Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಪ್ರಚಲಿತ
  5. ನಿತ್ಯ ಬೆತ್ತಲಾಗುತ್ತಿರುವ ಆಯೋಗ

ನಿತ್ಯ ಬೆತ್ತಲಾಗುತ್ತಿರುವ ಆಯೋಗ

ಸನತ್ ಕುಮಾರ ಬೆಳಗಲಿಸನತ್ ಕುಮಾರ ಬೆಳಗಲಿ2 Nov 2026 9:57 AM IST
share
ನಿತ್ಯ ಬೆತ್ತಲಾಗುತ್ತಿರುವ ಆಯೋಗ

ಕರ್ನಾಟಕದ ಜನಸಂಖ್ಯೆ ಕಡಿಮೆಯಾಗಿಲ್ಲ. ರಾಷ್ಟ್ರೀಯ ಜನಸಂಖ್ಯಾ ಆಯೋಗದ ಅಂದಾಜಿನ ಪ್ರಕಾರ ರಾಜ್ಯದ ಜನಸಂಖ್ಯೆ ಈಗ 6.87 ಕೋಟಿ. ಲಕ್ಷಾಂತರ ಮತದಾರರು ಬೇರೆಡೆಗೆ ವಲಸೆ ಹೋಗಿದ್ದಾರೆ ಎಂದಾದರೆ,

ಇತರೆಡೆ ಈ ಪ್ರಮಾಣಕ್ಕೆ ಅನುಗುಣವಾಗಿ ಮತದಾರರ ಸಂಖ್ಯೆ ಹೆಚ್ಚಾಗಿದೆಯೇ ಎಂಬ ಪ್ರಶ್ನೆಗೆ ಉತ್ತರ ಎಲ್ಲಿದೆ?

ಎನ್.ಕೆ.ಶೇಷನ್ ಅವರು ಮುಖ್ಯ ಆಯುಕ್ತರಾಗಿದ್ದ ಕಾಲದಲ್ಲಂತೂ ಆಯೋಗ ರಾಜಕಾರಣಿಗಳಿಗೆ ಲಗಾಮು ಹಾಕಿದ ಕ್ರಮ ವ್ಯಾಪಕವಾಗಿ ಮೆಚ್ಚುಗೆ ಗಳಿಸಿತ್ತು.ಆ ವರೆಗೆ ಒಬ್ಬರೇ ಆಯುಕ್ತರನ್ನು ಹೊಂದಿದ್ದ ಚುನಾವಣಾ ಆಯೋಗಕ್ಕೆ ಇನ್ನಿಬ್ಬರು ಆಯುಕ್ತರನ್ನು ನೇಮಕ ಮಾಡಿ, ಶೇಷನ್‌ಗೆ ಕಡಿವಾಣ ಹಾಕಲು ಯತ್ನಿಸಲಾಯಿತು.

ಹನ್ನೆರಡು ವರ್ಷಗಳ ಹಿಂದೆ ಕೇಂದ್ರದ ಅಧಿಕಾರ ಸೂತ್ರ ಹಿಡಿದ ನರೇಂದ್ರ ಮೋದಿಯವರ ನೇತೃತ್ವದ ಸರಕಾರ ಪ್ರಭುತ್ವದ ಜೊತೆಗೆ, ಸಾಂವಿಧಾನಿಕ ಸ್ಥಾನ ಮಾನ ಹೊಂದಿರುವ ಸ್ವಾಯತ್ತ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಲು ಮುಂದಾಯಿತು.ಅದರ ಮೊದಲ ಗುರಿ ಚುನಾವಣಾ ಆಯೋಗ ವಾಯಿತು. ಅದರ ಮೂಲಕ ಮಾಡಬಾರದ್ದೆನ್ನಲ್ಲ ಮಾಡಿಸುತ್ತಲೇ ಬಂದ ಮೋದಿ ಸರಕಾರದ ಕುತಂತ್ರ ಈಗ ಬಟ ಬಯಲಾಗಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಚುನಾವಣಾ ಆಯೋಗ ಕೋಟ್ಯಂತರ ಮತದಾರರ ಮತದ ಹಕ್ಕನ್ನು ಕಸಿದುಕೊಂಡು ಅವರನ್ನು ಮತದಾರರ ಪಟ್ಟಿಯಿಂದ ಹೊರ ಹಾಕಿದೆ. ಹೊರ ಹಾಕಲ್ಪಟ್ಟವರೆಲ್ಲ ಪಾಕಿಸ್ತಾನಿಗಳು ಮತ್ತು ಬಾಂಗ್ಲಾ ದೇಶಿಯರು ಎಂದು ಕತೆ ಕಟ್ಟುತ್ತಿದೆ. ಇದು ವಿವಾದವಾಗಿ ಆಕ್ಷೇಪ ಗಳು ಬಂದ ನಂತರ, ಇನ್ನಿಬ್ಬರು ಚುನಾವಣಾ ಆಯುಕ್ತರು ಕೆಲವು ವಿಷಯಗಳಲ್ಲಿ ತಮ್ಮೊಂದಿಗೆ ಸಮಾಲೋಚನೆ ಮಾಡದೇ ಮುಖ್ಯ ಚುನಾವಣಾ ಆಯುಕ್ತರೇ ಏಕ ಪಕ್ಷೀಯವಾಗಿ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.ಈ ಪ್ರಕರಣ ಸುಪ್ರೀಂ ಕೋರ್ಟಿಗೆ ಹೋಯಿತು. ಆಗ ತನ್ನ ಮಾನ ಮರ್ಯಾದೆಯನ್ನು ಕಾಪಾಡಿಕೊಳ್ಳಲು ಮುಂದಾದ ಚುನಾವಣಾ ಆಯೋಗ ಕೈಗೊಂಡಿರುವ ಎಲ್ಲ ತೀರ್ಮಾನ ಗಳು ಸರ್ವಾನುಮತದಿಂದ ಕೂಡಿವೆ ಎಂದು ವಿವರಣೆಯನ್ನು ನೀಡಿ ಪ್ರಮಾಣ ಪತ್ರ ಸಲ್ಲಿಸಿತು.

ಚುನಾವಣಾ ಆಯೋಗ ಸುಪ್ರೀಂಕೋರ್ಟಿಗೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಇಬ್ಬರು ಚುನಾವಣಾ ಆಯುಕ್ತರಾದ ವಿವೇಕ್ ಜೋಶಿ ಮತ್ತು ಸುಖ್ಬೀರ್ ಸಿಂಗ್ ಸಂಧು ಅವರು ವ್ಯಕ್ತಪಡಿಸಿದ ಭಿನ್ನಾಭಿಪ್ರಾಯಗಳು ಮತ್ತು ದಾಖಲಿಸಿರುವ ಆಕ್ಷೇಪಗಳು ಸಮಾಲೋಚನಾ ಪ್ರಕ್ರಿಯೆಯ ಭಾಗವಾಗಿಯೇ ಇವೆ ಎಂದು ಹೇಳಿತು.

ಆದರೆ ಇಬ್ಬರು ಚುನಾವಣಾ ಆಯುಕ್ತರೇ ದಾಖಲಿಸಿರುವಂತೆ ಬಹುತೇಕ ಆಕ್ಷೇಪಗಳು ಆಯೋಗವು ನೀಡಿರುವ ಆದೇಶಗಳಿಗೆ ಸಂಬಂಧಿಸಿದವುಗಳಾಗಿವೆ. ತಮ್ಮ ಗಮನಕ್ಕೆ ತಾರದೇ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಮತ್ತು ಆದೇಶಗಳನ್ನು ನೀಡಲಾಗಿದೆ ಎಂದು ಆಯುಕ್ತರಿಬ್ಬರು ಹೇಳಿರುವುದು ಸ್ಪಷ್ಟವಾಗಿರುವಾಗ ಚುನಾವಣಾ ಆಯೋಗದ ನಿರ್ಧಾರಗಳು ಸರ್ವಾನುಮತದಿಂದ ಕೂಡಿವೆ ಎಂದು ಹೇಳುವುದಕ್ಕೆ ಹೇಗೆ ಸಾಧ್ಯ?

ಚುನಾವಣಾ ಆಯೋಗ ತನ್ನ ತಪ್ಪುಗಳನ್ನು ಸಮರ್ಥಿಸಿಕೊಳ್ಳಲು ಹೋಗಿ ನಿತ್ಯವೂ ಬೆತ್ತಲಾಗುತ್ತಲೇ ಇದೆ. ಸುಪ್ರೀಂ ಕೋರ್ಟಿಗೆ ಸಲ್ಲಿಸಲಾದ ಪ್ರಮಾಣ ಪತ್ರದಲ್ಲಿ ವಿವರಿಸಲಾದ ವಿಷಯಗಳಿಗೆ ಸಂಬಂಧಿಸಿದಂತೆ ಪೂರಕವಾದ ದಾಖಲೆಗಳನ್ನು ಚುನಾವಣಾ ಆಯೋಗ ನೀಡಿಲ್ಲ. ಸದರಿ ಆಯೋಗವು ತಪ್ಪು ಹೇಳಿಕೆಗಳನ್ನು ನೀಡಿ ಸಮರ್ಥಿಸಿಕೊಳ್ಳುತ್ತಲೇ ಬಂದಿದೆ. ಕಾರಣ ಚುನಾವಣಾ ಆಯೋಗ ದ

ಪ್ರಮಾಣ ಪತ್ರವನ್ನು ಪರಿಶೀಲನೆಗೆ ಒಳಪಡಿಸದೇ ನಂಬುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಆಯೋಗ ಇಕ್ಕಟ್ಟಿಗೆ ಸಿಲುಕಿದೆ.

ಚುನಾವಣಾ ಆಯೋಗದ ನಡೆಯ ಕುರಿತು ಕರ್ನಾಟಕ ರಾಜ್ಯವನ್ನು ಉದಾಹರಣೆಯಾಗಿ ತೆಗೆದುಕೊಂಡರೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆಯ ಭಾಗವಾಗಿ 99.32 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಹಾಕಿರುವುದು ಇಡೀ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡಿದೆ. ಈ ಪ್ರಕ್ರಿಯೆಯ ಪರಿಣಾಮವಾಗಿ ರಾಜ್ಯದ ಮತದಾರರ ಪ್ರಮಾಣವು ಶೇ. 17.91 ಲಕ್ಷದಷ್ಟು ಕುಸಿದಿದೆ.ಒಟ್ಟು ಮತದಾರರ ಸಂಖ್ಯೆಯು 4.55 ಕೋಟಿಗೆ ಇಳಿದಿದೆ.ಮತದಾರರ ಪಟ್ಟಿಯಲ್ಲಿ ಹೆಸರು ತೆಗೆದು ಹಾಕಿದ 99.32 ಲಕ್ಷ ಜನರ ಪೈಕಿ 23.49 ಲಕ್ಷ ಮಂದಿ ಮೃತಪಟ್ಟವರು ಅಥವಾ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದವರಾಗಿದ್ದಾರೆ ಎಂದು ಆಯೋಗ ಹೇಳುತ್ತದೆ. ಹಾಗಾದರೆ ಉಳಿದ 70 ಲಕ್ಷ ಮಂದಿ ಯಾರು? ಇವರು ನಿಜವಾಗಿ ಅನರ್ಹರೆ ಅಥವಾ ಅರ್ಹ ಮತದಾರರಾಗಿದ್ದುಕೊಂಡೂ ತಪ್ಪಾಗಿ ಹೆಸರು ಅಳಿಸಿ ಹಾಕಲ್ಪಟ್ಟವರೇ ಎಂಬ ಪ್ರಶ್ನೆಗೆ ಉತ್ತರ ಬೇಕಾಗಿದೆ.

ವಾಸ್ತವವಾಗಿ ಕರ್ನಾಟಕದ ಒಟ್ಟು ಜನಸಂಖ್ಯಾ ಸ್ವರೂಪವನ್ನು ಗಮನಿಸಿದರೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಪರಿಷ್ಕರಣೆಯ ಹೆಸರಿನಲ್ಲಿ ಮತದಾರರ ಹೆಸರುಗಳನ್ನು ಅಳಿಸಿ ಹಾಕುವುದನ್ನು ಅರ್ಥ ಮಾಡಿಕೊಳ್ಳುವುದು ಸುಲಭವಲ್ಲ. ಕರ್ನಾಟಕದ ಜನಸಂಖ್ಯೆ ಕಡಿಮೆಯಾಗಿಲ್ಲ. ರಾಷ್ಟ್ರೀಯ ಜನಸಂಖ್ಯಾ ಆಯೋಗದ ಅಂದಾಜಿನ ಪ್ರಕಾರ ರಾಜ್ಯದ ಜನಸಂಖ್ಯೆ ಈಗ 6.87 ಕೋಟಿ. ಲಕ್ಷಾಂತರ ಮತದಾರರು ಬೇರೆಡೆಗೆ ವಲಸೆ ಹೋಗಿದ್ದಾರೆ ಎಂದಾದರೆ ,ಇತರೆಡೆ ಈ ಪ್ರಮಾಣಕ್ಕೆ ಅನುಗುಣವಾಗಿ ಮತದಾರರ ಸಂಖ್ಯೆ ಹೆಚ್ಚಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರ ಎಲ್ಲಿದೆ? ಚುನಾವಣಾ ಆಯೋಗದ ನಡೆ ಉದ್ದಕ್ಕೂ ಸಂದೇಹಾಸ್ಪದವಾಗಿದೆ. ಮತದಾರರ ಕರಡು ಪಟ್ಟಿಯಲ್ಲಿ ಇದ್ದವರ ಹೆಸರುಗಳು ಅಂತಿಮ ಪಟ್ಟಿಯ ಹೊತ್ತಿಗೆ ಅರ್ಹರಲ್ಲದವರು ಎಂದು ಗುರುತಿಸಲ್ಪಟ್ಟು ನಾಪತ್ತೆಯಾಗಿವೆ. 61,867 ಮತದಾರರ ವಿಚಾರದಲ್ಲೂ ಸಹಜವಾಗಿ ಕೆಲವು ಪ್ರಶ್ನೆಗಳು ಉದ್ಭವವಾಗುತ್ತವೆ.ಮತದಾರರ ಪಟ್ಟಿಯಲ್ಲಿ ಉಳಿಯಲು ಚುನಾವಣಾ ಆಯೋಗವು ನಿಗದಿಪಡಿಸಿದ ಹನ್ನೊಂದು ದಾಖಲೆಗಳಲ್ಲಿ ಒಂದನ್ನಾದರೂ ಒದಗಿಸಲು ಭಾರತದ ಪೌರರಾಗಿರುವ ಈ ಮತದಾರರು ವಿಫಲರಾದರೇ? ಹೀಗೆ ಮತದಾರರ ಪಟ್ಟಿಯಿಂದ ಅಳಿಸಿ ಹಾಕಲ್ಪಟ್ಟವರಲ್ಲಿ ನಗರ ಪ್ರದೇಶದ ಬಡವರು, ಕೊಳೆಗೇರಿ ನಿವಾಸಿಗಳು, ವಸತಿ ರಹಿತರು ಮತ್ತು ಮದುವೆಯ ಕಾರಣಕ್ಕಾಗಿ ದಾಖಲೆಗಳಲ್ಲಿ ಹೆಸರು ಬದಲಾವಣೆಗೊಂಡ ಮಹಿಳೆಯರು ಸೇರಿದ್ದಾರಲ್ಲವೇ?

ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಾಗ ಯಾವುದೇ ಮತದಾರನನ್ನು ಪಟ್ಟಿಯಿಂದ ತೆಗೆದು ಹಾಕುವಾಗ ಅನರ್ಹತೆಗೆ ಕಾರಣವಾಗಿರುವ ಲೋಪಗಳ ಕುರಿತು ಸ್ಪಷ್ಟ ಸಾಕ್ಷ್ಯಾಧಾರಗಳನ್ನು ನೀಡಬೇಕು. ಕಠಿಣವಾದ ದಾಖಲಾತಿಗಳನ್ನು ನೀಡಲಾಗದ ನಾಗರಿಕನ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಸರಿಯೇ ಎಂಬ ಪ್ರಶ್ನೆಗೆ ಉತ್ತರ ಬೇಕಾಗಿದೆ. ಒಟ್ಟಾರೆ ಮತದಾರರ ಪಟ್ಟಿಯ ಪರಿಷ್ಕರಣೆಯ ಇಡೀ ಪ್ರಕ್ರಿಯೆ ಕಳವಳಕಾರಿಯಾಗಿದೆ.

ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದಂತೆ 1950 ರ ಜನತಾ ಪ್ರಾತಿನಿಧ್ಯ ಕಾಯ್ದೆ ಕೆಲವು ಮಾರ್ಗಸೂಚಿಗಳನ್ನು ನೀಡಿದೆ.ಮತದಾರರ ಪಟ್ಟಿಯಿಂದ ಯಾವುದೇ ವ್ಯಕ್ತಿಯ ಹೆಸರನ್ನು ತೆಗೆದು ಹಾಕುವ ಮೊದಲು ಸಂಬಂಧಿಸಿದ ವ್ಯಕ್ತಿಗೆ ನೋಟಿಸ್ ಜಾರಿ ಮಾಡಬೇಕೆಂಬುದು ಈ ಮಾರ್ಗಸೂಚಿಯಲ್ಲಿ ಇರುವ ಮಹತ್ವದ ಅಂಶವಾಗಿದೆ.

ಲಕ್ಷಾಂತರ ಜನರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕುವಾಗ ಮಾರ್ಗಸೂಚಿಯ ಈ ನಿಯಮವನ್ನು ಪಾಲಿಸಲಾಗಿದೆಯೇ ಎಂಬ ಪ್ರಶ್ನೆಗೂ ಉತ್ತರ ಬೇಕಾಗಿದೆ.ಇದಕ್ಕೆ ಸಂಬಂಧಿಸಿದವರು ಉತ್ತರ ನೀಡಬೇಕಲ್ಲದೇ ,ಬಿಜೆಪಿ ನಾಯಕರಲ್ಲ.

ಒಟ್ಟಾರೆ ಚುನಾವಣಾ ಆಯೋಗದ ನಡೆ,ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಕೈಗೊಂಡ ಕ್ರಮಗಳು ,ಉಳಿದ ಇಬ್ಬರು ಆಯುಕ್ತರ ಅಸಮಾಧಾನ ಇವೆಲ್ಲವೂ ಸಹಜವಾಗಿ ಸಂದೇಹಾಸ್ಪದವಾಗಿವೆ. ಕಾರಣ ಮುಖ್ಯ ಚುನಾವಣಾ ಆಯುಕ್ತರು ಮರ್ಯಾದೆಯಿಂದ ಪದತ್ಯಾಗ ಮಾಡುವುದು ಸೂಕ್ತವಾಗಿದೆ.

Tags

Election CommissionCommission
share
ಸನತ್ ಕುಮಾರ ಬೆಳಗಲಿ
ಸನತ್ ಕುಮಾರ ಬೆಳಗಲಿ
Next Story
X