Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಸಾಮಾಜಿಕ ಜಾಲತಾಣದಲ್ಲಿ...

ರಾಯಚೂರು | ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಬಿಜೆಪಿಯಿಂದ ದೂರು

ವಾರ್ತಾಭಾರತಿವಾರ್ತಾಭಾರತಿ25 July 2026 10:44 AM IST
share
ರಾಯಚೂರು | ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಬಿಜೆಪಿಯಿಂದ ದೂರು

ರಾಯಚೂರು: ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹಾಗೂ ಬಿಜೆಪಿ ವಿರುದ್ಧ ಅವಹೇಳನಕಾರಿ, ಮಾನಹಾನಿಕರ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ರೀತಿಯ ಪೋಸ್ಟ್ ಗಳನ್ನು ಪ್ರಕಟಿಸಿರುವ ಆರೋಪದ ಹಿನ್ನೆಲೆಯಲ್ಲಿ ಪಾವಗಡ ಮೂಲದ ಶ್ರೀನಿವಾಸ್ ಬಾಬು ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ್ ಒತ್ತಾಯಿಸಿದ್ದಾರೆ.

ಈ ಕುರಿತು ಪಶ್ಚಿಮ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಅವರು, ಸಂಬಂಧಿತ ವ್ಯಕ್ತಿಯು ಸಂಸದ ಗೋವಿಂದ ಕಾರಜೋಳರ ವಿರುದ್ಧ ನಿರಂತರವಾಗಿ ಅವಹೇಳನಕಾರಿ ಪೋಸ್ಟ್ ಗಳನ್ನು ಪ್ರಕಟಿಸುತ್ತಿದ್ದು, ಬಿಜೆಪಿ ಪಕ್ಷ ಹಾಗೂ ಅದರ ಕಾರ್ಯಕರ್ತರ ಕುರಿತು ಅವಮಾನಕಾರಿ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇಂತಹ ಪೋಸ್ಟ್ ಸಾರ್ವಜನಿಕರಲ್ಲಿ ದ್ವೇಷ, ವೈಮನಸ್ಸು ಮತ್ತು ಉದ್ವಿಗ್ನತೆ ಉಂಟು ಮಾಡುವ ಸಾಧ್ಯತೆ ಇದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಆತಂಕವಿದೆ. ಪ್ರಜಾಪ್ರಭುತ್ವದಲ್ಲಿ ಟೀಕೆ ಮಾಡುವ ಹಕ್ಕು ಎಲ್ಲರಿಗೂ ಇದ್ದರೂ, ಸುಳ್ಳು, ಮಾನಹಾನಿಕರ ಹಾಗೂ ಪ್ರಚೋದನಾತ್ಮಕ ಮಾಹಿತಿಯನ್ನು ಪ್ರಸಾರ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದವರು ತಿಳಿಸಿದ್ದಾರೆ.

ದೂರಿನಲ್ಲಿ ಶ್ರೀನಿವಾಸ್ ಬಾಬು ವಿರುದ್ಧ ಪ್ರಕರಣ ದಾಖಲಿಸುವುದು, ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ ಗಳನ್ನು ಪರಿಶೀಲಿಸಿ ಡಿಜಿಟಲ್ ಸಾಕ್ಷ್ಯ ಸಂರಕ್ಷಿಸುವುದು, ಅಗತ್ಯವಿದ್ದಲ್ಲಿ ಮೊಬೈಲ್ ಫೋನ್ ಹಾಗೂ ಸಾಮಾಜಿಕ ಜಾಲತಾಣ ಖಾತೆಗಳ ತನಿಖೆ ನಡೆಸುವುದು ಮತ್ತು ಸಾರ್ವಜನಿಕ ಶಾಂತಿ ಭಂಗಪಡಿಸುವ ಕೃತ್ಯಗಳ ವಿರುದ್ಧ ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ್ ರಾಜಗುರು, ನಗರಸಭೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಎಸ್ಸಿ ಮೋರ್ಚಾದ ಮಾಜಿ ನಗರ ಅಧ್ಯಕ್ಷ ಮಂಚಲ್ ಭೀಮಣ್ಣ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಜೆ.ಎಂ.ಮೌನೇಶ್ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X