Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು| ಬೀದಿಬದಿ ವ್ಯಾಪಾರಿಗಳಿಗೆ...

ರಾಯಚೂರು| ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡದಿದ್ದರೆ ಹೋರಾಟ: ಸಿಪಿಐ (ಎಂ) ಮುಖಂಡ ಬಸವಂತರಾಯ ಗೌಡ

ವಾರ್ತಾಭಾರತಿವಾರ್ತಾಭಾರತಿ27 Dec 2024 9:12 PM IST
share
ರಾಯಚೂರು| ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡದಿದ್ದರೆ ಹೋರಾಟ: ಸಿಪಿಐ (ಎಂ) ಮುಖಂಡ ಬಸವಂತರಾಯ ಗೌಡ

ರಾಯಚೂರು| ಜಿಲ್ಲೆಯ ಸಿಂಧನೂರು ಪಟ್ಟಣದ ಪುಟ‌್ ಪಾತ್ ರಸ್ತೆ ಅಗಲೀಕರಣ ಮಾಡಿದ್ದು ಸ್ವಾಗತಾರ್ಹ. ಆದರೆ ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸಿಪಿಐ (ಎಂ)ಮುಖಂಡರಾದ ಬಸವಂತರಾಯ ಗೌಡ ಒತ್ತಾಯಿಸಿದರು.

ನಗರದ ಪತ್ರಿಕಾಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಬದಿ ಪಾದಚಾರಿ ಜಾಗ ಅತಿಕ್ರಮಣ ಮಾಡಿಕೊಂಡಿದ್ದನ್ನು ತೆರವುಗೊಳಿಸುವಂತೆ ನ್ಯಾಯಾಲಯ ಆದೇಶ ಮಾಡಿದಾಗ ಅಧಿಕಾರಿಗಳು ತೆರವುಗೊಳಿಸದೆ ತಡಮಾಡಿ ಈಗ ತೆರವು ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ರಸ್ತೆ ಬದಿ ಜಾಗ ಅತಿಕ್ರಮಣ ತೆರವು ಕಾರ್ಯ ನಡೆಸುವ ಮೂಲಕ ಅಧಿಕಾರಿಗಳು ಹೈಕೋರ್ಟ್ ಆದೇಶ ಪಾಲಿಸಿದ್ದು ಸರಿ. ಆದ‌ರೆ ತೆರವು ಕಾರ್ಯ ದಿಂದ ಒಂದು ಸಾವಿರ ಮೇಲ್ಪಟ್ಟ ಸಣ್ಣಪುಟ್ಟ ಬೀದಿಬದಿಯ ವ್ಯಾಪಾರಿಗಳು ಇಂದು ಬೀದಿಗೆ ಬಿದ್ದಿವೆ ನಗರಸಭೆ ಸರ್ವೆ ಮಾಡಿ ಅಂದಾಜು 900 ಜನರಿಗೆ ಬೀದಿಬದಿ ವ್ಯಾಪಾರಿಗಳೆಂದು ನಗರಸಭೆ ವತಿಯಿಂದ ಗುರುತಿನ ಚೀಟಿ ನೀಡಲಾಗಿದೆ ಎಂದರು.

ನಗರಸಭೆಯ ವತಿಯಿಂದ 900 ಜನರಿಗೆ ಗುರುತಿನ ಚೀಟಿ ನೀಡಿ ಅವರಿಂದ ಟ್ಯಾಕ್ಸ್ ತೆಗೆದುಕೊಂಡ ನಗರಸಭೆ ಅವರಿಗೆ ಯಾಕೆ ಇಲ್ಲಿಯ ತನಕ ಪರ್ಯಾಯ ವ್ಯವಸ್ಥೆ ಮಾಡದೆ ನಿರ್ಲಕ್ಷ್ಯ ಮಾಡಿದ ಕಾರಣ ಇಂದು ಬೀದಿಬದಿಯ ವ್ಯಾಪಾರಿಗಳು ಬೀದಿಗೆ ಬೀಳಲು ನಗರಸಭೆ ನೇರ ಹೊಣೆ ಎಂದು ಆರೋಪಿಸಿದರು.

ಬೀದಿಬದಿಯ ವ್ಯಾಪಾರ ಮಾಡುವ ವ್ಯಾಪಾರಿಗಳು ಬ್ಯಾಂಕು ಹಾಗೂ ಪೈನ್ಸ್ ನಲ್ಲಿ ಸಾಲ ತಂದು ವ್ಯಾಪಾರ ಮಾಡಿ ಕುಟುಂಬ ನಿರ್ವಹಣೆ ಮಾಡುವ ಕುಟುಂಬಗಳು ಈಗ ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತ ದಿಂದ ಬೀದಿಗೆ ಬಿದ್ದಿವೆ ಅವರಿಗೆ ಸಾಲ ವಸೂಲು ಮಾಡದಂತೆ ಜಿಲ್ಲಾಡಳಿತ ತಾಲೂಕು ಆಡಳಿತ ಸೂಚನೆ ನೀಡಬೇಕು ಎಂದು ಅಗ್ರಹಿಸಿದರು.

15 ದಿನಗಳಲ್ಲಿ ಬೀದಿಬದಿಯ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡದಿದ್ದರೆ ತಹಸೀಲ್ದಾರ ಕಚೇರಿಯ ಮುಂದೆ ಪಕ್ಷದ ವತಿಯಿಂದ ಹೋರಾಟ ಮಾಡಲಾಗುವುದು ಎಂದು ಅವರು ಮುನ್ಸೂಚನೆ ನೀಡಿದರು.

ಪಿಡಬ್ಲ್ಯೂಡಿ ಕ್ಯಾಂಪ ನಲ್ಲಿರುವ ನೀರಾವರಿ ಇಲಾಖೆಯ ಜಾಗದಲ್ಲಿದ್ದ ಸುಮಾರು ಬಡ ಕುಟುಂಬಗಳ ವಾಸ ಮಾಡುತ್ತಿದ್ದು ಅವರಿಗೆ ಜಾಗ ಖಾಲಿ ಮಾಡುವಂತೆ ಇಲಾಖೆಯ ವತಿಯಿಂದ ನೋಟೀಸ್ ನೀಡಿ ಕೈ ತೊಳೆದು ಕೊಂಡ ಅಧಿಕಾರಿಗಳು ನಂತರ ಪುರಸಭೆ ಮಾಜಿ ಅಧ್ಯಕ್ಷ ರಾದ ಲೈಕ್ ಸಾಬ ಕಟ್ಟಡ ಕಟ್ಟಿ ಬಾಡಿಗೆ ತೆಗೆದುಕೊಂಡು ಬಂದ ಬಗ್ಗೆ ಅಧಿಕಾರಿಗಳಿಗೆ ಗೊತ್ತಿದ್ದರೂ ಸಹ ಯಾಕೆ ಇಲ್ಲಿಯವರೆಗೆ ಸುಮ್ನೆ ಇದ್ದರು ಎಂದು ಮುಖಂಡರಾದ ಶೇಕ್ಷಾಖಾದ್ರಿ ಅಧಿಕಾರಿಗಳ ನಡೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

ಈಗ ತೆರವುಗೊಳಿಸಿದ್ದಕ್ಕೆ ನಾವು ವಿರೋಧ ಮಾಡದೆ ಸ್ವಾಗತಿಸುತ್ತೇವೆ. ತೆರವುವಿನಿಂದ ಹಲವಾರು ಬಡ ಕುಟುಂಬಗಳು ಬೀದಿಗೆ ಬಿದ್ದಿವೆ ನಿವೇಶನ ರಹಿತ ಈ ಕುಟುಂಬಗಳಿಗೆ ಆಶ್ರಯ ಯೋಜನೆಯ ಅಡಿಯಲ್ಲಿ ನಿವೇಶನ ನೀಡಬೇಕು ಎಂದು ತಾಲೂಕು ಆಡಳಿತವನ್ನು ಒತ್ತಾಯ ಮಾಡಿದರು.

ಸಿಪಿಐ ಎಂ ಪಕ್ಷದ ಮುಖಂಡರಾದ ರೇಣುಕಮ್ಮ,ಶರಣಮ್ಮ ಪೋಲೀಸ ಪಾಟೀಲ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X