Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಳ ಮೀಸಲಾತಿ ಜಾರಿಗೆ ಸಂಪುಟ ಒಪ್ಪಿಗೆ

ಒಳ ಮೀಸಲಾತಿ ಜಾರಿಗೆ ಸಂಪುಟ ಒಪ್ಪಿಗೆ

24 March 2023 10:45 PM IST
share
ಒಳ ಮೀಸಲಾತಿ ಜಾರಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಆರ್ಟಿಕಲ್ 342 ಅನ್ವಯ ಎಸ್ಸಿ ಸಮುದಾಯಗಳನ್ನು ನಾಲ್ಕು ಗುಂಪುಗಳಲ್ಲಿ ವರ್ಗೀಕರಿಸಲಾಗಿದೆ. ಎಸ್ಸಿ ಎಡ, ಎಸ್ಸಿ ಬಲ, ಸ್ಪರ್ಶಿಯರು, ಇತರರೆಂದು ನಾಲ್ಕು ವರ್ಗಗಳಾಗಿ ವಿಂಗಡನೆ ಮಾಡಲಾಗಿದೆ. ಸಂಪುಟ ಉಪಸಮಿತಿ ವರದಿಯ ಆಧಾರದಲ್ಲಿ ಎಡಕ್ಕೆ ಶೇ.6ರಷ್ಟು, ಬಲಕ್ಕೆ ಶೇ.5.5ರಷ್ಟು, ಸ್ಪರ್ಶಿಯರು ಶೇ.4.5ರಷ್ಟು ಇತರರಿಗೆ ಶೇ.1ರಷ್ಟು ಒಳಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನ್ಯಾ.ಸದಾಶಿವ ಆಯೋಗದ ವರದಿಯ ಪ್ರಕಾರ ಪರಿಶಿಷ್ಟ ಜಾತಿಯ 101 ಉಪಜಾತಿಗಳನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡುವಂತೆ ಶಿಫಾರಸು ಮಾಡಲಾಗಿದೆ. ಇದರ ಪ್ರಕಾರ ಶೇ.33.47ರಷ್ಟಿರುವ ಎಡಗೈ ಪ.ಜಾತಿಗೆ ಶೇ.6, ಶೇ.32.01ರಷ್ಟಿರುವ ಬಲಗೈ ಪ.ಜಾತಿಗೆ ಶೇ.5.5, ಶೇ.23.64ರಷ್ಟಿರುವ ಸ್ಪರ್ಶ ಪರಿಶಿಷ್ಟ ಜಾತಿಗೆ ಶೇ.3 ಮತ್ತು ಶೇ.4.65 ರಷ್ಟಿರುವ ಇತರ ಪರಿಶಿಷ್ಟ ಜಾತಿಯವರಿಗೆ ಶೇ.1ರಷ್ಟು ಮೀಸಲಾತಿಯನ್ನು ಹಂಚಿಕೆ ಮಾಡುವಂತೆ ಶಿಫಾರಸು ಮಾಡಿತ್ತು ಎಂದು ಅವರು ಹೇಳಿದರು.

ಇದೇ ವೇಳೆ ಸ್ಪಶ್ರ್ಯ ಜಾತಿಗಳಾದ ಲಂಬಾಣಿ, ಬೋವಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿಯ ಗುಂಪಿನಿಂದ ಹೊರಗಿಡಬೇಕೆಂಬ ಬೇಡಿಕೆಯನ್ನು ಆಯೋಗ ತಿರಸ್ಕರಿಸಿತ್ತು. ಸಮೀಕ್ಷೆಯ ಪ್ರಕಾರ ಎಡಗೈ ಗುಂಪಿನ (ಮಾದಿಗ ಜಾತಿ) ಜನಸಂಖ್ಯೆ 32,35,517 (ಶೇ.33.47), ಬಲಗೈ ಗುಂಪಿನ (ಹೊಲೆಯ ಜಾತಿ) ಜನಸಂಖ್ಯೆ 30,93,693 (ಶೇ.32.01), ಇತರೆ ಪರಿಶಿಷ್ಟ ಜಾತಿಗಳು 4,49,879 (ಶೇ.4.65) ಮತ್ತು ಸ್ಪಶ್ರ್ಯ ಜಾತಿಗಳ ಜನಸಂಖ್ಯೆ 22,84,642 (ಶೇ.23.64) ಇದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಪರಿಶಿಷ್ಟ ಜಾತಿಗಿರುವ ಶೇ.17ರಷ್ಟು ಮೀಸಲಾತಿಯನ್ನು ಸಂಪುಟ ಉಪಸಮಿತಿ ವರದಿಯ ಆಧಾರದಲ್ಲಿ ಎಡಕ್ಕೆ ಶೇ.6ರಷ್ಟು, ಬಲಕ್ಕೆ ಶೇ.5.5ರಷ್ಟು, ಸ್ಪರ್ಶಿಯರು ಶೇ.4.5ರಷ್ಟು, ಇತರರಿಗೆ ಶೇ.1ರಷ್ಟು ಒಳ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಪ್ರಕಟಿಸಿದರು.

ಮುಸ್ಲಿಂ ಸಮುದಾಯದ ಕೆಲ ಉಪಜಾತಿಗಳು 2ಎ, ಪ್ರವರ್ಗ 1ರಲ್ಲೂ ಮೀಸಲಾತಿ ಪಡೆಯುತ್ತಿದ್ದು, ಇದು ಮುಂದುವರೆಯಲಿದೆ. ಅದೇ ರೀತಿ, ನದಾಫ್, ಪಿಂಜಾರ ಸೇರಿದಂತೆ ಇನ್ನಿತರೆ ಸಮುದಾಯಗಳ ಅಭಿವೃದ್ಧಿಗೆ ಹೊಸ ನಿಗಮಗಳನ್ನು ಸ್ಥಾಪಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

share
Next Story
X