ರಾಯಚೂರು | ಫೆ.10ರಂದು ನೇರ ಸಂದರ್ಶನ
Raichur | Live interview on 10th Feb

ರಾಯಚೂರು : ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯ ಕಚೇರಿಯಲ್ಲಿ ಫೆ.10ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ನೇರ ಸಂದರ್ಶನ ಆಯೋಜನೆ ಮಾಡಿಲಾಗಿದ್ದು, ಆಸಕ್ತರು ಭಾಗಹಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ನೇರ ಸಂದರ್ಶನವನ್ನು ವಿವಿಧ ಖಾಸಗಿ ಕಂಪನಿ ಸಹಭಾಗಿತ್ವದಲ್ಲಿ ಆಯೋಜನೆ ಮಾಡಲಾಗಿದ್ದು, ತಮ್ಮ ಕಂಪನಿಯಲ್ಲಿ ಖಾಲಿವಿರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.
18 ರಿಂದ 32 ವರ್ಷಗಳವರೆಗಿನ ಎಸೆಸೆಲ್ಸಿ, ಪಿ.ಯು.ಸಿ ಹಾಗೂ ಎಲ್ಲಾ ಪದವೀಧರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ವಿದ್ಯಾರ್ಹತೆಯ ಅಂಕ ಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ಬಯೋಡಾಟಾ, ಆಧಾರ್ ಕಾರ್ಡ್ ಪ್ರತಿ ಹಾಗೂ ಭಾವಚಿತ್ರಗಳೊಂದಿಗೆ ಆಗಮಿಸಬೇಕು.
ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ, ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಈ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 08532-231684, 8095125775, 7795195171, 9008211750ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





