ಸಿಂಧನೂರಿನಲ್ಲಿ ಎಟಿಎಂ ಕಳ್ಳತನ ಪ್ರಕರಣ : ಓರ್ವನ ಬಂಧನ

ರಾಯಚೂರು: ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದ ಎಟಿಎಂನಲ್ಲಿನ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸರು ಒರ್ವ ಆರೋಪಿಯನ್ನು ಬಂದಿಸಿದ್ದಾರೆ.
ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ರಾಯಚೂರು ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕಿನ ಎಟಿಎಂ ಒಳಗಡೆ ಹೋಗಿ ಕೀಲಿ ಹಾಕಿದ ಎಟಿಎಂ ಫೈಬರ್ ಡೋರ್ ಅನ್ನು ತೆಗೆದು ಎಟಿಎಂನಲ್ಲಿರುವ ಹಣ ಕಳ್ಳತನ ಮಾಡುವ ಪ್ರಯತ್ನ ನಡೆದಿತ್ತು.
ಘಟನೆಗೆ ಸಂಬಂಧಿಸಿದಂತೆ ಆರೋಪಿ ನಾಗರಾಜ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ತಂಡಕ್ಕೆ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.
Next Story





