ಟಣಮಕಲ್ಲು ಹೀರೆಹಳ್ಳ ಸೇತುವೆ ಮುಳುಗಡೆ; ಗ್ರಾಮಸ್ಥರ ಪರದಾಟ

ರಾಯಚೂರು: ಕೃಷ್ಣ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಯ ಬಿಟ್ಟಿದ್ದರಿಂದ ಲಿಂಗಸುಗೂರು ತಾಲೂಕಿನ ಟಣಮಕಲ್ಲು ಗ್ರಾಮದ ಹಿರೇಹಳ್ಳದ ಸೇತುವೆ ಮುಳುಗಡೆಯಾಗಿದೆ. ಇದರಿಂದ ಸಂಚಾರ ಬಂದ್ ಆಗಿ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ.
ಪ್ರತೀ ವರ್ಷ ಮಳೆಗಾಲದಲ್ಲಿ ಸೇತುವೆ ತುಂಬಿ ನೀರು ರಸ್ತೆಯ ಮೇಲೆ ಹರಿಯುತ್ತದೆ. ಈ ಸೇತುವೆಯನ್ನು ಎತ್ತರಿಸಬೇಕೆಂಬುದು ಸುತ್ತಮುತ್ತಲ ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಈ ಸೇತುವೆ ಸಮಸ್ಯೆ ಬಗ್ಗೆ ತಿಳಿಸಿದರೂ ಇದುವರೆಗೆ ಪರಿಹಾರ ಕಂಡುಕೊಂಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Next Story





