ಏಮ್ಸ್ ಹೋರಾಟ ಸಮಿತಿಯಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ : ಸರ್ಕಾರದ ವಿರುದ್ಧ ಆಕ್ರೋಶ

ರಾಯಚೂರು : ನಗರದಲ್ಲಿ ಏಮ್ಸ್ ಹೋರಾಟವು ಮೂರು ವರ್ಷಗಳನ್ನು ಕಳೆದು ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಪ್ರಯುಕ್ತ ಸರ್ಕಾರದ ವಿರುದ್ಧ ರಾಯಚೂರು ಏಮ್ಸ್ ಹೋರಾಟ ಸಮಿತಿಯು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಏಮ್ಸ್ ವೇದಿಕೆಯಲ್ಲಿ ಪ್ರತಿಭಟನೆ ಮಾಡಿ, ನಂತರ ಡಾ. ಬಿ.ಆರ್.ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ವೃತ್ತದಲ್ಲಿ ಮಾನವ ಸರಪಳಿ ಮಾಡುವ ಮೂಲಕ ಕೇಂದ್ರ, ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಬೇಸತ್ತು ಹೋರಾಟಗಾರರು ಚಪ್ಪಲಿಯಿಂದ ನೆಲಕ್ಕೆ ಹೊಡೆದು ತಮ್ಮ ಅಸಮಾಧಾನ ಹೊರ ಹಾಕಿದರು.
ಪ್ರತಿಭಟನೆಯಲ್ಲಿ ಏಮ್ಸ್ ಹೋರಾಟ ಸಮಿತಿಯ ಸಂಚಾಲಕ ಬಸವರಾಜ ಕಳಸ, ಸಹ ಸಂಚಾಲಕ ಅಶೋಕ ಜೈನ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚನ್ನಾರೆಡ್ಡಿ, ಜಾನ್ ವೆಸ್ಲಿ, ವೀರಭದ್ರಯ್ಯ ಸ್ವಾಮಿ, ಗುರುರಾಜ ಕುಲಕರ್ಣಿ, ಬಸವರಾಜ್ ಮಿಮಿಕ್ರಿ, ಶಾರದಾ ಹುಲಿ ನಾಯಕ, ಮಹಾವೀರ, ರೂಪಾ ಶ್ರೀನಿವಾಸ ನಾಯಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.







