ಲಿಂಗಸುಗೂರು | ಬಸ್ ಹರಿದು ಬಾಲಕ ಮೃತ್ಯು; ಓರ್ವನಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ
ರಾಯಚೂರು : ಲಿಂಗಸುಗೂರು ಬಸ್ ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಹರಿದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲಿಯೇ ಮೃತಪಟ್ಟು, ಆತನ ಸಹೋದರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಮೃತರಾದ ಬಾಲಕನನ್ನು ಸಿದ್ದರಾಮ (12) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನ ಸಹೋದರನ ಧನಂಜಯ (8) ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ಕೂಡಲೇ, ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣವೇ ಗಾಯಾಳು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಿದ್ದರಾಮ ಮೃತಪಟ್ಟಿದ್ದಾನೆ. ಬಾಲಕ ಧನಂಜಯನಿಗೆ ಎರಡೂ ಕೈಗಳು ಮತ್ತು ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ಪ್ರಸ್ತುತ ಧನಂಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಸು ಬಂದಿದೆ.
ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಸರಕಾರಿ ಬಸ್ಸಿನ ನಿರ್ಲಕ್ಷ್ಯದ ಚಾಲನೆಯಿಂದ ಈ ದುರಂತ ಸಂಭವಿಸಿದ್ದು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.





