Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಹೊರರಾಜ್ಯದ ಕಾರ್ಮಿಕರಿಂದ ಸ್ಥಳೀಯ...

ಹೊರರಾಜ್ಯದ ಕಾರ್ಮಿಕರಿಂದ ಸ್ಥಳೀಯ ಪೇಂಟರ್‌ಗಳಿಗೆ ಅನ್ಯಾಯ ಆರೋಪ : ರಾಯಚೂರಿನಲ್ಲಿ ಬೈಕ್ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ25 Aug 2026 12:23 PM IST
share
ಹೊರರಾಜ್ಯದ ಕಾರ್ಮಿಕರಿಂದ ಸ್ಥಳೀಯ ಪೇಂಟರ್‌ಗಳಿಗೆ ಅನ್ಯಾಯ ಆರೋಪ : ರಾಯಚೂರಿನಲ್ಲಿ ಬೈಕ್ ರ‍್ಯಾಲಿ

ರಾಯಚೂರು: ಹೊರರಾಜ್ಯಗಳಿಂದ ಪೇಂಟಿಂಗ್ ಕೆಲಸಕ್ಕೆ ಆಗಮಿಸುವ ಕಾರ್ಮಿಕರಿಂದ ಸ್ಥಳೀಯ ಪೇಂಟಿಂಗ್ ಕಾರ್ಮಿಕರಿಗೆ ಉದ್ಯೋಗದಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಪೇಂಟರ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ನಗರದಲ್ಲಿ ಬೈಕ್ ರ‍್ಯಾಲಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಗೌರವಾಧ್ಯಕ್ಷ ಎನ್. ಶರಣಪ್ಪ ಅಸ್ಕಿಹಾಳ ಹಾಗೂ ಜಿಲ್ಲಾಧ್ಯಕ್ಷ ರಾಜು ಅವರ ನೇತೃತ್ವದಲ್ಲಿ ಬಸವೇಶ್ವರ ವೃತ್ತದಿಂದ ಆರಂಭವಾದ ಬೈಕ್ ರ್ಯಾಲಿಯಲ್ಲಿ ನೂರಾರು ಪೇಂಟಿಂಗ್ ಕಾರ್ಮಿಕರು ಭಾಗವಹಿಸಿ ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು.

ಉತ್ತರ ಪ್ರದೇಶ, ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸುವ ಕೆಲ ಕಾರ್ಮಿಕರು ಕೆಲಸದ ಮಾಲೀಕರಿಂದ ಮುಂಗಡ ಹಣ ಪಡೆದು ಕೆಲಸವನ್ನು ಅರ್ಧದಲ್ಲೇ ಬಿಟ್ಟು ತೆರಳುತ್ತಿರುವ ಘಟನೆಗಳು ನಡೆಯುತ್ತಿವೆ. ಇದರಿಂದ ಪೇಂಟಿಂಗ್ ವೃತ್ತಿಯ ಮೇಲಿನ ನಂಬಿಕೆ ಕುಗ್ಗುತ್ತಿದ್ದು, ಸ್ಥಳೀಯ ಕಾರ್ಮಿಕರಿಗೂ ಉದ್ಯೋಗದ ಅವಕಾಶಗಳು ಕಡಿಮೆಯಾಗುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹೊರರಾಜ್ಯದ ಕಾರ್ಮಿಕರನ್ನು ವಿರೋಧಿಸುವ ಉದ್ದೇಶ ನಮ್ಮದಲ್ಲ. ಆದರೆ ಹೊರರಾಜ್ಯಗಳಿಂದ ಬರುವ ಕಾರ್ಮಿಕರ ಗುರುತು ಮತ್ತು ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಿ, ವಂಚನೆ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘ ಮನವಿಯಲ್ಲಿ ಒತ್ತಾಯಿಸಿದೆ.

ಇದೇ ವೇಳೆ ಪೇಂಟಿಂಗ್ ಕಾರ್ಮಿಕರಿಗೆ ಜೀವವಿಮೆ, ಆರೋಗ್ಯ ಸೌಲಭ್ಯ, ವಾರ್ಷಿಕ ಸಹಾಯಧನ ಹಾಗೂ ಪಿಂಚಣಿ ಸೌಲಭ್ಯ ಕಲ್ಪಿಸಬೇಕು. ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುವ ಸಹಾಯಧನವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಮತ್ತು ಲೇಬರ್ ಕಾರ್ಡ್ ವಿತರಣೆಯಲ್ಲಿನ ವಿಳಂಬವನ್ನು ತಪ್ಪಿಸಿ ಶೀಘ್ರ ವಿತರಣೆ ಮಾಡಬೇಕು ಎಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ರೋಹಿತ್, ವಿನೋದ್, ಅಜಯ್, ಜಿ. ನಾರಾಯಣ, ಪಪ್ಪು, ಉಪೇಂದ್ರ, ಪ್ರಸಾದ್ ಲಂಬು, ಬಿಜೇನ್, ಬಾಬು, ಸುರಾಜ್, ಸವೀದ್, ಜಿತೇಂದ್ರ, ಮಾಸಯ್ಯ, ಯೂಸಫ್, ರತ್ನಕುಮಾರ್ ಸೇರಿದಂತೆ ಅನೇಕ ಕಾರ್ಮಿಕರು ಭಾಗವಹಿಸಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X