Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರಿನಲ್ಲಿ 2,562 ಗಣೇಶ...

ರಾಯಚೂರಿನಲ್ಲಿ 2,562 ಗಣೇಶ ಪ್ರತಿಷ್ಠಾಪನೆ ; 14 ಕಡೆ ನಿಷೇಧ

700ಕ್ಕೂ ಹೆಚ್ಚು ಪೊಲೀಸರ ಭದ್ರತೆ : 23 ರೌಡಿಗಳು ಗಡಿಪಾರು

ವಾರ್ತಾಭಾರತಿವಾರ್ತಾಭಾರತಿ12 Sept 2026 4:44 PM IST
share
ರಾಯಚೂರಿನಲ್ಲಿ 2,562 ಗಣೇಶ ಪ್ರತಿಷ್ಠಾಪನೆ ; 14 ಕಡೆ ನಿಷೇಧ

ರಾಯಚೂರು: ಜಿಲ್ಲೆಯಲ್ಲಿ ಗಣೇಶೋತ್ಸವ ಹಿನ್ನೆಲೆಯಲ್ಲಿ 2,562 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಸಿದ್ಧತೆ ನಡೆದಿದ್ದು, ಸಾಮಾಜಿಕ ಸಾಮರಸ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 14 ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶುಗಿರಿ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶೋತ್ಸವಕ್ಕೂ ಮುನ್ನ ಜಿಲ್ಲೆಯಾದ್ಯಂತ 148 ಶಾಂತಿ ಸಭೆಗಳನ್ನು ನಡೆಸಿ ವಿವಿಧ ಸಮುದಾಯಗಳು ಹಾಗೂ ಗಣೇಶ ಮಂಡಳಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ಜಿಲ್ಲೆಯ 1,557 ರೌಡಿ ಶೀಟರ್‌ಗಳ ಪೈಕಿ 1,454 ಮಂದಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. 23 ಮಂದಿಯನ್ನು ಗಡಿಪಾರು ಮಾಡಲಾಗಿದ್ದು, 19 ಮಂದಿಯನ್ನು ತಾತ್ಕಾಲಿಕವಾಗಿ ಜೈಲಿಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗಣೇಶೋತ್ಸವ ಭದ್ರತೆಗಾಗಿ 1 ಎಸ್‌ಪಿ, 4 ಡಿವೈಎಸ್‌ಪಿ, 15 ಸಿಪಿಐ, 31 ಪಿಎಸ್‌ಐ, 122 ಎಎಸ್‌ಐ, 630 ಕಾನ್‌ಸ್ಟೆಬಲ್, 10 ಸಶಸ್ತ್ರ ಮೀಸಲು ಪಡೆ, 6 ಕೆಎಸ್‌ಆರ್‌ಪಿ ತುಕಡಿಗಳು ಹಾಗೂ 500 ಹೋಮ್‌ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ ಎಂದರು.

14 ಗ್ರಾಮಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ನಿಷೇಧ :

ಸಿಂಧನೂರು ತಾಲೂಕಿನ ಏಳುರಾಗಿ ಕ್ಯಾಂಪ್, 3ನೇ ಮೈಲ್ ಕ್ಯಾಂಪ್, ಪಿಡಬ್ಲ್ಯೂಡಿ ಕ್ಯಾಂಪ್, ಲಕ್ಷ್ಮೀ ಕ್ಯಾಂಪ್, ಗೋರೆಬಾಳ ಕ್ಯಾಂಪ್, ಹತ್ತಿಗುಡ್ಡ, ಎಲೆಕೂಡ್ಲಿಗಿ, ಗುಂಡಾ ಗ್ರಾಮ, ಬಳಗನೂರು ಪೊಲೀಸ್ ಠಾಣೆ ವ್ಯಾಪ್ತಿಯ ಉದ್ಬಾಳ ಮತ್ತು ತಿಮ್ಮಾಪುರ, ಸಿರವಾರ ತಾಲೂಕಿನ ಕಡದಿನ್ನಿ ಹಾಗೂ ಹೊಕ್ರಾಣಿ, ಗಬ್ಬೂರು ಠಾಣೆ ವ್ಯಾಪ್ತಿಯ ಸುಂಕೇಶ್ವರಹಾಳ ಮತ್ತು ಹದ್ದಿನಾಳ, ಜಾಲಹಳ್ಳಿ ಠಾಣೆ ವ್ಯಾಪ್ತಿಯ ಊಟಿ ಗ್ರಾಮಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿಲ್ಲ ಎಂದು ಎಸ್ಪಿ ತಿಳಿಸಿದರು.

ಸಿಸಿಟಿವಿ ನಿಗಾ, 48 ವಿಸರ್ಜನಾ ಸ್ಥಳಗಳಲ್ಲಿ ವಿಶೇಷ ಬಂದೋಬಸ್ತ್ :

ಜಿಲ್ಲೆಯಲ್ಲಿ ಸಾರ್ವಜನಿಕ ಸುರಕ್ಷತೆಗಾಗಿ 16,733 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಮಹಾನಗರ ಪಾಲಿಕೆಯ 180 ಕ್ಯಾಮೆರಾಗಳ ಕಾರ್ಯಕ್ಷಮತೆಯನ್ನೂ ಪರಿಶೀಲಿಸಲಾಗುತ್ತಿದೆ. ಗಣೇಶ ವಿಸರ್ಜನೆ ನಡೆಯುವ 48 ಸ್ಥಳಗಳನ್ನು ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸಿಂಧನೂರು ತಾಲೂಕಿನಲ್ಲಿ ಈಗಾಗಲೇ 3 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ. ಗಣೇಶೋತ್ಸವದ ಹೆಸರಿನಲ್ಲಿ ಗಾಂಜಾ, ಅಕ್ರಮ ಮದ್ಯ ಮಾರಾಟ, ಬೈಕ್ ವೀಲಿಂಗ್, ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆ ನೀಡುವುದು, ಅಶ್ಲೀಲ ಹಾಡುಗಳು, ರಾತ್ರಿ ವೇಳೆ ಡಿಜೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಧ್ವನಿವರ್ಧಕ ಬಳಕೆಗೆ ಪೊಲೀಸ್ ಇಲಾಖೆಯ ಅನುಮತಿ ಕಡ್ಡಾಯವಾಗಿದ್ದು, ಬೆಳಿಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಬಳಸಲು ಅವಕಾಶವಿದೆ. ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಧ್ವನಿವರ್ಧಕ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ.

ಗಣೇಶ ಮಂಡಳಿಗಳು ಅಗ್ನಿಶಾಮಕ ವ್ಯವಸ್ಥೆ, ನೀರು, ಮರಳು ಹಾಗೂ ಪ್ರಥಮ ಚಿಕಿತ್ಸಾ ಕಿಟ್ ಕಡ್ಡಾಯವಾಗಿ ಇರಿಸಿಕೊಳ್ಳಬೇಕು. ಮೆರವಣಿಗೆಗಳನ್ನು ಪೊಲೀಸ್ ಇಲಾಖೆ ಅನುಮೋದಿಸಿದ ಮಾರ್ಗದಲ್ಲಿಯೇ ನಡೆಸಬೇಕು. ಕತ್ತಿ, ಖಡ್ಗ, ತಲವಾರ, ಈಟಿ ಸೇರಿದಂತೆ ಅಪಾಯಕಾರಿ ಆಯುಧಗಳ ಪ್ರದರ್ಶನಕ್ಕೆ ಸಂಪೂರ್ಣ ನಿಷೇಧವಿದೆ ಎಂದು ಎಸ್ಪಿ ಸ್ಪಷ್ಟಪಡಿಸಿದರು.

ಕೊನೆಯಲ್ಲಿ, ಸಾರ್ವಜನಿಕರು ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯಿಂದ ಆಚರಿಸಿ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಸಹಕರಿಸಬೇಕು ಎಂದು ಮನವಿ ಮಾಡಿದರು.

Tags

RaichurGanesha
share
ವಾರ್ತಾಭಾರತಿ
ವಾರ್ತಾಭಾರತಿ
Next Story
X