Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಪವರ್ ಸೆಂಟರ್ ರಾಯಚೂರಿನಲ್ಲಿ ಆ.8ರಂದು...

ಪವರ್ ಸೆಂಟರ್ ರಾಯಚೂರಿನಲ್ಲಿ ಆ.8ರಂದು ಸೇನಾ ನೇಮಕಾತಿಯ ಅಗ್ನಿಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ7 Aug 2025 8:02 PM IST
share
ಪವರ್ ಸೆಂಟರ್ ರಾಯಚೂರಿನಲ್ಲಿ ಆ.8ರಂದು ಸೇನಾ ನೇಮಕಾತಿಯ ಅಗ್ನಿಪರೀಕ್ಷೆ

ರಾಯಚೂರು: ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯು ಥರ್ಮಲ್ ಪಾವರ್ ಸ್ಟೇಷನ್, ಶಕ್ತಿ ಸ್ಥಾವರ ಖ್ಯಾತಿಯ ರಾಯಚೂರಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆ.8ರಿಂದ ಆರಂಭವಾಗಲಿದೆ.

ಆ.8 ರಿಂದ ಆ.22ರವರೆಗೆ ಹಾಗೂ ಆ.25ರಂದು ಶಾರಿರೀಕ ದೇಹದಾರ್ಡ್ಯ ಪರೀಕ್ಷೆ ಮತ್ತು ಆ.26ರಂದು ವೈದ್ಯಕೀಯ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರದಲ್ಲಿ ನೀಡಲಾದ ದಿನಾಂಕಗಳಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಅಭ್ಯರ್ಥಿಗಳು ರಾಯಚೂರಿನಲ್ಲಿ ನಡೆಯುವ ಈ ಸೇನಾ ನೇಮಕಾತಿ ರ‍್ಯಾಲಿಗೆ ವರದಿ ಮಾಡಿಕೊಳ್ಳಲಿದ್ದಾರೆ.

ಸೇನೆಯಲ್ಲಿ ಎಲ್ಲ ವಿಭಾಗಗಳ ಆಯ್ಕೆಯಾಗಿ ನಡೆಯುವ ಸೇನಾ ನೇಮಕಾತಿ ರ‍್ಯಾಲಿಗೆ ರಾಯಚೂರು ನಗರದಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ವಿಶಾಲ ಆವರಣವು ಸಿದ್ಧಗೊಂಡಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯ ಎಲ್ಲ ಕಾರ್ಯಚಟುವಟಿಕೆಗಳು ಆಗ.8 ರಿಂದ ಆರಂಭವಾಗಿ ಆ.6ರವರೆಗೆ ನಡೆಯಲಿವೆ.

ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ವಿಶ್ವ ವಿದ್ಯಾಲಯದ ಆವರಣದಲ್ಲಿ ಪೆಂಡಾಲ್ ಹಾಕಿ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರಿನ ಪೂರೈಕೆ, ಮೊಬೈಲ್ ಟಾಯ್ಲೆಟ್ ಸೇರಿದಂತೆ ನಾನಾ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಬೇರೆ ಬೇರೆ ಜಿಲ್ಲೆಗಳಿಂದ ಭಾಗಿಯಾಗಲು ವಿವಿಧೆಡೆ ವಸತಿ ಸೌಕರ್ಯ ಮತ್ತು ಸಾರಿಗೆ ವ್ಯವಸ್ಥೆ ಸೇರಿದಂತೆ ನಾನಾ ಸೌಕರ್ಯ ಕಲ್ಪಿಸಲಾಗಿದೆ.

ಈ ಸೇನಾ ನೇಮಕಾತಿ ರ‍್ಯಾಲಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡು ಸಮಿತಿಗಳನ್ನು ರಚಿಸಿ ಸುವ್ಯವಸ್ಥೆಗೆ ಕ್ರಮ ವಹಿಸಿದ್ದಾರೆ. ಸಹಾಯಕ ಆಯುಕ್ತರಾದ ಗಜಾನನ ಬಾಳೆ ಅವರು ಮೇಲುಸ್ತುವಾರಿ ವಹಿಸಿದ್ದು, ತಹಶೀಲ್ದಾರರಾದ ಸುರೇಶ ವರ್ಮಾ, ಅಧಿಕಾರಿಗಳಾದ ಕೃಷ್ಣ ಶಾವಂತಗೇರಿ ಸೇರಿದಂತೆ ಇನ್ನೀತರ ಇಲಾಖೆಗಳ ಅಧಿಕಾರಿಗಳು ವಿವಿಧ ಸಮಿತಿಗಳ ನೇತೃತ್ವ ವಹಿಸಿದ್ದಾರೆ.

ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯ ಯಶಸ್ಸಿಗೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಹತ್ತಾರು ಸಭೆಗಳನ್ನು ನಡೆಸಿ ಆಯಾ ಸಮಿತಿಗಳಿಗೆ ನಾನಾ ಕೆಲಸ ಕಾರ್ಯಗಳನ್ನು ಹಂಚಿಕೆ ಮಾಡಿದಂತೆ ಆಯಾ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳು ಮತ್ತು ಸದಸ್ಯರಾದ ವಿವಿಧ ಇಲಾಖೆಯ ಅಧಿಕಾರಿಗಳು ಆಯಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಚೇರಿ ಅದೇಶದ ಮೂಲಕ ನಾನಾ ಕೆಲಸ ಕಾರ್ಯಗಳ ಹಂಚಿಕೆ ಮಾಡಿ ಕಾರ್ಯಪ್ರವೃತ್ತರಾಗಿದ್ದಾರೆ.

ಸೇನಾ ನೇಮಕಾತಿ ರ‍್ಯಾಲಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಅವರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಆವರಣದಲ್ಲಿ ಬ್ಯಾರಿಕೇಡ್ ಅಳವಡಿಸಿ, ಅಗತ್ಯ ಪ್ರಮಾಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಸೂಕ್ತ ಪೊಲೀಸ್ ಭದ್ರತೆಗೆ ಕ್ರಮವಹಿಸಿದ್ದಾರೆ.

ಸೇನಾ ಅಧಿಕಾರಿಗಳು ಭಾಗಿ:

ಬೆಳಗಾವಿಯ ಸೇನಾ ನೇಮಕಾತಿ ಕಚೇರಿಯಿಂದ ಈ ಸೇನ ನೇಮಕಾತಿ ರ‍್ಯಾಲಿ ಪ್ರಕ್ರಿಯೆ ನಡೆಯಲಿದ್ದು, ಸೇನಾ ಅಧಿಕಾರಿ ಎಆರ್‌ಓ ಮನೋಜ್ ಸೇರಿದಂತೆ ಅನೇಕ ಅಧಿಕಾರಿಗಳು ಹಲವಾರು ದಿನಗಳಿಂದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಆವರಣದಲ್ಲಿದ್ದು, ಸೇನಾ ನೇಮಕಾತಿ ರ‍್ಯಾಲಿಯ ನಾನಾ ಪ್ರಕ್ರಿಯೆಗಳನ್ನು ನಡೆಸಿ ಸಿದ್ಧತೆ ಮಾಡಿದ್ದಾರೆ.

2017ರಲ್ಲಿ ನಡೆದಿತ್ತು:

ಮಹತ್ವದ ಸೇನಾ ಭರ್ತಿ ರ‍್ಯಾಲಿಯು ಈ ಹಿಂದೆ ರಾಯಚೂರು ಜಿಲ್ಲೆಯಲ್ಲಿ 2017ರಲ್ಲಿ 11 ದಿನಗಳ ಕಾಲ ನಡೆದಿತ್ತು. ಆ ವೇಳೆ ರಾಯಚೂರು ಜಿಲ್ಲೆಯ ಸಾರ್ವಜನಿಕರು ದವಸ ಧಾನ್ಯ ನೀಡಿ ಸಹಕರಿಸಿದ್ದು ನಮಗೆ ಈಗಲೂ ನೆನಪಿದೆ. ಅದಾದ ಬಳಿಕ ಇದೀಗ ಮತ್ತೆ ನಮ್ಮ ಜಿಲ್ಲೆಯಲ್ಲಿ ಸೇನಾ ನೇಮಕಾತಿ ರ‍್ಯಾಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಈ ರ‍್ಯಾಲಿಗೆ ಬರುವ ಅಭ್ಯರ್ಥಿಗಳಿಗೆ ಊಟ, ವಸತಿಗೆ ಸಹಾಯ ಮಾಡೋಣ. ಎಲ್ಲ ಕಾರ್ಯಗಳಿಗೆ ಸಹಕಾರ ನೀಡಿ ರ‍್ಯಾಲಿಯನ್ನು ಯಶಗೊಳಿಸೋಣ ಎನ್ನುತ್ತಾರೆ ಮಾಜಿ ಸೈನಿಕರಾದ ಚೆನ್ನಾರೆಡ್ಡಿ.

ರಾಯಚೂರಿನತ್ತ ಬರುತ್ತಿರುವ ಅಭ್ಯರ್ಥಿಗಳು:

ರಾಯಚೂರು ಸೇರಿದಂತೆ ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಿಂದ ಪ್ರಥಮ ಹಂತದಲ್ಲಿ ಆಯ್ಕೆಯಾದ ಅಂದಾಜು 15,000 ಅಭ್ಯರ್ಥಿಗಳು ಈ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುತ್ತಿದ್ದು, ಸೇನೆ ಸೇರಬೇಕು, ನಾಡಸೇವೆ ಮಾಡಬೇಕು ಎನ್ನುವ ಕನಸು ಹೊತ್ತ ಯುವ ಪಡೆಯು ರಾಯಚೂರ ಸಿಟಿಯತ್ತ ತಂಡೋಪತಂಡವಾಗಿ ಆಗಮಿಸುವ ದೃಶ್ಯಗಳು ಕಾಣಿಸುತ್ತಿವೆ.

ಟಿಕೇಟ್ ಪ್ರಯಾಣ ದರ ನಿಗದಿ:

ಆ.8ರಿಂದ ಆ.26ರವರೆಗೆ ವಿವಿಧ ಜಿಲ್ಲೆಗಳಿಂದ ಆಗಮಿಸುವ ಸೇನಾ ರ‍್ಯಾಲಿಯ ಅಭ್ಯರ್ಥಿಗಳಿಗೆ ಅನುಕೂಲವಾಗಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಹೆಚ್ಚುವರಿ ಸಾರಿಗೆ ಕಾರ್ಯಚರಣೆಗೆ ಕ್ರಮ ವಹಿಸಿದೆ. ಜೊತೆಗೆ ಟಿಕೆಟ್ ಪ್ರಯಾಣ ದರವನ್ನು ಸಹ ಸಾರಿಗೆ ಇಲಾಖೆಯು ನಿಗದಿಪಡಿಸಿದೆ. ವಾಲ್ಮೀಕಿ ಭವನ ರಾಜಮಾತಾ ದೇವಸ್ಥಾನ, ಬಂಜಾರ ಭವನ ಯರಗೇರಾ ರಸ್ತೆ, ಸಿದ್ರಾಂಪುರದ ಡಿಗ್ರಿ ಕಾಲೇಜ್ ನಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣಕ್ಕೆ ತೆರಳಲು ತಲಾ 20 ರೂ. ಟಿಕೇಟ್ ದರ ಹಾಗೂ ಗಾಂಧಿ ವೃತ್ತದ ಸಂತೋಷ ಹಬ್, ರೈಲ್ವೆ ನಿಲ್ದಾಣ ಮತ್ತು ರಾಯಚೂರ ಕೇಂದ್ರ ಬಸ್ ನಿಲ್ದಾಣದಿಂದ ಲಿಂಗಸೂರ ರಸ್ತೆಯಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ತೆರಳಲು ತಲಾ 15 ರೂ. ಟಿಕೇಟ್ ದರ ನಿಗದಿಪಡಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆಯಲ್ಲಿ ಎಲ್ಲ ವಿಭಾಗಗಳ ಸೇನಾ ನೇಮಕಾತಿ ರ‍್ಯಾಲಿಯನ್ನು ನಡೆಸಲಾಗುತ್ತದೆ. ಈ ಸೇನಾ ಭರ್ತಿಯು ರಾಯಚೂರು ಜಿಲ್ಲೆಯಲ್ಲಿ ನಡೆಯುತ್ತಿರುವುದು ವಿಶೇಷ. ಈ ರ‍್ಯಾಲಿಯಲ್ಲಿ ಬೇರೆ ಬೇರೆ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿಯಾಗಲಿದ್ದು, ರ‍್ಯಾಲಿಯು ಶಿಸ್ತಿನಿಂದ ನಡೆದಲ್ಲಿ ನಮ್ಮ ಜಿಲ್ಲೆಗೆ ಹೆಸರು ಬರಲಿದೆ. ರಾಯಚೂರು ಜಿಲ್ಲೆಯ ಸಾರ್ವಜನಿಕರು ಈ ಸೇನಾ ನೇಮಕಾತಿ ರ‍್ಯಾಲಿಗೆ ಸಹಕರಿಸಬೇಕು. ಈ ಭಾಗದ ವಿದ್ಯಾರ್ಥಿ-ಯುವಜನರು ಈ ರ‍್ಯಾಲಿಯಿಂದಾಗಿ ಸೇನೆ ಸೇರುವ ಸ್ಫೂರ್ತಿ ಹೊಂದಬೇಕು.

- ಕೆ ನಿತೀಶ್, ಜಿಲ್ಲಾಧಿಕಾರಿಗಳು, ರಾಯಚೂರು ಜಿಲ್ಲೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X