Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಭಟ್ಕಳ ಕ್ಷೇತ್ರ: ತಂಝೀಮ್ ಸರ್ವ ಜಮಾಅತ್...

ಭಟ್ಕಳ ಕ್ಷೇತ್ರ: ತಂಝೀಮ್ ಸರ್ವ ಜಮಾಅತ್ ಪ್ರತಿನಿಧಿಗಳ ಸಭೆಯಲ್ಲಿ 'ಮುಸ್ಲಿಮ್ ಅಭ್ಯರ್ಥಿ' ನಿರ್ಣಯಕ್ಕೆ ಸೋಲು

ಪ್ರಬಲ ಆಕಾಂಕ್ಷಿ ಜೆ.ಡಿ.ಎಸ್ ನ ಇನಾಯತುಲ್ಲಾ ಶಾಬಂದ್ರಿಗೆ ಹಿನ್ನಡೆ

21 March 2023 8:57 PM IST
share
ಭಟ್ಕಳ ಕ್ಷೇತ್ರ: ತಂಝೀಮ್ ಸರ್ವ ಜಮಾಅತ್ ಪ್ರತಿನಿಧಿಗಳ ಸಭೆಯಲ್ಲಿ ಮುಸ್ಲಿಮ್ ಅಭ್ಯರ್ಥಿ ನಿರ್ಣಯಕ್ಕೆ ಸೋಲು
ಪ್ರಬಲ ಆಕಾಂಕ್ಷಿ ಜೆ.ಡಿ.ಎಸ್ ನ ಇನಾಯತುಲ್ಲಾ ಶಾಬಂದ್ರಿಗೆ ಹಿನ್ನಡೆ

ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದಿರಲು ಸೋಮವಾರ ಸಂಜೆ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ನೇತೃತ್ವದಲ್ಲಿ ನಡೆದ ಕ್ಷೇತ್ರದ ಸರ್ವಜಮಾಅತ್ ಪ್ರತಿನಿಧಿಗಳ ಸಭೆಯಲ್ಲಿ ನಿರ್ಣಯಿಸಲಾಗಿದೆ. ಇದರಿಂದ ಪ್ರಬಲ ಆಕಾಂಕ್ಷಿ, ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿಗೆ ಈ ನಿರ್ಣಯದಿಂದ ಹಿನ್ನೆಡೆಯಾಗಿದೆ. 

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಮುಸ್ಲಿಮ್ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಯನ್ನು ಈ ಬಾರಿ ಚುನಾವಣ ಕಣಕ್ಕೆ ಇಳಿಸುವ ಕುರಿತು ಸಾಮಾಜಿಕ ಜಾಲಾತಾಣಗಳಲ್ಲಿ ನಡೆದ ಬಿಸಿಬಿಸಿ ಚರ್ಚೆ ನಡೆದಿತ್ತು. ಸುಮಾರು 60 ಸಾವಿರ ಮತದಾರರು ಇರುವ ಮುಸ್ಲಿಮರು ಈ ಬಾರಿ ಮುಸ್ಲಿಂ ಅಭ್ಯರ್ಥಿಯನ್ನೇ ಬೆಂಬಲಿಸಬೇಕು ಎಂಬ ಆಗ್ರಹ ಬಲವಾಗಿ ಕೇಳಿ ಬಂದಿತ್ತು. ಈ ಬಗ್ಗೆ  ಭಟ್ಕಳದ ಮುಸ್ಲಿಮರ ರಾಜಕೀಯ, ಸಾಮಾಜಿಕ ಸಂಘಟನೆಯಾಗಿರುವ ತಂಝೀಮ್ ಸಂಸ್ಥೆ  ಕ್ಷೇತ್ರದ ಸರ್ವ ಜಮಾಅತ್ ಪ್ರತಿನಿಧಿಗಳ ಸಭೆಯನ್ನು ತಂಝೀಮ್ ಕಾರ್ಯಾಲಯದಲ್ಲಿ ಸೋಮವಾರ ಸಂಜೆ ಆಯೋಜಿಸಿತ್ತು. ಇದರಲ್ಲಿ ಭಟ್ಕಳ, ಶಿರಾಲಿ, ಮಂಕಿ, ಮುರುಡೇಶ್ವರ, ಉಪ್ಪಾಣ, ಸಂಶಿ, ಹೊನ್ನಾವರ ಸೇರಿದಂತೆ ಪ್ರಮುಖ ಜಮಾಅತ್ ಗಳ 48 ಪ್ರತಿನಿಧಿಗಳು ಭಾಗವಹಿಸಿದ್ದರು.

ಚುನಾವಣೆಯಲ್ಲಿ ಮುಸ್ಲಿಮ್ ಅಭ್ಯರ್ಥಿಯನ್ನು ನಿಲ್ಲಿಸಬೇಕೋ ಬೇಡವೋ ಎಂಬ ಒಂದಂಶದ ಈ ಸಭೆಯಲ್ಲಿ ಪರವಿರೋಧದ ಚರ್ಚೆಯಾಗಿ ಕೊನೆಯಲ್ಲಿ ಮತದಾನ ನಡೆದು ಮುಸ್ಲಿಮ್ ಅಭ್ಯರ್ಥಿಯನ್ನು ಬೆಂಬಲಿಸುವ ನಿರ್ಣಯಕ್ಕೆ ಸೋಲಾಗಿದೆ. ಭಟ್ಕಳ ವ್ಯಾಪ್ತಿಯ ಬಹುತೇಕ ಸದಸ್ಯರು ಮುಸ್ಲಿಂ ಅಭ್ಯರ್ಥಿ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದರೆ ಭಟ್ಕಳದ ಸುತ್ತಮುತ್ತಲ ಪ್ರದೇಶಗಳ ಜಮಾಅತ್ ಗಳ ಸದಸ್ಯರಲ್ಲಿ ಹೆಚ್ಚಿನವರು ಇದನ್ನು ವಿರೋಧಿಸಿದ್ದರಿಂದ ಕೊನೆಗೆ ನಿರ್ಣಯಕ್ಕೆ ಸೋಲಾಗಿದೆ ಎಂದು ತಿಳಿದು ಬಂದಿದೆ. ಸರ್ವ ಜಮಾಅತ್ ಸದಸ್ಯರ ಸಭೆಗೆ ಮೊದಲು ತಂಝೀಮ್ ನ ರಾಜಕೀಯ ವ್ಯವಹಾರಗಳ ಸಮಿತಿ ಹಾಗು ಕಾರ್ಯಕಾರಿ ಸಮಿತಿಯಲ್ಲಿ ಈ ವಿಷಯ ಚರ್ಚೆಯಾಗಿ ಮುಸ್ಲಿಂ ಅಭ್ಯರ್ಥಿ ಆಗ್ರಹಕ್ಕೆ ಒಮ್ಮತ ವ್ಯಕ್ತವಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಕೊನೆಗೆ ನಡೆದ ಸರ್ವ ಜಮಾಅತ್ ಸದಸ್ಯರ ಸಭೆಯಲ್ಲಿ ಮತಕ್ಕೆ ಹಾಕಿದಾಗ ನಿರ್ಣಯಕ್ಕೆ ಸೋಲಾಗಿದೆ.  

2013ರಲ್ಲಿ ತಂಝೀಮ್ ಬೆಂಬಲದೊಂದಿಗೆ ಜೆ.ಡಿ.ಎಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದ ಇನಾಯತುಲ್ಲಾ ಶಾಬಂದ್ರಿ 27ಸಾವಿರಕ್ಕೂ ಅಧಿಕ ಮತಗಳನ್ನು ಪಡೆಯುವುದರ ಮೂಲಕ ಪಕ್ಷೇತರ ಅಭ್ಯರ್ಥಿ ಮಾಂಕಾಳು ವೈದ್ಯರ ವಿರುದ್ಧ ಸೋಲನ್ನು ಕಂಡು ಎರಡನೇ ಸ್ಥಾನ ಪಡೆದುಕೊಂಡಿದ್ದರು. ಈ ಮತಗಳೇ ಮುಂದೆ ಇಲ್ಲಿ ಮುಸ್ಲಿಮ್ ಅಭ್ಯರ್ಥಿ ವಾದ ಗರಿಗೆದರುವಂತೆ ಮಾಡಿತ್ತು. 2018ರಲ್ಲಿ ಮತ್ತೆ ಮುನ್ನೆಲೆಗೆ ಬಂದ ಇನಾಯತುಲ್ಲಾ ಶಾಬಂದ್ರಿಗೆ  ಆಗ ತಂಝೀಮ್ ಬೆಂಬಲಿಸಲು ಒಪ್ಪದ ಕಾರಣ ಜೆ.ಡಿ.ಎಸ್  ಟಿಕೇಟ್ ನಿರಾಕರಿಸಿತ್ತು. ಈ ಬಾರಿ ಭಾರೀ ಹುಮ್ಮಸ್ಸು ಮತ್ತು ಸಿದ್ಧತೆಯಲ್ಲಿದ್ದ ಇನಾಯತುಲ್ಲಾ ಶಾಬಂದ್ರಿಗೆ ತಂಝೀಮ್ ನಿರ್ಣಯ ಮತ್ತೆ ನಿರಾಶೆ ತಂದಿದೆ. ಹಾಲಿ ತಂಝೀಮ್ ಅಧ್ಯಕ್ಷರೂ ಆಗಿರುವ ಇನಾಯತುಲ್ಲಾ ಶಾಬಂದ್ರಿ ತಂಝೀಮ್ ನಿರ್ಣಯ ಒಪ್ಪಿಕೊಳ್ಳಬೇಕಾಗಿದೆ.

ಈ ಬಾರಿ ಇನಾಯತುಲ್ಲಾ ಸ್ಪರ್ಧಿಸಿದರೆ  ಗೆಲುವಿನ ಉತ್ತಮ ಅವಕಾಶವಿದೆ ಎಂದು ಮುಸ್ಲಿಂ ಅಭ್ಯರ್ಥಿಗಾಗಿ ಆಗ್ರಹಿಸುತ್ತಿರುವವರ ವಾದ. ಹಾಲಿ ಶಾಸಕ  ಬಿಜೆಪಿಯ ಸುನಿಲ್ ನಾಯ್ಕರಿಗೆ ಬಿಜೆಪಿಯಲ್ಲೇ ವಿರೋಧವಿದೆ.  ಕಾಂಗ್ರೆಸ್ ಎರಡು ಮೂರು ಬಣಗಳಾಗಿ ಒಡೆದು ಹೋಗಿದೆ. ಈ ಎಲ್ಲದರ ಲಾಭ  ಪಡೆದು, ತನ್ನ ಸಮುದಾಯದ ಮತಗಳೊಂದಿಗೆ  ಉಳಿದ ಸಮುದಾಯಗಳಿಂದಲೂ ಒಂದಷ್ಟು ಮತ ಸೆಳೆದರೆ ಗೆಲುವು ಸಾಧ್ಯ ಎಂಬ ಲೆಕ್ಕಾಚಾರವನ್ನು ಅವರು ಮುಂದಿಡುತ್ತಿದ್ದಾರೆ. ಆದರೆ ತಂಝೀಮ್ ಸಭೆಯಲ್ಲಿ  ಮುಸ್ಲಿಮ್ ಅಭ್ಯರ್ಥಿ ನಿರ್ಣಯಕ್ಕೆ ಸೋಲಾಗಿರುವುದು ಈ ಬೇಡಿಕೆಗೆ ಭಾರೀ ಹಿನ್ನಡೆ ತಂದಿದೆ. 

ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ನಿರ್ಣಯವಾಗಿರುವುದರಿಂದ  ತಂಝೀಮ್ ಈ ಬಾರಿಯ ಚುನಾವಣೆಯಲ್ಲಿ ಯಾವ ಅಭ್ಯರ್ಥಿಯನ್ನು ಬೆಂಬಲಿಸಲಿದೆ ಎಂದು ಕಾದು ನೋಡಬೇಕಾಗಿದೆ.

share
Next Story
X