Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರಿನಲ್ಲಿ ಪ್ರಾದೇಶಿಕ ವಿಜ್ಞಾನ...

ರಾಯಚೂರಿನಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ, ಸುಸಜ್ಜಿತ ತಾರಾಲಯ ನಿರ್ಮಿಸಲು ಕ್ರಮ : ಸಚಿವ ಎನ್.ಎಸ್.ಬೋಸರಾಜು

ವಾರ್ತಾಭಾರತಿವಾರ್ತಾಭಾರತಿ17 Jan 2025 7:19 PM IST
share
Photo of Metting

ರಾಯಚೂರು : ನಗರದಲ್ಲಿ ಆಧುನಿಕ ಪ್ರಾದೇಶಿಕ ವಿಜ್ಞಾನ ಕೇಂದ್ರದ ಜೊತೆಗೆ ಸುಸಜ್ಜಿತ ತಾರಾಲಯ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಿದ್ದಪಡಿಸಲು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಜ.16ರಂದು ಬೆಂಗಳೂರು ನಗರದ ಬಹುಮಹಡಿ ಕಟ್ಟಡದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಮ್ಮೇಳನ ಸಭಾಂಗಣದಲ್ಲಿ ರಾಯಚೂರು ಜಿಲ್ಲಾಧಿಕಾರಿಗಳು ಮತ್ತಿತರರೊಂದಿಗೆ ಮಹತ್ವದ ಸಭೆ ನಡೆಸಿ ಚರ್ಚಿಸಿದರು.

ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ವಿಜ್ಞಾನ ಕೇಂದ್ರಗಳನ್ನು ನಿರ್ಮಿಸಲು ಆದ್ಯತೆ ನೀಡಿದ್ದು, ರಾಯಚೂರು ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣದ ಕಾರ್ಯವನ್ನು ತಕ್ಷಣವೇ ಚುರುಕುಗೊಳಿಸುವಂತೆ ಸೂಚಿಸಿದರು.

ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ 90 ದಿನಗಳಲ್ಲಿ ವಿನ್ಯಾಸ ನೀಡುವಂತೆ ವಾಸ್ತುಶಿಲ್ಪಿ ತಂಡಕ್ಕೆ ಸೂಚನೆ ನೀಡಿ ಡಿಪಿಆರ್ ಸಿದ್ಧಪಡಿಸಿ ಕಾಮಗಾರಿಗೆ ಚಾಲನೆ ನೀಡುವಂತೆ ಸಚಿವರು ನಿರ್ದೇಶನ ನೀಡಿದರು. ಜೊತೆಗೆ ರಾಯಚೂರು ವಿಜ್ಞಾನ ಕೇಂದ್ರದಲ್ಲಿ ಸುಸಜ್ಜಿತ ತಾರಾಲಯ ನಿರ್ಮಾಣ ಮಾಡಲು ಅಗತ್ಯ ಪ್ರಸ್ತಾವನೆ ಸಿದ್ದಪಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಬರುವ ಬಜೆಟ್ ನಲ್ಲಿ ಕೋಲಾರ, ಚಿತ್ರದುರ್ಗ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭೂ ಸ್ವಾಧೀನಪಡಿಸಿಕೊಂಡು ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಬಾಕಿಯಿರುವ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಬೆಳಗಾವಿ ವಿಜ್ಞಾನ ಕೇಂದ್ರಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಗೌರಿ ಬಿದನೂರಿನಲ್ಲಿರುವ ಡಾ.ಎಚ್.ನರಸಿಂಹಯ್ಯ ವಿಜ್ಞಾನ ಕೇಂದ್ರವನ್ನು ಅಂತರ್ ರಾಷ್ಟ್ರೀಯ ವಿಜ್ಞಾನ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿದ್ದು, ಇದಕ್ಕೆ ಅಗತ್ಯವಾಗಿರುವ ಭೂಮಿ ಲಭ್ಯವಿದ್ದು, ಇದನ್ನು ವಶಕ್ಕೆ ಪಡೆಯಲು ಸ್ಥಳೀಯರನ್ನೊಳಗೊಂಡ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳದ ಡಾ.ಏಕರೂಪ ಕೌರ್, ಕೆಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು, ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ., ವಿಐಟಿಎಂನ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X