Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಶಿಕ್ಷಣ ನೀತಿಯ ಕರಡು ರಚನೆಗೆ...

ರಾಜ್ಯ ಶಿಕ್ಷಣ ನೀತಿಯ ಕರಡು ರಚನೆಗೆ ಪ್ರೊ. ಸುಖ್‌ದೇವ್ ಥೋರಟ್ ನೇತೃತ್ವದ ಆಯೋಗ

ವಾರ್ತಾಭಾರತಿವಾರ್ತಾಭಾರತಿ11 Oct 2023 11:24 PM IST
share
ರಾಜ್ಯ ಶಿಕ್ಷಣ ನೀತಿಯ ಕರಡು ರಚನೆಗೆ ಪ್ರೊ. ಸುಖ್‌ದೇವ್ ಥೋರಟ್ ನೇತೃತ್ವದ ಆಯೋಗ

ಬೆಂಗಳೂರು, ಅ.11: ಕರ್ನಾಟಕ ರಾಜ್ಯ ಶಿಕ್ಷಣ ನೀತಿ (ಎಸ್ಇಪಿ)ಯ ಕರಡು ಸಿದ್ಧಪಡಿಸಲು ಯುಜಿಸಿಯ ಮಾಜಿ ಅಧ್ಯಕ್ಷ ಪ್ರೊ. ಸುಖ್‌ ದೇವ್ ಥೋರಟ್ ಅಧ್ಯಕ್ಷತೆಯಲ್ಲಿ 15 ಮಂದಿ ತಜ್ಞರ ಆಯೋಗವನ್ನು ರಚನೆ ಮಾಡಿ ರಾಜ್ಯ ಸರಕಾರವು ಬುಧವಾರ ಆದೇಶ ಹೊರಡಿಸಿದೆ.

ಉನ್ನತ ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ಡಾ. ಭಾಗ್ಯವನ ಎಸ್. ಮುದಿಗೌಡ್ರ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿದ್ದು, ಆಯೋಗವು ಫೆ.28ರೊಳಗೆ ವರದಿಯನ್ನು ನೀಡುವಂತೆ ಸೂಚಿಸಲಾಗಿದೆ.

ಕರ್ನಾಟಕದಲ್ಲಿ ಶಾಲೆ ಮತ್ತು ಉನ್ನತ ಶಿಕ್ಷಣದ ಪರಾಮರ್ಶೆ ನಡೆಸಿ ನೀತಿಯನ್ನು ಆಯೋಗವು ರೂಪಿಸಲಿದೆ. ಸುಧಾರಿತ ಗುಣಮಟ್ಟದ ಶಿಕ್ಷಣವನ್ನು ಎಲ್ಲರಿಗೂ ಸಮಾನವಾಗಿ ಒದಗಿಸುವುದು ಆಯೋಗದ ಉದ್ದೇಶವಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಸಂಜಯ್ ಕೌಲ್, ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಪ್ರೊ.ಎಸ್.ಜಾಫೆಟ್, ಮಾಜಿ ಕುಲಪತಿ ಪ್ರೊ. ಜೋಗನ್ ಶಂಕರ್, ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆ್ ಇಂಡಿಯಾ ಯೂನಿವರ್ಸಿಟಿಯ ಕುಲಪತಿ ಡಾ. ಸುಧೀರ್ ಕೃಷ್ಣಸ್ವಾಮಿ, ಪ್ರೊ. ರಾಜೇಂದ್ರ ಚೆನ್ನಿ, ಡಾ. ನಟರಾಜ್ ಭೂದಾಳು ಆಯೋಗದ ಸದಸ್ಯರಾಗಿದ್ದಾರೆ.

ಹೊಸದಿಲ್ಲಿಯಲ್ಲಿರುವ ಉನ್ನತ ಮತ್ತು ವೃತ್ತಿಪರ ಶಿಕ್ಷಣ, ರಾಷ್ಟ್ರೀಯ ಶೈಕ್ಷಣಿಕ, ಯೋಜನೆ, ಆಡಳಿತ ವಿಭಾಗದ ಮುಖ್ಯಸ್ಥ ಸುದಾಂಶು ಭೂಷಣ್, ಪ್ರೊ. ಪ್ರಣತಿ ಪಾಂಡಾ, ಹೊಸದಿಲ್ಲಿಯ ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾನಿಲಯದ ಡಾ.ಫುರ್ಕಾನ್ ಕಮರ್, ಹೈದರಾಬಾದ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಶರತ್ ಅನಂತಮೂರ್ತಿ ಆಯೋಗದ ಸದಸ್ಯರಾಗಿದ್ದಾರೆ.

ಅಜೀಮ್ ಪ್ರೇಮ್ ಜಿ ವಿವಿಯ ಪ್ರಾಧ್ಯಾಪಕ ಎ. ನಾರಾಯಣ, ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ, ಡಾ.ಎಂ.ಎಸ್. ತಳವಾರ್, ಶೈಕ್ಷಣಿಕ ಸಿಬ್ಬಂದಿ ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯ. ಬೆಂಗಳೂರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಸಂತೋಷ್ ನಾಯ್ಕ್, ಸಹ ಪ್ರಾಧ್ಯಾಪಕಿ ಡಾ.ವಿನಯ ಒಕ್ಕುಂದ ಆಯೋಗದ ಸದಸ್ಯರಾಗಿದ್ದಾರೆ.

ಇದರೊಂದಿಗೆ ಹೆಚ್ಚುವರಿಯಾಗಿ 8 ಜನ ತಜ್ಞರನ್ನು ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಚಿಂತಕ ಯೋಗೇಂದ್ರ ಯಾದವ್, ಕನ್ನಡ ವಿಶ್ವವಿದ್ಯಾಲಯಯ ನಿವೃತ್ತ ಪ್ರಾಧ್ಯಾಪಕ ಪ್ರೊ.ರಹಮತ್ ತರೀಕೆರೆ, ಇತಿಹಾಸ ತಜ್ಞ ಜಾನಕಿ ನಾಯರ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್. ಚಂದ್ರಶೇಖರ ಶೆಟ್ಟಿ ಸದಸ್ಯರಾಗಿದ್ದಾರೆ.

ಲಡಾಖ್‌ ನ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರೇಟಿವ್ಸ್ ನಿರ್ದೇಶಕ ಸೋನಮ್ ವಾಂಗ್ಚುಕ್, ಜೆಎನ್ಯುನ ಪ್ರಾಧ್ಯಾಪಕ ಪ್ರೊ. ವಲೇರಿಯನ್ ರೊಡ್ರಿಗಸ್, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಸಬಿಹಾ ಭೂಮಿಗೌಡ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರು(ಮಾಜಿ ಅಧಿಕಾರಿ) ಸಮಿತಿಯ ಸದಸ್ಯರಾಗಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯು ನೋಡಲ್ ಅಧಿಕಾರಿಗಳನ್ನು ನೇಮಿಸಲಿದ್ದು, ಅವರು ಆಯೋಗಕ್ಕೆ ಬೇಕಾದ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಾರೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ʼʼಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್ದೇವ್ ಥೋರಟ್ ಅವರ ಅ‌ಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಾರಸುಗಳನ್ನು ನೀಡಲಿದೆ ಎಂಬ ‘ರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿʼʼ

- ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X