Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಕೆಲ ಅವಕಾಶವಾದಿಗಳನ್ನಷ್ಟೇ...

ಬಿಜೆಪಿ ಕೆಲ ಅವಕಾಶವಾದಿಗಳನ್ನಷ್ಟೇ ಸೆಳೆಯಬಹುದು: ಪಿಣರಾಯಿ ವಿಜಯನ್

23 March 2023 8:36 AM IST
share
ಬಿಜೆಪಿ ಕೆಲ ಅವಕಾಶವಾದಿಗಳನ್ನಷ್ಟೇ ಸೆಳೆಯಬಹುದು: ಪಿಣರಾಯಿ ವಿಜಯನ್

ಕಣ್ಣೂರು: ರಬ್ಬರ್ ಬೆಲೆ ವಿಚಾರದಲ್ಲಿ ಬಿಜೆಪಿ ಪರ ತಲಶ್ಶೇರಿ ಆರ್ಚ್‌ಬಿಷಪ್ ಮಾರ್ ಜೋಸೆಫ್ ಪಾಂಪ್ಲಾನಿ ಹೇಳಿಕೆ ನೀಡಿರುವ ಬೆನ್ನಲ್ಲೇ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ "ಕೆಲ ಅವಕಾಶವಾದಿಗಳನ್ನು ನಂಬುವ" ಸಂಘ ಪರಿವಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

"ಅವರು ಕೆಲ ಅವಕಾಶವಾದಿಗಳನ್ನು ಓಲೈಸಬಹುದು. ಅವರ ನಗುವಿಗೆ ಕೆಲವರು ಬಲೆ ಬೀಳಬಹುದು. ಆದರೆ ಬಿಜೆಪಿಯನ್ನು ದೂರ ಇಡುವ ನಿರ್ಧಾರ ಕೈಗೊಂಡಿರುವ ಜನಸಾಮಾನ್ಯರ ನಿಲುವು ಇದಲ್ಲ" ಎಂದು ಪೆರಲ್‌ಶ್ಶೇರಿಯಲ್ಲಿ ಸಿಪಿಎಂ ಆಯೋಜಿಸಿದ್ದ ಎಕೆಜಿ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸ್ಪಷ್ಟಪಡಿಸಿದರು.

"ಬಹುಸಂಖ್ಯಾತರಿಂದಾಗಲೀ, ಅಲ್ಪಸಂಖ್ಯಾತರಿಂದಾಗಲೀ ಕೋಮುವಾದವನ್ನು ಕೇರಳ ಸದಾ ವಿರೋಧಿಸುತ್ತಾ ಬಂದಿದೆ. ಎರಡೂ ಅಪಾಯಕಾರಿ ಎನ್ನುವುದು ಜನರಿಗೆ ಮನವರಿಕೆಯಾಗಿದೆ. ಆದ್ದರಿಂದ ರಾಜ್ಯದಲ್ಲಿ ಬಿಜೆಪಿ ಸೋಲುತ್ತಲೇ ಬಂದಿದೆ" ಎಂದು ನುಡಿದರು.

ಚುನಾವಣೆಯಲ್ಲಿ ಬೆಂಬಲ ಕೋರಿ ಅಲ್ಪಸಂಖ್ಯಾತ ಸಮುದಾಯದ ಪ್ರಮುಖರನ್ನು ಭೇಟಿ ಮಾಡುವುದು ಸಂಘ ಪರಿವಾರದ ವೈಖರಿ. ಕೆಲವರು ಸುಲಭವಾಗಿ ಅವರ ಬಲೆಗೆ ಬೀಳುತ್ತಾರೆ" ಎಂದು ವಿಶ್ಲೇಷಿಸಿದರು.

"ಬಿಜೆಪಿ ಪ್ರತಿಯೊಂದನ್ನೂ ವಶಪಡಿಸಿಕೊಳ್ಳಲು ಬಯಸಿದೆ. ಇಂಥ ಜನರನ್ನು ಸೆಳೆಯಲು ಬೆದರಿಕೆಯನ್ನೂ ಹಾಕುತ್ತಿದೆ. ಕೆಲ ಪ್ರಕರಣಗಳಲ್ಲಿ ಅವರು ಯಶಸ್ವಿಯಾಗಬಹುದು. ಆದರೆ ಆರೆಸ್ಸೆಸ್‌ನ ನಿಜ ಸ್ವರೂಪವನ್ನು ತಿಳಿದಿರುವ ಸಾಮಾನ್ಯ ಜನರು ಅವರನ್ನು ಒಪ್ಪಿಕೊಳ್ಳುವುದಿಲ್ಲ" ಎಂದರು.

share
Next Story
X