Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ...

ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರ ಪ್ರಯಾಣ : ರಾಯಚೂರಿನಲ್ಲಿ ಸಿಹಿ ಹಂಚಿ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ14 July 2025 6:10 PM IST
share
ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರ ಪ್ರಯಾಣ : ರಾಯಚೂರಿನಲ್ಲಿ ಸಿಹಿ ಹಂಚಿ ಸಂಭ್ರಮ

ರಾಯಚೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ ಸಾಧನೆ ಹಿನ್ನೆಲೆಯಲ್ಲಿ ಜುಲೈ 14ರಂದು ರಾಯಚೂರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್‌ಗಳಿಗೆ ಪೂಜೆ ಹಾಗೂ ಪ್ರಯಾಣಿಕರಿಗೆ ಸಿಹಿ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರಿಗೆ ಬಸ್ಸುಗಳಿಗೆ ಬಣ್ಣಬಣ್ಣದ ರಿಬ್ಬನ್, ತೆಂಗಿನ ಗರಿಗಳನ್ನು ಕಟ್ಟಿ, ಹೂವಿನ ಹಾರಗಳು ಮತ್ತು ಬಲೂನ್‌ ಗಳನ್ನು ಹಾಕಿ ಸಿಂಗರಿಸಲಾಗಿತ್ತು. ಜುಲೈ 14ರಂದು ರಾಜ್ಯಾದ್ಯಂತ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಏಕಕಾಲಕ್ಕೆ ನಡೆದಂತೆ ರಾಯಚೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಸಹ ಸಾರ್ವಜನಿಕರಿಗೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸಿಹಿ ವಿತರಿಸಿ ಸಂಭ್ರಮಿಸಲಾಯಿತು.

ಈ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ಸಮಿತಿಯ ಉಪಾಧ್ಯಕ್ಷರಾದ ಹನುಮಂತಪ್ಪ ಜಾಲಿಬೆಂಚಿ, ನಾಗೇಂದ್ರ ಮಠಮಾರಿ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ಸಾಜೀದ್ ಸಮೀರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪವನ್ ಕಿಶೋರ್ ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯಲೆಕ್ಕಾಧಿಕಾರಿ ವಿಜಯಶಂಕರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎಸ್.ಚಂದ್ರಶೇಖರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಿ.ಯು.ಹುಡೇದ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ನವೀನ ಕುಮಾರ್ ಸಂಗೇಪಾಗ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಮಾತನಾಡಿ, ರಾಜ್ಯ ಸರ್ಕಾರವು ಹಿಂದುಳಿದ, ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯ ಸೇರಿದಂತೆ ಅನೇಕ ಹಿಂದುಳಿದ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಅನೇಕ ಯೋಜನೆಗಳನ್ನು ಜಾರಿ ಮಾಡಿ ಅನುಷ್ಠಾನ ಮಾಡುತ್ತಿದೆ. ವಿಶೇಷವಾಗಿ ಕೌಟುಂಬಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಗೃಹಲಕ್ಷ್ಮಿ ಯೋಜನೆ ಸೇರಿದಂತೆ ರಾಜ್ಯ ಸರ್ಕಾರವು ಶಕ್ತಿ ಯೋಜನೆಗಳನ್ನು ಜಾರಿ ಮಾಡಿದೆ. ಈ ಯೋಜನೆಗಳಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಇದುವರೆಗೆ 12,669 ಕೋಟಿ ರೂ. ವಿನಿಯೋಗಿಸಿರುವುದು ದಾಖಲಾರ್ಹ ಸಾಧನೆಯಾಗಿದೆ ಎಂದು ಅವರು ತಿಳಿಸಿದರು.

ರಾಯಚೂರ ಜಿಲ್ಲೆಯಲ್ಲಿ ಇದುವರೆಗೆ ದಾಖಲೆಯ ಪ್ರಮಾಣದಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಸರಾಸರಿ ಪ್ರತಿ ನಿತ್ಯ 1.16 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ ಸಾರಿಗೆ ಆದಾಯ 353.23 ಕೋಟಿ ರೂ. ಆಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿ, ವಾಹನ ಚಾಲಕರು, ನಿರ್ವಾಹಕರು, ಸಾರ್ವಜನಿಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X