Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಕ್ಕೂಟ ವ್ಯವಸ್ಥೆಗೆ ಬೆದರಿಕೆ...

ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರ ಸರಕಾರವನ್ನು ವಜಾಗೊಳಿಸಲು ಸಿದ್ದರಾಮಯ್ಯ ಆಗ್ರಹ

15 March 2023 10:36 PM IST
share
ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರ ಸರಕಾರವನ್ನು ವಜಾಗೊಳಿಸಲು ಸಿದ್ದರಾಮಯ್ಯ ಆಗ್ರಹ

ಹುಬ್ಬಳ್ಳಿ, ಮಾ.15: ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರಕಾರವನ್ನು ಕೇಂದ್ರ ಸರಕಾರ ಕೂಡಲೆ ವಜಾ ಮಾಡಬೇಕು, ರಾಜ್ಯದ ಹಿತ ಕಾಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬುಧವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ತುರ್ತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಸರಕಾರವು ಕರ್ನಾಟಕದ ಗಡಿಯೊಳಗಿನ 865 ಹಳ್ಳಿಗಳಿಗೆ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ ಎಂಬ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಹೊರಟಿರುವುದು ನಾಡಿನ ಸಾರ್ವಭೌಮತೆ ಮತ್ತು ಸಮಗ್ರತೆಗೆ ಹಾಕಿರುವ ಸವಾಲು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪದೇ ಪದೇ ಈ ರೀತಿ ಕನ್ನಡಿಗರ ತಾಳ್ಳೆ ಪರೀಕ್ಷೆ ಮಾಡಿದರೆ ತಕ್ಕ ಪರಿಣಾಮ ಎದುರಿಸಬೇಕಾದೀತು, ಎಚ್ಚರ. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಹಂಚಿಕೆಗೆ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ. ನಾವು ಈ ವರದಿಯನ್ನು ಒಪ್ಪಿಕೊಂಡಿದ್ದೇವೆ. ಮಹಾರಾಷ್ಟ್ರದವರು ಈಗ 865 ಹಳ್ಳಿಗಳು ತಮ್ಮವು ಎಂದು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು. 

ಆರೋಗ್ಯ ವಿಮಾ ಯೋಜನೆಯನ್ನು ಈ ಹಳ್ಳಿಗಳಿಗೆ ಜಾರಿ ಮಾಡಬೇಕು ಎಂದು ಕಾರ್ಯಕ್ರಮವನ್ನು ಘೋಷಣೆ ಮಾಡಿದ್ದಾರೆ, ಈ ಬಗ್ಗೆ ಆಡಳಿತ ಪಕ್ಷದ ಹಿರಿಯ ಸಚಿವರೊಬ್ಬರು ಹೇಳಿಕೆಯನ್ನು ನೀಡಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಕೇಂದ್ರ ಸರಕಾರ ಸುಮ್ಮನಿದೆ, ನಮ್ಮ ರಾಜ್ಯದ ಮುಖ್ಯಮಂತ್ರಿ ಕೂಡ ಮಾತನಾಡುತ್ತಿಲ್ಲ, ಇಲ್ಲಿ ಸರಕಾರ ಸತ್ತು ಹೋಗಿದೆಯಾ ಎಂಬ ಅನುಮಾನ ಬರುತ್ತಿದೆ ಎಂದು ಅವರು ಟೀಕಿಸಿದರು.

ಮಹಾರಾಷ್ಟ್ರ ಸರಕಾರ ನಮ್ಮ ರಾಜ್ಯದ ಗಡಿಯೊಳಗೆ ಇರುವ ಹಳ್ಳಿಗಳಿಗೆ ಬಂದು ಆರೋಗ್ಯ ವಿಮಾ ಸೌಲಭ್ಯವನ್ನು ನೀಡುತ್ತೇವೆ ಎಂದರೂ ಕ್ರಮ ಕೈಗೊಳ್ಳಬೇಕಾದರೂ ಸುಮ್ಮನಿದ್ದಾರೆ ಎಂದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸತ್ತು ಹೋಗಿವೆಯಾ ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಪ್ರಧಾನಿ ಕೂಡ ಅವರಿಗೆ ಬುದ್ದಿ ಹೇಳಿಲ್ಲ. ಇದು ನಮ್ಮ ಸಾರ್ವಭೌಮತೆಗೆ ಸವಾಲು ಎಂದು ಸಿದ್ದರಾಮಯ್ಯ ಹೇಳಿದರು.

ಏಕೀಕರಣದ ನಂತರ ಭಾಷಾವಾರು ಪ್ರಾಂತ್ಯಗಳು ರಚನೆಯಾದ ಮೇಲೆ ನಮ್ಮ ರಾಜ್ಯದ ಒಂದಿಂಚನ್ನು ನಾವು ಯಾವುದೆ ಕಾರಣಕ್ಕೂ ಬಿಟ್ಟುಕೊಡಬಾರದು. ಭಾಷೆ, ಸಂಸ್ಕೃತಿ, ನೆಲ, ಜಲ ನಮ್ಮ ಆರೂವರೆ ಕೋಟಿ ಜನರ ಹÀಕ್ಕು ಮತ್ತು ಸಾರ್ವಭೌಮತೆಯ ಸಂಕೇತ. ಇದಕ್ಕೆ ಧಕ್ಕೆ ಬಂದಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಬಾಯಿ ಮುಚ್ಚಿಕೊಂಡು ಕೂರಬಾರದು ಎಂದು ಅವರು ತಿಳಿಸಿದರು.

ಇಂಥ ಘಟನೆಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಆಗ ನಾವು ಒಕ್ಕೂಟ ವ್ಯವಸ್ಥೆಯಡಿ ಮುಂದುವರೆಯುವ ಬಗ್ಗೆ ಕೆಟ್ಟ ಯೋಚನೆಗಳು ಆರಂಭವಾಗುತ್ತದೆ. ಮಹಾರಾಷ್ಟ್ರದ ಕನ್ನಡಿಗರು ಕರ್ನಾಟಕ ಸೇರುವ ಹೇಳಿಕೆ ನೀಡಿದ್ದರು, ಹಾಗಂತ ಅದಕ್ಕೆ ನಾವು ಮಧ್ಯಪ್ರವೇಶ ಮಾಡಲು ಆಗುತ್ತಾ? ಅವರ ಸಮಸ್ಯೆಗಳಿಗೆ ಅಲ್ಲಿನ ಸರಕಾರ ಪರಿಹಾರ ನೀಡಿಲ್ಲ ಎಂದು ನಾವು ಅವರಿಗೆ ಕಾರ್ಯಕ್ರಮಗಳನ್ನು ನೀಡಲು ಆಗುತ್ತದಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ನಾವು ಅಲ್ಲಿನ ಕನ್ನಡಿಗರಿಗೆ ಸವಲತ್ತು ನೀಡಲು ಹೋದರೆ ಅದು ಒಕ್ಕೂಟ ವ್ಯವಸ್ಥೆಯ ಒಳ್ಳೆಯ ಲಕ್ಷಣವಾಗಲ್ಲ. ಅದೇ ರೀತಿ ಅವರು ಕೂಡ ಇಲ್ಲಿನವರಿಗೆ ಕಾರ್ಯಕ್ರಮ ನೀಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಕರ್ನಾಟಕದ ಗಡಿಯೊಳಗೆ ಇರುವ ಜನರಿಗೆ ಕಾರ್ಯಕ್ರಮ ನೀಡುತ್ತೇವೆ ಎಂಬ ಹೇಳಿಕೆ ನೀಡಿರುವವರು ಏಕನಾಥ್ ಶಿಂಧೆ ಸರಕಾರದಲ್ಲಿರುವ ಹಿರಿಯ ನಾಯಕರು ಎಂದು ಅವರು ಹೇಳಿದರು.

ನಾವು ಶಾಂತವಾಗಿದ್ದೀವಿ ಎಂದರೆ ನಮ್ಮ ನೆಲ, ಜಲದ ವಿಚಾರದಲ್ಲಿ ಮಾತನಾಡಲ್ಲ ಎಂದರ್ಥವಲ್ಲ, ನಮ್ಮನ್ನು ಪದೇ ಪದೇ ಕೆಣಕಲು ನೋಡುತ್ತಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಿ, ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರಕಾರವನ್ನು ವಜಾ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಈ ಘಟನೆ ಒಕ್ಕೂಟ ವ್ಯವಸ್ಥೆಗೆ ಒಂದು ಬೆದರಿಕೆ. ನಮ್ಮ ಮುಖ್ಯಮಂತ್ರಿ ರಾಜ್ಯದ ಹಿತಾಸಕ್ತಿ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ವಿಫಲವಾಗಿದ್ದಾರೆ, ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ಯಾವುದೇ ನೈತಿಕತೆ ಇಲ್ಲ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಝಮೀರ್ ಅಹ್ಮದ್ ಖಾನ್, ವಿಧಾನಪರಿಷತ್ ವಿಪಕ್ಷ ಮುಖ್ಯಸಚೇತಕ ಪ್ರಕಾಶ್ ರಾಥೋಡ್, ಮಾಜಿ ಶಾಸಕ ಕೋನರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
Next Story
X