Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ನ. 2 ರಂದು ಹಿಲಿಯೋಥಿಸ್ ನಾಟಕ ಪ್ರದರ್ಶನ:...

ನ. 2 ರಂದು ಹಿಲಿಯೋಥಿಸ್ ನಾಟಕ ಪ್ರದರ್ಶನ: ವಿ.ಎನ್ ಅಕ್ಕಿ

ವಾರ್ತಾಭಾರತಿವಾರ್ತಾಭಾರತಿ31 Oct 2025 11:30 AM IST
share
ನ. 2 ರಂದು ಹಿಲಿಯೋಥಿಸ್ ನಾಟಕ ಪ್ರದರ್ಶನ: ವಿ.ಎನ್ ಅಕ್ಕಿ

ರಾಯಚೂರು : ಜಿಲ್ಲೆಯ ಹಿರಿಯ ಕಥೆಗಾರರಾದ ಮಹಾಂತೇಶ ನವಲಕಲ್ ಅವರ ಭಾರತ ಭಾಗ್ಯವಿಧಾತ ಕಥೆಯಾಧಾರಿತ ಹಿಲಿಯೋಥಿಸ್ ಎಂಬ ನಾಟಕ ರಂಗದ ಮೇಲೆ ಪ್ರದರ್ಶನಗೊಳ್ಳಲು ಸಿದ್ಧವಾಗಿದೆ. ಈ ನಾಟಕವನ್ನು ಜಿಲ್ಲೆಯ ಯುವ ರಂಗ ನಿರ್ದೇಶಕ ಲಕ್ಷ್ಮಣ್ ಮಂಡಲಗೇರಾ ಅವರು ನಿರ್ದೇಶಿಸಿದ್ದು, ರಾಯಚೂರಿನ ಸಮುದಾಯ ತಂಡದ ಕಲಾವಿದರು ಪ್ರಸ್ತುತ ಪಡಿಸಲಿದ್ದಾರೆ ಎಂದು ಸಮುದಾಯ ಅಧ್ಯಕ್ಷರಾದ ವಿ.ಎನ್ ಅಕ್ಕಿ ಪ್ರಕಟಣೆಯಲ್ಲಿ ತಿಳಿಸಿದರು.

ಮಹಾಂತೇಶ ನವಲಕಲ್ ಅವರ ಭಾರತ ಭಾಗ್ಯವಿಧಾತ ಕಥೆಯು ಬಹುರಾಷ್ಟ್ರೀಯ ಕ್ರಿಮಿನಾಶಕ ಕಂಪನಿಗಳು ರೈತರ ಬದುಕನ್ನು ನಾಶ ಮಾಡಹೊರಟಿರುವ ಕ್ರೌರ್ಯ, ಮೋಸದ ಪ್ರಪಂಚವನ್ನು ತೆರೆದಿಡುವ ಈ ಕಥೆಯು ಮಾರುಕಟ್ಟೆ ನಡೆಸುತ್ತಿರುವ ಮೌನ ಕೊಲೆಗಳ ವಿವರಗಳನ್ನು ಹೇಳುವ ಕಥಾ ಹಂದರವನ್ನು ಹೇಳಲು ಹೊರಟಿರುವ ಈ ನಾಟಕವು ಜಾಗತೀಕರಣವು ರೂಪಿಸುತ್ತಿರುವ ಮಾರುಕಟ್ಟೆಯ ಆಮಿಷಗಳಿಗೆ ರೈತರನ್ನು ಬಲಿ ತೆಗೆದುಕೊಳ್ಳುತ್ತಿರುವ ಅದೃಶ್ಯ ವ್ಯಾಪಾರ ಜಗತ್ತಿನ ದೃಶ್ಯಗಳನ್ನು ಹಿಲಿಯೋಥಿಸ್ ನಾಟಕದಲ್ಲಿ ಕಟ್ಟಿ ಕೊಡಲು ನಿರ್ದೇಶಕರು ಪ್ರಯತ್ನಿಸಿದ್ದಾರೆ.

ಸಮುದಾಯ 50ರ ಸಂಭ್ರಮದೊಂದಿಗೆ ರಾಯಚೂರಿನ ಸಮುದಾಯ ತಂಡ ಯುವ ಕಲಾವಿದರನ್ನು ಒಟ್ಟುಗೂಡಿಸಿಕೊಂಡು ಭಾರತ ಭಾಗ್ಯವಿಧಾತ ಕಥೆಯ ನಾಟಕವನ್ನು ಕೈಗೆತ್ತಿಕೊಂಡು ಯುವ ರಂಗ ನಿರ್ದೇಶಕ ಲಕ್ಷ್ಮಣ ಮಂಡಲಗೇರಾ ಅವರು ರಂಗಪಠ್ಯ ಸಿದ್ದಪಡಿಸಿಕೊಂಡು ನಿರ್ದೇಶಿಸಿದ್ದಾರೆ. ಈ ನಾಟಕಕ್ಕೆ ರಂಗಸಜ್ಜಿಕೆಯನ್ನು ನಾಗರಾಜ ಸಿರವಾರ ಸಿದ್ಧ ಪಡಿಸಿದ್ದು, ಸಂಗೀತವನ್ನು ಹೇಮಂತ ಮರಿಯಮ್ಮನಹಳ್ಳಿ ಹಾಗೂ ಹನುಮಯ್ಯ ನಿರ್ವಹಿಸಿದರೆ, ಪ್ರಸಾಧನವನ್ನು ವೆಂಕಟ ನರಸಿಂಹಲು ಅವರು ನಿರ್ವಹಿಸಿದ್ದಾರೆ, ಈಗ ನಾಟಕ ರಂಗದ ಮೇಲೆ ಪ್ರದರ್ಶಿಸಲು ಸಿದ್ಧವಾಗಿದೆ.

"ಹಿಲಿಯೋಥಿಸ್" ನಾಟಕ ಪ್ರದರ್ಶನವು ನವೆಂಬರ್ 2 ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಭಾನುವಾರ ಸಂಜೆ 6 ಗಂಟೆ 30 ನಿಮಿಷಕ್ಕೆ ಪ್ರದರ್ಶನಗೊಳ್ಳಲಿದೆ. ರಾಯಚೂರಿನ ರಂಗಾಸಕ್ತರು ಈ ಉತ್ತಮ ನಾಟಕವನ್ನು ನೋಡಲು ಬರಬೇಕೆಂದು ಸಮುದಾಯ ಅಧ್ಯಕ್ಷರಾದ ವಿ ಎನ್ ಅಕ್ಕಿ ಯವರು ಪತ್ರಿಕಾ ಪ್ರಕಟಣೆ ಮೂಲಕ ಆಹ್ವಾನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X