Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಐತಿಹಾಸಿಕ ಅಂಬಾ ಮಹೋತ್ಸವ : 400 ಕೋಟಿ...

ಐತಿಹಾಸಿಕ ಅಂಬಾ ಮಹೋತ್ಸವ : 400 ಕೋಟಿ ರೂ.ಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ31 Dec 2025 3:32 PM IST
share
ಐತಿಹಾಸಿಕ ಅಂಬಾ ಮಹೋತ್ಸವ : 400 ಕೋಟಿ ರೂ.ಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ
3ರಂದು ಸಿಂಧನೂರಿಗೆ ಸಿಎಂ, ಡಿಸಿಎಂ ಆಗಮನ: ಬಾದರ್ಲಿ

ಸಿಂಧನೂರು, ಡಿ.31 : ಭಕ್ತಿ-ಶಕ್ತಿ ಪರಂಪರೆಯ ದಿವ್ಯ ಸಂಗಮ ಸಿಂಧನೂರ ತಾಲೂಕಿನ ಸೋಮಲಾಪುರದ ಅಂಬಾಮಠದ ಅಂಬಾ ಮಹೋತ್ಸವ 2026ರ ಕಾರ್ಯಕ್ರಮವು ಜನವರಿ 2ರಿಂದ ಜನವರಿ 6ರವರೆಗೆ ನಿಗದಿಯಾಗಿದ್ದು, ಜನವರಿ 3ರಂದು ನಡೆಯಲಿರುವ ಅಂಬಾ ದೇವಿ ಮಹಾರಥೋತ್ಸವ ಮತ್ತು ಜಂಬೂ ಸವಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಭಾಗವಹಿಸಲಿದ್ದಾರೆ ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು.

ನಗರದ ಕಾಕತಿಯ ಕ್ಲಬ್ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. 3 ರಂದು ಮಧ್ಯಾಹ್ನ 2 ಗಂಟೆಗೆ ಸಿಂಧನೂರು ನಗರಕ್ಕೆ ಆಗಮಿಸುವರು. ಅಂದು ಸಿಂಧನೂರ ನಗರದಲ್ಲಿ ಮಧ್ಯಾಹ್ನ 2 ರಿಂದ 2:30ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ ಭೋಜನದ ವಿರಾಮದ ನಂತರ 3:30 ರಿಂದ ಅಂಬಾಮಠಕ್ಕೆ ತೆರಳಿ ಸಂಜೆ 4 ಗಂಟೆಗೆ ಸಿಂದನೂರು ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 400 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಅಂಬಾದೇವಿ ಮಹಾ ರಥೋತ್ಸವ ಮತ್ತು ಜಂಬೂಸವಾರಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಶಕ್ತಿಪೀಠ ಅಂಬಾಮಠಕ್ಕೆ 400 ವರ್ಷಗಳ ಇತಿಹಾಸ ಹೊಂದಿದ್ದು, ತೆಲಂಗಾಣ, ಮಹಾರಾಷ್ಟ್ರ ಆಂಧ್ರ ಸೇರಿದಂತೆ ಐದಾರು ರಾಜ್ಯಗಳ ಮತ್ತು ನಮ್ಮ ರಾಜ್ಯದ ಲಕ್ಷಾಂತರ ಭಕ್ತರು ಅಂಬಾಮಠದ ಜಾತ್ರೆಗೆ ಆಗಮಿಸುತ್ತಾರೆ. ಈ ವರ್ಷ ಮಹಾ ರಥೋತ್ಸವವು ಅದ್ದೂರಿಯಾಗಿ ನಡೆಯಲಿದೆ. ಜಾತ್ರೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಅನುಕೂಲವಾಗಲು ಈ ಬಾರಿ ಮಠದ ಆವರಣವನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಲಾಗಿದೆ. ರಸ್ತೆ, ಕುಡಿಯುವ ನೀರು, ಶುಚಿತ್ವ ಸೇರಿದಂತೆ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಮಠದ ಆವರಣದಲ್ಲಿ 132 ಅಡಿ ಅಗಲದ ರಥ ಬೀದಿಯನ್ನು ಸುಸಜ್ಜಿತವಾಗಿ ಸಿದ್ಧಪಡಿಸಲಾಗಿದೆ. ಜೊತೆಗೆ ಈ ಬಾರಿ ಮಠದ ಹತ್ತಿರದ 9 ಎಕರೆ ಜಾಗದಲ್ಲಿ ಮಿಟಾಯಿ, ಬಳೆ, ಆಟಿಕೆ ಸಾಮಾನು, ಆಟದ ಯಂತ್ರಗಳ ಹಾಗೂ ಇನ್ನೀತರ ಜಾತ್ರಾ ಅಂಗಡಿಗಳಿಗೆ ಒಂದೆಡೆ ಸಾಲಾಗಿ ಶಿಸ್ತುಬದ್ಧವಾಗಿ ವ್ಯವಸ್ಥೆ ಮಾಡಲಾಗಿದೆ. ಜಾತ್ರಾ ಹಿನ್ನೆಲೆಯಲ್ಲಿ ತಲಾ 6 ಹೆಲ್ಪ್ ಡೆಸ್ಕ್ ಹಾಗೂ ಹೆಲ್ತ್ ಡೆಸ್ಕ್ ಸ್ಥಾಪಿಸಲಾಗಿದೆ. ಸ್ಥಳೀಯ ವಿವಿಧ ಕಾಲೇಜುಗಳ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನು ಹಾಗೂ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷಕರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ಒಳಗೊಂಡು ತಂಡ ರಚಿಸಿ ಜಾತ್ರೋತ್ಸವದ ನಾನಾ ಸೇವೆಗೆ ನಿಯೋಜನೆ ಮಾಡಿದ್ದೇವೆ ಎಂದು ತಿಳಿಸಿದರು.

ರಾಯಚೂರು ಜಿಲ್ಲೆಯ ಇತಿಹಾಸದಲ್ಲಿಯೇ ಸಿಂಧನೂರು ತಾಲೂಕು ವ್ಯಾಪ್ತಿಯಲ್ಲಿ ಏಕಕಾಲಕ್ಕೆ 24 ಕಂದಾಯ ಗ್ರಾಮಗಳಿಗೆ ಅಧಿಸೂಚನೆ ಹೊರಡಿಸಿ ಘೋಷಿಸಿ ಆಯಾ ಕಂದಾಯ ಗ್ರಾಮದಲ್ಲಿನ ಫಲಾನುಭವಿಗಳಿಗೆ ಕಂದಾಯ ಸಚಿವರು ಸಾಂಕೇತಿಕವಾಗಿ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ. 174 ಕೋಟಿ ರು ವೆಚ್ಚದಲ್ಲಿ ಅಂದಾಜು 20,000 ಎಕರೆ ಜಮೀನಿಗೆ ನೀರು ಪೂರೈಸುವ ಏತ ನೀರಾವರಿ ಯೋಜನೆಗೆ, 69 ಕೋಟಿ ರೂ ವೆಚ್ಚದಲ್ಲಿ ಬ್ರಿಜ್ ಮತ್ತು ಬ್ಯಾರೇಜ್ ನಿರ್ಮಾಣ, 39 ಕೋಟಿ ರು ವೆಚ್ಚದಲ್ಲಿ ಸಿಂಧನೂರಿನ ಹಳ್ಳಕ್ಕೆ ಬ್ರಿಜ್ ಕಮ್ ಬ್ಯಾರೇಜ್ ನಿರ್ಮಾಣ, ಗಾಂಧಿನಗರದಿಂದ ಗೊರೆಬಾಳ ಗ್ರಾಮದವರೆಗೆ ರಸ್ತೆ ಕಾಮಗಾರಿ ಸೇರಿದಂತೆ ನಾನಾ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ. ಸಿಂಧನೂರು ತಾಲೂಕಿನಲ್ಲಿ ಅಂದಾಜು 18 ಪದವಿ ಕಾಲೇಜುಗಳು, 32 ಪಿಯುಸಿ ಕಾಲೇಜ್‌ಗಳಿದ್ದು ಅಂದಾಜು 25,000 ಕಾಲೇಜು ವಿದ್ಯಾರ್ಥಿಗಳಿಗೆ ಆಯಾ ಗ್ರಾಮಗಳಿಂದ ಸಿಂಧನೂರು ನಗರಕ್ಕೆ ಬಂದು ಹೋಗಲು ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆಂದೇ 5 ಕೋಟಿ ರೂ ವೆಚ್ಚದಲ್ಲಿ 15 ಬಸ್ಸುಗಳಿಗೆ ಚಾಲನೆ ನೀಡುವ ಕಾರ್ಯಕ್ರಮವು ಸಹ ಇದೇ ವೇಳೆ ನಡೆಯಲಿದೆ ಎಂದು ಶಾಸಕರು ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ಸಚಿವರಾದ ಶರಣಪ್ರಕಾಶ ಪಾಟೀಲ್, ರಾಮಲಿಂಗಾರೆಡ್ಡಿ ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ಶಿವರಾಜ ತಂಗಡಗಿ, ಎನ್ ಎಸ್ ಬೋಸರಾಜು ಸೇರಿದಂತೆ ಇನ್ನಿತರ ಸಚಿವರು ಭಾಗಿಯಾಗಲಿದ್ದಾರೆ ಎಂದು ಶಾಸಕರು ತಿಳಿಸಿದರು.

ತಹಶೀಲ್ದಾರ ಅರುಣ ಹೆಚ್ ದೇಸಾಯಿ ಮಾತನಾಡಿ, ಅಂಬಾ ಮಹೋತ್ಸವ ಹಿನ್ನಲೆಯಲ್ಲಿ ಜನವರಿ 2ರಿಂದ 6ರವರೆಗೆ ಸರಿಗಮಪ ಖ್ಯಾತಿಯ ಗಾಯಕರು ಮತ್ತು ಇನ್ನೀತರ ಕಲಾವಿದರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಪ್ರಪ್ರಥಮ ಬಾರಿಗೆ ಜಂಬೂಸವಾರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ, ಹಾಸ್ಯ ಸಂಜೆ, ಅಹೋರಾತ್ರಿ ತತ್ವಪದ ಗಾಯನ, ಕಡುಬಿನ ಕಾಳಗ, ಸಂಗೀತ ಸಂಜೆ, ನಾಟಕ, ದೇವಿ ಪಲ್ಲಕ್ಕಿ ಉತ್ಸವ, ಜಾನಪದ ಜಾತ್ರೆ, ಕುಂಬೋತ್ಸವ, ತತ್ವಪದ ಗಾಯನ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಲಿವೆ.

ಈ ಸಂದರ್ಭದಲ್ಲಿ ತಾಪಂ ಇಓ ಚಂದ್ರಶೇಖರ, ಮುಖಂಡರಾದ ಆರ್.ಸಿ.ಪಾಟೀಲ, ಖಾಜಿ ಮಲಿಕ್ ಹಾಗೂ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X