Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ್ಯಾ.ಕೆಂಪಣ್ಣ ಆಯೋಗದ ವರದಿಯಲ್ಲಿ...

ನ್ಯಾ.ಕೆಂಪಣ್ಣ ಆಯೋಗದ ವರದಿಯಲ್ಲಿ ಕಾಂಗ್ರೆಸ್ ಭ್ರಷ್ಟಾಚಾರ ಉಲ್ಲೇಖ: ಮುಖ್ಯಮಂತ್ರಿ ಬೊಮ್ಮಾಯಿ

24 Feb 2023 12:06 AM IST
share
ನ್ಯಾ.ಕೆಂಪಣ್ಣ ಆಯೋಗದ ವರದಿಯಲ್ಲಿ ಕಾಂಗ್ರೆಸ್ ಭ್ರಷ್ಟಾಚಾರ ಉಲ್ಲೇಖ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಫೆ.23: ಭ್ರಷ್ಟಾಚಾರದ ವಿಷಯದಲ್ಲಿ ಬಿಜೆಪಿ ಸರಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದ ಕಾಂಗ್ರೆಸ್ ಪಕ್ಷವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದ ವೇಳೆ ಲೋಕಾಯುಕ್ತವನ್ನು ನಿಷ್ಕ್ರಿಯಗೊಳಿಸಿ ಎಸಿಬಿ ಮೂಲಕ 59 ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ ಎಂದರು.

ಅರ್ಕಾವತಿ ಬಡಾವಣೆ ಹೆಸರಿನಲ್ಲಿ ಡಿ ನೋಟಿಫಿಕೇಷನ್ ಕುರಿತು ನ್ಯಾ.ಕೆಂಪಣ್ಣ ಆಯೋಗದ ವರದಿಯನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ, ‘ನೀವು ಭ್ರಷ್ಟರಾಗಿದ್ದಲ್ಲದೇ ವ್ಯವಸ್ಥೆಯನ್ನೂ ಭ್ರಷ್ಟಗೊಳಿಸಿದ್ದೀರಿ’ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನಾವು ಅಧಿಕಾರಕ್ಕೆ ಬಂದ ನಂತರ ಲೋಕಾಯುಕ್ತವನ್ನು ಪುನರ್ ಸ್ಥಾಪಿಸಿದ್ದು, ಎಲ್ಲ ಅಧಿಕಾರವನ್ನು ನೀಡಿದ್ದೇವೆ. ಕಾಂಗ್ರೆಸ್ ಆಡಳಿತ ಅವಧಿಯ ಎಲ್ಲ ಭ್ರಷ್ಟಾಚಾರದ ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಿ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡುವುದಿಲ್ಲ ಎಂದು ಬೊಮ್ಮಾಯಿ ಘೋಷಿಸಿದರು. 

ಹೈಕೋರ್ಟ್ ನ್ಯಾಯಾಧೀಶರೆ ಲೋಕಾಯುಕ್ತವನ್ನು ಪುನಃ ಆರಂಭಿಸಿ ಎಸಿಬಿ ಯನ್ನು ಮುಚ್ಚುವಂತೆ ಆದೇಶ ನೀಡಿದ್ದಾರೆ. ತನಿಖೆ ಬಾಕಿಯಿರುವ ಪ್ರಕರಣಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದಲೇ ಎಸಿಬಿ ರಚನೆಯಾಗಿದೆ. ಇದರ ಹಿಂದೆ ಉನ್ನತ ಹುದ್ದೆಯಲ್ಲಿರುವ ರಾಜಕಾರಣಿಗಳು ಮತ್ತು ಅಧಿಕಾರಿಶಾಹಿಯನ್ನು ರಕ್ಷಿಸುವ ಉದ್ದೇಶವಿದೆ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ಉಲ್ಲೇಖಿಸಿರುವುದನ್ನು ಮುಖ್ಯಮಂತ್ರಿ ಓದಿ ಹೇಳಿದರು.

ಈ ವೇಳೆ ಕಾಂಗ್ರೆಸ್ ಹಿರಿಯ ಸದಸ್ಯ ಕೆ.ಜೆ.ಜಾರ್ಜ್, ನ್ಯಾಯಾಧೀಶರ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕಾಗಿತ್ತು ಎಂದು ಸಲಹೆ ನೀಡಲು ಮುಂದಾದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಎಲ್ಲ ಭ್ರಷ್ಟಾಚಾರದ ಪ್ರಕರಣಗಳನ್ನು ಕಾಂಗ್ರೆಸ್ ಅವಧಿಯಲ್ಲಿ ಮುಚ್ಚಿಹಾಕಿದ್ದಾಗಿ ಜಾರ್ಜ್ ಅವರೆ ಒಪ್ಪಿಕೊಂಡಿದ್ದಾರೆ ಎಂದು ಟೀಕಿಸಿದರು.

ಅರ್ಕಾವತಿ ಬಡಾವಣೆಯಲ್ಲಿ ಒಂದಿಂಚೂ ಜಮೀನನ್ನು ಡಿ-ನೋಟಿಫೈ ಮಾಡಿಲ್ಲ ಎಂದು ಈ ಮೊದಲು ಚರ್ಚೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಎದಿರೇಟು ನೀಡಿದ ಬೊಮ್ಮಾಯಿ, ನ್ಯಾ.ಕೆಂಪಣ್ಣ ಆಯೋಗದ ವರದಿಯ ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸದಸ್ಯರನ್ನು ಪೇಚಿಗೆ ಸಿಲುಕಿಸಿದರು.

ಕಾಂಗ್ರೆಸ್ ಸರಕಾರ ರೀ-ಡೂ ಹೆಸರಿನಲ್ಲಿ 852ಎಕರೆ ಜಮೀನನ್ನು ಡಿ-ನೋಟಿಫೈ ಮಾಡಿತ್ತು. ಇದು ಕೆಲವು ಹಿತಾಸಕ್ತಿಗಳಿಗೆ ಅನುಕೂಲ ಮಾಡಿಕೊಡುವ ಮಾಯಾಜಾಲ, ಅರ್ಕಾವತಿ ಬಡಾವಣೆ ರಚನೆಯೇ ಒಂದು ದೊಡ್ಡ ಹಗರಣ ಎನ್ನುವ ಅಂಶವನ್ನು ನ್ಯಾ.ಕೆಂಪಣ್ಣ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಈ ವರದಿ ಅಂದಿನ ಸಚಿವ ಸಂಪುಟ ಸಭೆಯ ಮುಂದೆ ಬಂದಿದ್ದರೂ ಅದನ್ನು ಮುಚ್ಚಿಟ್ಟಿದ್ದು ಏಕೆ ಎಂದು ಅವರು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದರು.

ಯು.ಟಿ.ಖಾದರ್ ಆಕ್ಷೇಪ: ಈ ಸಂದರ್ಭದಲ್ಲಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹಾಗೂ ಹಿರಿಯ ಶಾಸಕ ಕೆ.ಜೆ.ಜಾರ್ಜ್ ಮಧ್ಯಪ್ರವೇಶಿಸಿ, ನ್ಯಾ.ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸದೆ, ನಮಗೆ ಅದರ ಪ್ರತಿಯನ್ನು ನೀಡದೆ ಏಕಾಏಕಿ ಆ ವರದಿಯಲ್ಲಿನ ಅಂಶಗಳನ್ನು ಪ್ರಸ್ತಾಪಿಸುವುದು ಸರಿಯಲ್ಲ ಎಂದರು.

ಅರ್ಕಾವತಿ ವಿಚಾರದಲ್ಲಿ ವಿರೋಧ ಪಕ್ಷದ ನಾಯಕರೆ ಮಾತನಾಡಿದ್ದಾರೆ. ಅವರು ಸದನದಲ್ಲಿ ಇಲ್ಲದೆ ಇರುವಾಗ, ಇವತ್ತಿನ ಅಜೆಂಡಾದಲ್ಲಿಯೂ ಆ ವಿಷಯವನ್ನು ಹಾಕದೆ ಸ್ವತಃ ಮುಖ್ಯಮಂತ್ರಿ ವಿಷಯ ಪ್ರಸ್ತಾಪಿಸುವುದು ಎಷ್ಟರಮಟ್ಟಿಗೆ ಸರಿ? ವರದಿಯನ್ನು ಸದನದಲ್ಲಿ ಮಂಡಿಸಿ, ಚರ್ಚೆಯಾಗಲಿ, ತಪ್ಪಿತಸ್ತರು ಯಾರಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳಿ. ನಾಲ್ಕು ವರ್ಷದಿಂದ ವರದಿ ನಿಮ್ಮ ಬಳಿ ಇಟ್ಟುಕೊಂಡು ಈಗ ಇಲ್ಲಿ ಉಲ್ಲೇಖಿಸುವುದು ಅಂದರೆ ಏನರ್ಥ? ಎಂದು ಖಾದರ್ ಪ್ರಶ್ನಿಸಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಭ್ರಷ್ಟಾಚಾರದಿಂದ ಜನ ಸಾಮಾನ್ಯರಿಗೆ ಉಂಟಾಗುತ್ತಿದ್ದ ತೊಂದರೆಯನ್ನು ನಿವಾರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಜನ ಸಾಮಾನ್ಯರಿಗೆ ಸರಕಾರಿ ಸೇವೆಗಳನ್ನು ನೇರವಾಗಿ ತಲುಪಿಸಲಾಗುತ್ತಿದೆ. ಗ್ರಾಮ ಒನ್ ಮೂಲಕ ಈವರೆಗೆ 1.5ಕೋಟಿ ಜನರಿಗೆ ಸರಕಾರದ ಸೇವೆಗಳನ್ನು ಒದಗಿಸಲಾಗಿದ್ದು, ಈ ವರ್ಷ ಇದನ್ನು 3.5 ಕೋಟಿ ಜನರಿಗೆ ವಿಸ್ತರಿಸುವ ಗುರಿ ಹೊಂದಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

share
Next Story
X