Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ...

ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣಾ ಸರಕು: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

30 March 2023 5:45 PM IST
share
ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣಾ ಸರಕು: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು, ಮಾ. 30: ‘ಶ್ರೀರಾಮನವಮಿ’ಗೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶುಭ ಕೋರಿರುವುದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ. ‘ರಾಮಭಕ್ತನ’ ವೇಷ ತೊಟ್ಟು, ‘ಚುನಾವಣಾ ನಿಮಿತ್ತ ಬಹುಕೃತವೇಷ’ವೆಂಬ ನುಡಿಯ ಗೌರವ ಹೆಚ್ಚಿಸಿದ್ದಾರೆ’ ಎಂದು ಬಿಜೆಪಿ, ಸಿದ್ದರಾಮಯ್ಯರ ವಿರುದ್ಧ ವಾಗ್ದಾಳಿ ನಡೆಸಿದೆ.

ಗುರುವಾರ ವಿಪಕ್ಷ ನಾಯಕ ಸಿದ್ದರಾಮಯ್ಯ, ‘ಆದರ್ಶ ಪುರುಷ ಶ್ರೀರಾಮನು ಹಾಕಿಕೊಟ್ಟ ಪ್ರೀತಿ, ಸಹಾನುಭೂತಿ, ಅಂತಃಕರಣ, ನ್ಯಾಯ ಪರಿಪಾಲನೆಯ ಹಾದಿಯಲ್ಲಿ ಮುನ್ನಡೆಯೋಣ. ಪಾನಕ, ಕೋಸಂಬರಿಯ ಜೊತೆ ಸ್ನೇಹ, ಸೌಹಾರ್ದತೆ ಮಿಳಿತಗೊಳ್ಳಲಿ, ಮನುಷ್ಯಪ್ರೇಮದ ಬೆಳಕು ಜಗದಗಲ ಬೆಳಗಲಿ. ನಾಡಿನ ಸಮಸ್ತ ಜನತೆಗೆ ರಾಮನವಮಿಯ ಶುಭಹಾರೈಕೆಗಳು’ ಎಂದು ಟ್ವೀಟ್ಟರ್‍ನಲ್ಲಿ ಕೋರಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ‘ಪ್ರಭು ಶ್ರೀರಾಮಚಂದ್ರನ ಅಸ್ತಿತ್ವವನ್ನೇ ಪ್ರಶ್ನಿಸುವ..ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರದ ವಿರುದ್ಧವೇ ಸಮರ ಸಾರಿದ, ಪ್ರಭು ಶ್ರೀ ರಾಮಚಂದ್ರನ ರಾಮರಾಜ್ಯವನ್ನು ಟೀಕಿಸುವ, ಅಲ್ಪರ ಗುಂಪಿನ ‘ಪೋಷ್ಟರ್ ಬಾಯ್’ ಸಿದ್ದರಾಮಯ್ಯನವರು ‘ರಾಮಭಕ್ತನ’ ವೇಷ ತೊಟ್ಟು, ‘ಚುನಾವಣಾ ನಿಮಿತ್ತ ಬಹುಕೃತವೇಷ’ವೆಂಬ ನುಡಿಯ ಗೌರವ ಹೆಚ್ಚಿಸಿದ್ದಾರೆ’ ಎಂದು ಟೀಕಿಸಿದೆ.

ಬಳಿಕ ಬಿಜೆಪಿ ಟೀಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ‘ಮಹಾತ್ಮ ಗಾಂಧಿಯವರು ನಂಬಿದ್ದ ಮಾನವೀಯ ಗುಣಗಳ, ಮಾತೃಹೃದಯದ, ಸರ್ವವನ್ನೂ ಪ್ರೀತಿಸುವ ರಾಮನ ಅನುಯಾಯಿ ನಾನು. ರಾಮನ ಹೆಸರಿನಲ್ಲಿ ದ್ವೇಷಬಿತ್ತಿ, ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು. ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣಾ ಸರಕು. ಶ್ರೀರಾಮನೇ ನಿಮಗೆ ಸದ್ಬುದ್ಧಿ ನೀಡಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
Next Story
X