ವಿಶ್ವದ ಮೊದಲ ‘COSMOS-Mysuru’ ತಾರಾಲಯ ಲೋಕಾರ್ಪಣೆಗೆ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರು : ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ಡೋಮ್ ತಾರಾಲಯವಾದ ‘COSMOS-Mysuru’ ಅನ್ನು ಲೋಕಾರ್ಪಣೆ ಮಾಡಲು ಶುಕ್ರವಾರ ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಲಲಿತ ಮಹಲ್ ಹೆಲಿಪ್ಯಾಡ್ನಲ್ಲಿ ರಾಜ್ಯಪಾಲೆ ಡಾ.ಸುಧಾ ಯಾದವ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಡಾ. ಲಕ್ಷ್ಮಿಕಾಂತ ರೆಡ್ಡಿ ಜಿ., ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Next Story




