Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಇಂಧನ ಬೆಲೆ ಏರಿಕೆ ಖಂಡಿಸಿ ಬೈಕ್‌ಗೆ ಹಗ್ಗ...

ಇಂಧನ ಬೆಲೆ ಏರಿಕೆ ಖಂಡಿಸಿ ಬೈಕ್‌ಗೆ ಹಗ್ಗ ಕಟ್ಟಿ ಎಳೆದು ವಿನೂತನ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 May 2026 2:11 PM IST
share
ಇಂಧನ ಬೆಲೆ ಏರಿಕೆ ಖಂಡಿಸಿ ಬೈಕ್‌ಗೆ ಹಗ್ಗ ಕಟ್ಟಿ ಎಳೆದು ವಿನೂತನ ಪ್ರತಿಭಟನೆ

ರಾಯಚೂರು: ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೇಲಿಂದ ಮೇಲೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದಿಂದ ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಬೈಕ್‌ಗೆ ಹಗ್ಗ ಕಟ್ಟಿ ಎಳೆದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐ(ಎಂಎಲ್) ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಪೂಜಾರ್, ಕೇಂದ್ರ ಸರ್ಕಾರ ಮೇ 15ರಿಂದ ಮೇ 25ರ ಒಳಗೆ ಕೇವಲ 11 ದಿನಗಳಲ್ಲಿ ಪೆಟ್ರೋಲ್ 7.38 ರೂಪಾಯಿ ಹಾಗೂ ಡೀಸೆಲ್ 7.52 ರೂಪಾಯಿ ಹಾಗೂ ಸಿಎನ್‌ಜಿ 6 ರೂಪಾಯಿ ಏರಿಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 99 ಡಾಲರ್‌ಗಿಂತಲೂ ಕಡಿಮೆಯಿದ್ದರೂ ಪೆಟ್ರೋಲ್ ಶೇ. 42.8ರಷ್ಟು ಮತ್ತು ಡೀಸೆಲ್ ಶೇ. 67.9ರಷ್ಟು ಏರಿಕೆಯಾಗಿದೆ. ಇಂಧನ ಬೆಲೆ ಏರಿಕೆಯು ಸಾರಿಗೆಯಿಂದ ಹಿಡಿದು ಆಹಾರ ಪದಾರ್ಥಗಳವರೆಗೆ ಪ್ರತಿಯೊಂದು ವಲಯದ ಮೇಲೂ ಪ್ರಭಾವ ಬೀರಿದ್ದು, ಮೋದಿ ಸರ್ಕಾರವು ಸಾಮಾನ್ಯ ಜನರು ಮತ್ತು ಮಧ್ಯಮ ವರ್ಗದವರ ಬೆನ್ನೆಲುಬನ್ನು ಮುರಿದಿದೆ ಎಂದು ದೂರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂಎಲ್) ಲಿಬರೇಶನ್ ತಾಲೂಕು ಕಾರ್ಯದರ್ಶಿ ಅಜೀಜ್ ಜಾಗೂರದಾರ್, ಇಂಧನ, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸುತ್ತಿರುವ ಕೇಂದ್ರ ಸರ್ಕಾರ ಜನರು ಎಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಾರೆಂಬ ಆತಂಕದಿಂದ ಕುತಂತ್ರವನ್ನು ಹೆಣೆದಿದೆ. ಐದು ರಾಜ್ಯಗಳ ಚುನಾವಣೆಗೆ ಮುನ್ನ, ಇರಾನ್ ಜೊತೆಗಿನ ಅಮೆರಿಕ-ಇಸ್ರೇಲ್ ಮಿಲಿಟರಿ ಸಂಘರ್ಷವು ದೇಶೀಯ ಇಂಧನ ಪೂರೈಕೆ ಅಥವಾ ಬೆಲೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ದೇಶದಲ್ಲಿ ಸಾಕಷ್ಟು ಇಂಧನ ಸಂಗ್ರಹವಿದೆ ಎಂದು ಕೇಂದ್ರ ಸರ್ಕಾರ ನಾಗರಿಕರಿಗೆ ನೀಡಿದ ಭರವಸೆ ಹಸಿ ಸುಳ್ಳಾಗಿದೆ. ಪೆಟ್ರೋಲ್ ಪಂಪ್‌ಗಳ ಮುಂದೆ, ಅಡುಗೆ ಅನಿಲ ವಿತರಣಾ ಅಂಗಡಿಗಳ ಮುಂದೆ ಜನರು ಸಾಲುಗಟ್ಟಿ ನಿಲ್ಲುತ್ತಿದ್ದು, ಕೇಂದ್ರ ಸರ್ಕಾರದ ಜನದ್ರೋಹಿ ನೀತಿಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಹೊಗೆಮುಕ್ತ ಮನೆಯ ಹೆಸರಿನಲ್ಲಿ ಉಜ್ವಲ ಯೋಜನೆಯನ್ನು ಜಾರಿಗೆ ತಂದು, ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ನಾಲೈದು ನೂರು ರೂಪಾಯಿಗೆ ಸಿಗುತ್ತಿದ್ದ 14.2 ಕೆ.ಜಿ.ಯ ಗ್ಯಾಸ್ ಸಿಲಿಂಡರ್‌ನ್ನು 933 ರೂಪಾಯಿವರೆಗೆ ಏರಿಸಿ ಹಗಲು ದರೋಡೆಗೆ ನಿಂತಿದೆ. ಬೆಲೆ ಏರಿಕೆಯಿಂದ ಗ್ಯಾಸ್ ಕೊಳ್ಳಲಾಗದ ಮಹಿಳೆಯರು ಪುನಃ ಕಟ್ಟಿಗೆ ಒಲೆಗೆ ಮೊರೆ ಹೋಗುತ್ತಿದ್ದು, ಮತ್ತೆ ಹೊಗೆಯಲ್ಲಿ ದಿನವೂ ಕಣ್ಣೀರು ಹಾಕುತ್ತಿದ್ದಾರೆ. ಇದು ಬಿಜೆಪಿ ಸರ್ಕಾರದ ಗೋಮುಖ ವ್ಯಾಘ್ರ ನೀತಿಗೆ ಜ್ವಲಂತ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರ ಅಚ್ಛೇ ದಿನ್ ಎನ್ನುತ್ತಲೇ ಮಹಿಳೆಯರಿಗೆ (ಬುರೇ ದಿನ್) ಕೆಟ್ಟ ದಿನಗಳನ್ನು ತೋರಿಸಿದೆ. ಈ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ, ಕಾರ್ಪೊರೇಟ್ ಬಂಡವಾಳಿಗರ ಏಜೆಂಟ್‌ರಂತೆ ವರ್ತಿಸುವುದೇ ಸರ್ಕಾರದ ದೈನಂದಿನ ಕಾಯಕವಾಗಿದ್ದು, ಜನರ ಮೇಲೆ ತೆರಿಗೆ ಹೇರುತ್ತಿದೆ ಎಂದರು.

ಸರ್ಕಾರ ಕಾರ್ಪೊರೇಟ್ ತೆರಿಗೆಯನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸುತ್ತಿದೆ. ಆ ಮೂಲಕ ಕೃಷಿ ಸಂಬಂಧಿತ ವಲಯಗಳು, ವಸತಿ, ಸಮಾಜ ಕಲ್ಯಾಣ ಹಾಗೂ ಇತರೆ ಸಂಬಂಧಿತ ಸಬ್ಸಿಡಿಗಳು ಮತ್ತು ಉದ್ಯೋಗ ಸಂಬಂಧಿತ ವಲಯಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಗಳನ್ನು ವರ್ಷದಿಂದ ವರ್ಷಕ್ಕೆ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸುವ ಮೂಲಕ ಬಡವರಿಗೆ, ಮಧ್ಯಮ ವರ್ಗದವರಿಗೆ ಹೆಚ್ಚು ತೆರಿಗೆ, ಶ್ರೀಮಂತರಿಗೆ ಹಾಗೂ ಕಾರ್ಪೊರೇಟ್ ಕಂಪನಿ ಬಂಡವಾಳಿಗರಿಗೆ ಕಡಿಮೆ ತೆರಿಗೆ ನೀತಿ ಅನುಸರಿಸುವ ಮೂಲಕ ದೇಶದ ನಾಗರಿಕರಿಗೆ ದ್ರೋಹ ಬಗೆದಿದೆ. ಜನರು ಬೀದಿಗಿಳಿದು ಹೋರಾಟ ಮಾಡುವ ಮುನ್ನ ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆಂದು ಒತ್ತಾಯಿಸುತ್ತೇವೆ.

ಹಕ್ಕೊತ್ತಾಯಗಳು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಸಿಎನ್‌ಜಿ ಬೆಲೆಯನ್ನು ಕೂಡಲೇ ಇಳಿಕೆ ಮಾಡಬೇಕು. ಜೀವನಾವಶ್ಯಕ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಕೂಡಲೇ ನಿಯಂತ್ರಣಕ್ಕೆ ತರಬೇಕು. ಪೆಟ್ರೋಲ್-ಡೀಸೆಲ್ ಇಂಧನದ ಬೆಲೆಯನ್ನು ಮುಕ್ತ ಮಾರುಕಟ್ಟೆಗೆ ಬಿಡದೇ ಕೇಂದ್ರ ಸರ್ಕಾರವೇ ನಿರ್ಧರಿಸಿ ನಿಯಂತ್ರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಪೂಜಾರ್, ತಾಲೂಕು ಕಾರ್ಯದರ್ಶಿ ಅಜೀಜ್ ಜಾಗೀರ್ದಾರ್, ಮುಖಂಡರಾದ ಜಿಲಾನಿ ಯರಿಗೇರಾ, ಭೀಮಯ್ಯ, ಮಹೇಂದ್ರ, ಪ್ರಹ್ಲಾದ್, ಜಗದೀಶ್, ಹನೀಫ್ ಅಬಕಾರಿ, ಲಕ್ಷ್ಮಣ, ರಾಮಸ್ವಾಮಿ, ಮಾರಣ್ಣ, ನರಸಿಂಹಲು, ಸಣ್ಣ ನರಸಪ್ಪ, ಎಲ್ಲಪ್ಪ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X