Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಲು...

ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಬಂಜಾರ ಸಮಾಜದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Jun 2026 1:32 PM IST
share
ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಬಂಜಾರ ಸಮಾಜದ ಪ್ರತಿಭಟನೆ

ರಾಯಚೂರು, ಜೂ.16: ಹಾವೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಹಿರಿಯ ನಾಯಕ ರುದ್ರಪ್ಪ ಎಂ. ಲಮಾಣಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘ (ಎಐಬಿಎಸ್ಎಸ್) ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ, ಬಂಜಾರ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದರು. ಬಳಿಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಐಬಿಎಸ್ಎಸ್ ಜಿಲ್ಲಾ ಅಧ್ಯಕ್ಷ ಬಿ. ಅಮರೇಶ ರಾಠೋಡ್, ರಾಜ್ಯದಲ್ಲಿ 40 ಲಕ್ಷಕ್ಕೂ ಅಧಿಕ ಬಂಜಾರ ಸಮುದಾಯದ ಜನಸಂಖ್ಯೆ ಇದ್ದರೂ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಅವಕಾಶ ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಹಾವೇರಿ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ರುದ್ರಪ್ಪ ಲಮಾಣಿ ಅವರು ಪಕ್ಷ ಸಂಘಟನೆ, ಜನಸೇವೆ ಹಾಗೂ ಆಡಳಿತ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ಸಚಿವ ಸ್ಥಾನಕ್ಕೆ ಅರ್ಹರಾಗಿದ್ದಾರೆ ಎಂದು ಹೇಳಿದರು.

ರುದ್ರಪ್ಪ ಲಮಾಣಿ ಅವರು ಈ ಹಿಂದೆ ವಿಧಾನಸಭೆಯ ಉಪಸಭಾಪತಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು, ಬಡವರು, ರೈತರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ನಿರಂತರವಾಗಿ ಹೋರಾಟ ನಡೆಸಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಹಾಗೂ ಉಪಮುಖ್ಯಮಂತ್ರಿ ಹುದ್ದೆಯನ್ನೂ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದರು.

ಅಲ್ಲದೆ, ಕಲ್ಯಾಣ ಕರ್ನಾಟಕ ಭಾಗದ ತಾಂಡಗಳ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ಬಂಜಾರ ಸಮಾಜದ ಸಮರ್ಥ ನಾಯಕನಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಬಂಜಾರ ಸಮಾಜಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ ಮತ್ತು ಕಡೆಗಣಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದ್ದು, ಸರ್ಕಾರ ಸಮಾಜದ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಎನ್. ಶಿಪ್ಲಾ ಪವಾರ್, ಲಚ್ಚಪ್ಪ ನಾಯಕ ಪವಾರ್, ಗೋವಿಂದ ಪವಾರ್, ಮೌನೇಶ ಪವಾರ್, ದೇವೇಂದ್ರಪ್ಪ ರಾಠೋಡ್, ಮೋನಪ್ಪ ಪವಾರ್, ಹರೀಶ್ ಚಂದ್ರ ರಾಠೋಡ್, ದೇವಪ್ಪ ರಾಠೋಡ್, ಕೃಷ್ಣ ಜಾಧವ, ವೆಂಕಟೇಶ ಪವಾರ್, ಅಮರೇಶ ರೈತನಗರ, ಲಾಲಪ್ಪ ರಾಠೋಡ್ ಸೇರಿದಂತೆ ವಿವಿಧ ತಾಲೂಕುಗಳ ಮುಖಂಡರು ಹಾಗೂ ಬಂಜಾರ ಸಮಾಜದ ನೂರಾರು ಜನರು ಭಾಗವಹಿಸಿದ್ದರು.

Tags

Banjara communityprotestRudrappa Lamani
share
ವಾರ್ತಾಭಾರತಿ
ವಾರ್ತಾಭಾರತಿ
Next Story
X