Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರಿನಲ್ಲಿ 2419 ಮನೆಗಳನ್ನು...

ರಾಯಚೂರಿನಲ್ಲಿ 2419 ಮನೆಗಳನ್ನು ನಿರ್ಮಿಸಿ ಬಡವರಿಗೆ ವಿತರಣೆ: ಸಚಿವ ಭೈರತಿ ಸುರೇಶ್‌

ವಾರ್ತಾಭಾರತಿವಾರ್ತಾಭಾರತಿ4 Dec 2025 7:41 PM IST
share
ರಾಯಚೂರಿನಲ್ಲಿ 2419 ಮನೆಗಳನ್ನು ನಿರ್ಮಿಸಿ ಬಡವರಿಗೆ ವಿತರಣೆ: ಸಚಿವ ಭೈರತಿ ಸುರೇಶ್‌

ರಾಯಚೂರು: ಜಿ+3 ಮಾದರಿಯಲ್ಲಿ ಅನುಮೋದನೆಗೊಂಡು, ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪ ಘಟಕ ಎಎಚ್‌ಪಿ ಯೋಜನೆಯಡಿ ನಿರ್ಮಾಣ ಹಂತದಲ್ಲಿರುವ 2419 ವಸತಿ ಸಮುಚ್ಛಯದ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್‌ ಅವರು ಭೇಟಿ ನೀಡಿದರು.

ವಸತಿ ಸಮುಚ್ಛಯ ಸ್ಥಳಕ್ಕೆ ಆಗಮಿಸಿ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವ ಭೈರತಿ ಸುರೇಶ್‌, ಮನೆಗಳನ್ನು ಬಡಜನತೆಗೆ ವಿತರಿಸಲು ಅಗತ್ಯ ಕ್ರಮವಹಿಸುವಂತೆ ಸೂಚನೆ ನೀಡಿದರು. ಜಿ+3 ಸಮುಚ್ಛಯ ನಿರ್ಮಾಣ ಕಾರ್ಯವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ನಡೆಯುತ್ತಿದೆ. ಬಡವರಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಈ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ. ದಾಖಲೆಯ 2419 ಮನೆಗಳನ್ನು ನಿರ್ಮಿಸಿ ಕಡುಬಡವರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ಹಾಗೂ ಹಿಂದುಳಿದ ವರ್ಗದ ಜನತೆಗೆ ನೀಡುತ್ತಿರುವುದು ರಾಯಚೂರಿನ ಇತಿಹಾಸದಲ್ಲಿ ಮೊದಲು ಎಂದು ಹೇಳಿದರು.

ರಾಯಚೂರು ವಿಮಾನ ನಿಲ್ದಾಣದ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ಜಿ+3 ವಸತಿ ಸಮುಚ್ಚಯಕ್ಕೆ ಬೇಕಿರುವ ರಸ್ತೆ ಸಂಪರ್ಕ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಾರ್ಯಕ್ಕೆ ಬೇಕಾಗಿರುವ ಹೆಚ್ಚುವರಿ ಅನುದಾನವನ್ನು ನಗರಾಭಿವೃದ್ಧಿ ಇಲಾಖೆಯಿಂದ ನೀಡುವುದಾಗಿ ಸಚಿವರು ಇದೇ ವೇಳೆ ತಿಳಿಸಿದರು.

ಈ ಮನೆಗಳನ್ನು 44 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮನೆಗಳ ನಿರ್ಮಾಣ ಕಾರ್ಯ ವಿವಿಧ ಹಂತಗಳಲ್ಲಿದೆ. ಪರಿಶಿಷ್ಟ ಜಾತಿಗೆ 951 ಮನೆಗಳು, ಪರಿಶಿಷ್ಟ ಪಂಗಡಕ್ಕೆ 1053 ಮನೆಗಳು, ಸಾಮಾನ್ಯ ವರ್ಗಕ್ಕೆ 228 ಮನೆಗಳು ಮತ್ತು ಹಿಂದುಳಿದ ವರ್ಗಕ್ಕೆ 187 ಮನೆಗಳು ಅನುಮೋದನೆಯಾಗಿವೆ. ಈ ಯೋಜನೆಯ ಅಂದಾಜು ವೆಚ್ಚ 9 ಲಕ್ಷ ಇರುತ್ತದೆ. ಎಸ್‌ಎಸಿ ಮತ್ತು ಎಸ್‌ಟಿ ಅವರಿಗೆ ಕೇಂದ್ರ ಮತ್ತು ರಾಜ್ಯದಿಂದ ಸಬ್ಸಿಡಿ ಅನುದಾನ ರಾಜ್ಯ ಸರ್ಕಾರದಿಂದ 2 ಲಕ್ಷ ರೂ ಹಾಗೂ ಕೇಂದ್ರ ಸರ್ಕಾರದ 1.5 ಲಕ್ಷ ರೂ ಅನುದಾನ ಸೇರಿ ಒಟ್ಟು 3.50 ಲಕ್ಷ ರೂ ನಿಗದಿಪಡಿಸಲಾಗಿದೆ. ಬ್ಯಾಂಕ್‌ನಿಂದ ಲೋನ್ ಪಡೆದು ಬಾಕಿ ಉಳಿದ ಅನುದಾನವನ್ನು ಫಲಾನುಭವಿಗಳೇ ಭರಿಸಬೇಕಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ ಅವರು ಸಚಿವರಿಗೆ ಮಾಹಿತಿ ನೀಡಿದರು.

ಈ ವೇಳೆ ಮಸ್ಕಿ ಶಾಸಕರಾದ ಬಸನಗೌಡ ತುರವಿಹಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ, ಏಗನೂರ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X