Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳದಲ್ಲಿ ಮುಂದುವರಿದ ಮುಸ್ಲಿಮ್...

ಭಟ್ಕಳದಲ್ಲಿ ಮುಂದುವರಿದ ಮುಸ್ಲಿಮ್ ಅಭ್ಯರ್ಥಿಯ ಬೇಡಿಕೆ: ತಂಝೀಮ್ ಸಂಸ್ಥೆಗೆ ಬೇಡಿಕೆ ಸಲ್ಲಿಸಿದ ಸಾರ್ವಜನಿಕರು

25 March 2023 6:26 PM IST
share
ಭಟ್ಕಳದಲ್ಲಿ ಮುಂದುವರಿದ ಮುಸ್ಲಿಮ್ ಅಭ್ಯರ್ಥಿಯ ಬೇಡಿಕೆ: ತಂಝೀಮ್ ಸಂಸ್ಥೆಗೆ ಬೇಡಿಕೆ ಸಲ್ಲಿಸಿದ ಸಾರ್ವಜನಿಕರು

ಭಟ್ಕಳ: ಭಟ್ಕಳದಲ್ಲಿ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಕಳೆದ ಎರಡು ದಿನಗಳ ಹಿಂದೆ ಮಹಿಳೆಯರು ತಂಝೀಮ್ ಸಂಸ್ಥೆಗೆ ಬೇಡಿಕೆಯಲ್ಲಿ ಸಲ್ಲಿಸಿದ್ದರೆ, ಇಂದು ಮಂಕಿ, ಉಪ್ಪಾಣಿ, ಸಂಶಿ ಭಾಗದ ಸಾರ್ವಜನಿಕರು ತಂಝೀಮ್ ಪ್ರ.ಕಾ. ಅಬ್ದುಲ್ ರಖೀಬ್ ಎಂ.ಜೆ.ಯವರಿಗೆ ಬೇಡಿಕೆ ಪತ್ರ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ, ಸಾಮಾಜಿಕ ಕಾರ್ಯಕರ್ತ ಇನಾಯತುಲ್ಲಾ ಹಯಾತ್ ನಾನು ಮುಸ್ಲಿಮ್ ಅಭ್ಯರ್ಥಿಯ ಬೇಡಿಕೆಯೊಂದಿಗೆ ಇಲ್ಲಿನ ಅತಿದೊಡ್ಡ ಸಂಸ್ಥೆಯಾಗಿರುವ ತಂಝೀಮ್ ಸಂಸ್ಥೆಗೆ ಮನವಿ ಸಲ್ಲಿಸಿದ್ದೇವೆ. ನಾವು ಇಲ್ಲಿನ ಹಿಂದೂ-ಮುಸ್ಲಿಮರು ಸೇರಿ ಮುಸ್ಲಿಮ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ನಮಗೆ ಹಿಂದೂಗಳು ಕೂಡ ಇಷ್ಟೊಂದು ದೊಡ್ಡ ಪ್ರಮಾಣದ ಮತದಾರರಿದ್ದುಕೊಂಡು ನೀವೇಕೆ ನಿಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದೂ ಕೇಳುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾವು ತಂಝೀಮ್ ಸಂಸ್ಥೆಗೆ ಬೇಡಿಕೆಯನ್ನು ಇಟ್ಟಿದ್ದೇವೆ ತಂಝೀಮ್ ಯಾವ ನಿರ್ಣಯ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡುತ್ತೇವೆ ಎಂದರು.

ಸಾಮಾಜಿಕ ಕಾರ್ಯಕರ್ತ ಜಾಲಿ ಪಟ್ಟಣ ಪಂಚಾಯತ್ ಸದಸ್ಯ ಮಿಸ್ಬಾಉಲ್ ಹಕ್  ಮಾತನಾಡಿ, ತಂಝೀಮ್ ಸಂಸ್ಥೆಯಲ್ಲಿ ಮಾ.19ರಂದು ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಟ್ಕಳದಲ್ಲಿ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸುವುದರ ಪರವಾಗಿ ನಿರ್ಣಯವಾಗಿತ್ತು. ಆದರೆ ಮರುದಿನ ನಡೆದ ಸರ್ವಜಮಾಅತ್ ಪ್ರತಿನಿಧಿಗಳ ಸಭೆಯಲ್ಲಿ ಈ ನಿರ್ಣಯ ಹೇಗೆ ಉಲ್ಟಾ ಹೊಡೆಯಿತು. ಇದರ ಹಿಂದೆ ಯಾವ ರಾಜಕೀಯ ಪಕ್ಷದವರ ಕೈವಾಡವಿದೆ? ತಂಝೀಮ್ ಕಾರ್ಯಕಾರಿ ಸಮಿತಿ ಸದಸ್ಯರೇನಾದರೂ ಇದರಲ್ಲಿ ನೇರವಾಗಿ ಭಾಗಿಯಾಗಿದ್ದಾರೆಯೇ? ಎಂದು ಪ್ರಶ್ನಿಸಿದರು. ಮುಸ್ಲಿಮ್ ಅಭ್ಯರ್ಥಿಯನ್ನು ಬೆಂಬಲಿಸಿದರೆ ಬಿಜೆಪಿ ಬರುತ್ತೆ ಎಂದು ಹೆದರಿಸುವ ಸೋ ಕಾಲ್ಡ್ ಸೆಕ್ಯುಲರ್ ಅಭ್ಯರ್ಥಿಗಳು ಮುಸ್ಲಿಮರಿಗೆ ಅನ್ಯಾಯವಾಗುತ್ತಿದ್ದರೂ ಬಾಯಿ ಮುಚ್ಚಿ ಕುಳಿತುಕೊಂಡಿದ್ದಾರೆ. ರಾಜ್ಯದಲ್ಲಿ ಮುಸ್ಲಿಮರಿಗೆ ನೀಡುತ್ತಿದ್ದ 2ಬಿ ಕೆಟಾಗರಿಯನ್ನು ಬಿಜೆಪಿ ಸರ್ಕಾರ ತೆಗೆದು ಹಾಕಿದೆ. ಈ ಕುರಿತು ಹೇಳಿಕೆ ಸೆಕ್ಯುಲರ್ ಪಾರ್ಟಿಯವರು ಹೇಳಿಕೆ ನೀಡಲಿ ಎಂದು ಪ್ರಶ್ನಿಸಿದ್ದು ಕಳೆದ ಬಾರಿ ಮುಸ್ಲಿಮ್ ಅಭ್ಯರ್ಥಿಯನ್ನು ನಿಲ್ಲಿಸದೆ ಸೆಕುಲರ್ ಪಕ್ಷಕ್ಕೆ ನಮ್ಮ ಇಡೀ 32 ಸಾವಿರ ಮತಗಳನ್ನು ಹಾಕಿದ್ದೇವೆ. ಆದರೂ ಬಿಜೆಪಿ ಏಕೆ ಬಂದಿತು. ಈಗ ನಾವು ನಮ್ಮದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬೇಡಿಕೆ ಇಟ್ಟರೆ ತಪ್ಪೇನು. ಪ್ರತಿಯೊಬ್ಬರು ತಮ್ಮ ತಮ್ಮ ಜಾತಿಯವರಿಗೆ ಬೆಂಬಲ ನೀಡುತ್ತಾರೆ ನಾವೇನು ತಪ್ಪು ಮಾಡುತ್ತಿದ್ದೇಯೇ ಎಂದು ಪ್ರಶ್ನಿಸಿದರು.

ತಂಝೀಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಕೀಖ್ ಎಂ.ಜೆ. ಮನವಿ ಪತ್ರ ಸ್ವೀಕರಿಸಿದರು.

share
Next Story
X