Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಆ.6ರಂದು ರಾಯಚೂರಿಗೆ ಸಿಎಂ, ಡಿಸಿಎಂ:...

ಆ.6ರಂದು ರಾಯಚೂರಿಗೆ ಸಿಎಂ, ಡಿಸಿಎಂ: ಹಟ್ಟಿ ಚಿನ್ನದ ಗಣಿ ಕಂಪನಿ ಕಾರ್ಯಕ್ರಮದಲ್ಲಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ5 Aug 2025 3:15 PM IST
share
ಆ.6ರಂದು ರಾಯಚೂರಿಗೆ ಸಿಎಂ, ಡಿಸಿಎಂ: ಹಟ್ಟಿ ಚಿನ್ನದ ಗಣಿ ಕಂಪನಿ ಕಾರ್ಯಕ್ರಮದಲ್ಲಿ ಭಾಗಿ

ರಾಯಚೂರು: ಹಟ್ಟಿ ಪಟ್ಟಣದ ಕ್ರೀಡಾಂಗಣದಲ್ಲಿ ಆ.6ರಂದು ನಡೆಯಲಿರುವ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕರ ವಸತಿ ಸಮುಚ್ಚಯ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸುವರು. ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷ, ಬೀಳಗಿ ಶಾಸಕರೂ ಆಗಿರುವ ಜೆ.ಟಿ.ಪಾಟೀಲ ಹೇಳಿದ್ದಾರೆ.

ಹಟ್ಟಿ ಚಿನ್ನದ ಗಣಿ ಕಂಪನಿಯ ಕಚೇರಿಯ ಸಭಾಂಗಣದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಆಗಸ್ಟ್ 6ರಂದು ಮಧ್ಯಾಹ್ನ 12 ಗಂಟೆಗೆ ಹಟ್ಟಿ ಪಟ್ಟಣದ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದವರು ತಿಳಿಸಿದರು.

1980ರಲ್ಲಿ ಅಂದಿನ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಹಟ್ಟಿ ಚಿನ್ನದ ಗಣಿ ಕಂಪನಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅದಾದ ಬಳಿಕ 42 ವರ್ಷದ ನಂತರ ಸಿದ್ದರಾಮಯ್ಯ ಹಟ್ಟಿ ಚಿನ್ನದ ಗಣಿ ಕಂಪನಿಯ ಕಾರ್ಯಕ್ರಮಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸಿ ಇತಿಹಾಸ ನಿರ್ಮಿಸಲಿದ್ದಾರೆ ಎಂದರು.

ಹಟ್ಟಿ ಚಿನ್ನದ ಗಣಿ ಕಂಪನಿ ಆವರಣದಲ್ಲಿ ಅಂದಾಜು 998 ಕೋಟಿ ರೂ. ಮೊತ್ತದಲ್ಲಿ ವಸತಿ ಸಮುಚ್ಚಯ, ಶಾಲೆ, ಆಸ್ಪತ್ರೆ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಇಲಾಖೆಯ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಸಂಸದರಾದ ಜಿ.ಕುಮಾರ ನಾಯಕ, ಕೆ.ರಾಜಶೇಖರ ಹಿಟ್ನಾಳ, ಶಾಸಕರಾದ ಡಾ.ಎಸ್. ಶಿವರಾಜ ಪಾಟೀಲ್, ಜಿ.ಹಂಪಯ್ಯ ನಾಯಕ, ಕರೆಮ್ಮ ಜಿ.ನಾಯಕ, ಶಶೀಲ್ ಜಿ.ನಮೋಷಿ, ಚಂದ್ರಶೇಖರ್ ಬಿ.ಪಾಟೀಲ್, ಶರಣಗೌಡ ಪಾಟೀಲ್ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಹಟ್ಟಿ ಪಟ್ಟಣ ಪಂಚಾಯತ್ ಅಧ್ಯಕ್ಷ ಎಂ.ಡಿ. ಸಮ್ದಾನಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಾಮಯ್ಯ ಮುರಾರಿ, ಲಿಂಗಸುಗೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ದ ವೆಂಕಟೇಶ್ ಆರ್.ಗುತ್ತೇದಾರ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ. ಲಿಂಗಸುಗೂರು ಶಾಸಕ ಮಾನಪ್ಪ ಡಿ.ವಜ್ಜಲ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಆರ್ಥಿಕ ಇಲಾಖೆ, ಸರ್ಕಾರದ ಲೋಕೋಪಯೋಗಿ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಹ ಉಪಸ್ಥಿತರಿರುವರು ಎಂದು ಶಾಸಕರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮತ್ತು ಕಾರ್ಮಿಕರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹಟ್ಟಿ ಚಿನ್ನದ ಗಣಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಆರ್.ಶಿಲ್ಪಾ, ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X