Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿಮಗೆ ಭರವಸೆ ಇದ್ದರೆ ನಮಗೆ ಬೆಂಬಲ ಕೊಡಿ:...

ನಿಮಗೆ ಭರವಸೆ ಇದ್ದರೆ ನಮಗೆ ಬೆಂಬಲ ಕೊಡಿ: ಅಪಾರ್ಟ್‍ಮೆಂಟ್ ಮಾಲಕರ ಸಭೆಯಲ್ಲಿ ಡಿಕೆಶಿ

25 March 2023 10:12 PM IST
share
ನಿಮಗೆ ಭರವಸೆ ಇದ್ದರೆ ನಮಗೆ ಬೆಂಬಲ ಕೊಡಿ: ಅಪಾರ್ಟ್‍ಮೆಂಟ್ ಮಾಲಕರ ಸಭೆಯಲ್ಲಿ ಡಿಕೆಶಿ

ಬೆಂಗಳೂರು, ಮಾ. 25: ‘ನಿಮ್ಮ ಮತಕ್ಕಿಂತ ನಿಮ್ಮ ಜ್ಞಾನ-ಸಲಹೆ ಬಹಳ ಮುಖ್ಯ. ಕಾಂಗ್ರೆಸ್ ಪಕ್ಷ ನಿಮ್ಮ ಜತೆ ನಿಲ್ಲಲಿದೆ ಎಂಬ ಭರವಸೆ ಇದ್ದರೆ ಮಾತ್ರ ನೀವು ನಮಗೆ ಬೆಂಬಲ ಕೊಡಿ. ನಿಮ್ಮ ಧ್ವನಿ ನಮ್ಮ ಧ್ವನಿಯಾಗಬೇಕೆಂದು ಅಪಾರ್ಟ್‍ಮೆಂಟ್ ಘಟಕ ಆರಂಭಿಸಿದ್ದೇವೆ. ಈ ಬೆಂಗಳೂರನ್ನು ಜಾಗತಿಕ ನಗರವನ್ನಾಗಿ ಮಾಡುವುದು ನಮ್ಮ ಗುರಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಅಪಾರ್ಟ್‍ಮೆಂಟ್ ಮಾಲಕರ ಸಭೆಯಲ್ಲಿ ಮಾತನಾಡಿದ ಅವರು, ‘ನಾನು ಹಳ್ಳಿಯಿಂದ ಬಂದಿದ್ದರೂ ಬೆಂಗಳೂರಿನ ನಿವಾಸಿಯಾಗಿದ್ದಾನೆ. ಇಲ್ಲಿನ ಸಮಸ್ಯೆಗಳನ್ನು ಅರಿತಿದ್ದೇನೆ. ಬೆಂಗಳೂರು ನಾಗರೀಕರು ಅದರಲ್ಲೂ ಅಪಾರ್ಟ್‍ಮೆಂಟ್ ನಿವಾಸಿಗಳು ಸುರಕ್ಷಿತವಾಗಿ ಜೀವಿಸಲು ಬಯಸುತ್ತಾರೆ ಎಂದು ಹೇಳಿದರು.

ಈ ಹಿಂದೆ ನಿವೇಶನಗಳನ್ನು ಹಂಚುವ ಪದ್ಧತಿ ಇತ್ತು. ಆದರೆ ಈಗ ಅಪಾರ್ಟ್‍ಮೆಂಟ್‍ಗಳು ಹೆಚ್ಚುತ್ತಿವೆ. ನಾವು ಬೆಂಗಳೂರು ಹಾಗೂ ಅದರ ನಾಗರಿಕರನ್ನು ಕಾಪಾಡಿಕೊಳ್ಳಬೇಕು. ಶೇ.39ರಷ್ಟು ತೆರಿಗೆ ರೂಪದ ಆದಾಯ ಇಲ್ಲಿಂದಲೇ ಉತ್ಪಾದನೆಯಾಗುತ್ತಿದೆ. ಸುಶಿಕ್ಷಿತರು ಶೇ.80ರಷ್ಟು ಮಂದಿ ಅಪಾರ್ಟ್‍ಮೆಂಟ್‍ಗಳಲ್ಲಿ ವಾಸ ಮಾಡುತ್ತಿದ್ದಾರೆ. ಇವರಿಗೆ ರಕ್ಷಣೆ ಭರವಸೆ ನೀಡಬೇಕಾಗಿದೆ. ಈ ಹಿಂದೆ ರೇರಾ ವಿಚಾರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಆದರೆ, ಪಕ್ಷ ಈ ವಿಚಾರವಾಗಿ ಧೃಡ ಸಂಕಲ್ಪ ಮಾಡಿ ರೇರಾ ತಂದು ಹಂತ ಹಂತವಾಗಿ ಸುಧಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಭಾರತವನ್ನು ಬೆಂಗಳೂರಿನ ಮೂಲಕ ನೋಡುವ ಸ್ಥಿತಿ ನಿರ್ಮಾಣವಾಗಿದೆ. ಈ ಮಾತನ್ನು ಸ್ವತಃ ಅಟಲ್ ಬಿಹಾರಿ ವಾಜಪೇಯಿಯವರೇ ಹೇಳಿದ್ದರು. ಇಲ್ಲಿರುವ ಜನ ಬಹಳ ಬುದ್ಧಿವಂತರಿದ್ದಾರೆ. ಇಲ್ಲಿರುವ ಮಾನವ ಸಂಪನ್ಮೂಲ ಅತ್ಯುತ್ತಮವಾಗಿದೆ. ಸ್ವಾತಂತ್ರ್ಯ ಬಂದ ನಂತರ ನೆಹರೂ ಅವರ ನಾಯಕತ್ವದಲ್ಲಿ ಇಲ್ಲಿ ಅನೇಕ ಸಾರ್ವಜನಿಕ ಉದ್ದಿಮೆ ಸ್ಥಾಪಿಸಿದ್ದರು ಎಂದು ಹೇಳಿದರು.

ಅಪಾರ್ಟ್‍ಮೆಂಟ್‍ಗಳು ತೆರಿಗೆ ನೀಡುತ್ತಿವೆ. ಪಾಲಿಕೆ ನಿಮ್ಮಿಂದ ವಸೂಲಿ ಮಾಡುತ್ತಿದೆಯೇ ಹೊರತು ನಿಮಗೆ ಪ್ರತಿಯಾಗಿ ಏನನ್ನೂ ಮಾಡುತ್ತಿಲ್ಲ. ನಾನು ಇನ್ನೊಂದು ದಿನ ನಿಮ್ಮ ಜತೆ ಕೂತು ಚರ್ಚೆ ಮಾಡಲು ಸಿದ್ಧನಿದ್ದೇನೆ. ಬೆಂಗಳೂರು ದೇಶಕ್ಕೆ ಹೃದಯವಿದ್ದಂತೆ ಇದನ್ನು ನಾವು ಬೆಳೆಸಿ ಉಳಿಸಿಕೊಳ್ಳಬೇಕು. ಇಲ್ಲಿರುವ ಮಾನವ ಸಂಪನ್ಮೂಲಗಳನ್ನು ನಾವು ಬಳಸಿಕೊಳ್ಳಬೇಕು’ ಎಂದು ಅವರು ತಿಳಿಸಿದರು.

share
Next Story
X