,878 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಯಲ್ಲಿ 2021-22ನೇ ಸಾಲಿನಲ್ಲಿ 18 ಮತ್ತು 2022-23ನೇ ಸಾಲಿನಲ್ಲಿ 38 ಯೋಜನೆಗಳನ್ನು ಪೂರ್ಣಗೊಳಿಸಲು ಉದ್ದೇಶಿಸಿಲಾಗಿದೆ ಎಂದು ಸರಕಾರವು ಹೇಳಿತ್ತು. ಆದರೆ ಇನ್ನು 28 ಯೋಜನೆಗಳು ಪ್ರಗತಿಯಲ್ಲಿವೆಯೇ ವಿನಃ ಪೂರ್ಣಗೊಂಡಿಲ್ಲ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X