Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಸಚಿವ ಬಿ. ನಾಗೇಂದ್ರ...

ರಾಯಚೂರು | ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ13 Aug 2026 11:40 PM IST
share
ರಾಯಚೂರು | ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಒತ್ತಾಯ

ರಾಯಚೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮುನ್ನವೇ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಖಂಡನೀಯ. ಕೂಡಲೇ ರಾಜೀನಾಮೆ ನೀಡದಿದ್ದರೆ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಸುಮಾರು 187 ಕೋಟಿ ರೂ. ಹಣದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರು ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಕರಣದ ತನಿಖೆ ಮುಂದುವರಿದಿರುವ ಸಂದರ್ಭದಲ್ಲಿ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಸರ್ಕಾರದ ನಿಲುವಿನ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದರು.

ಹಗರಣದ ಗಂಭೀರತೆಯನ್ನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಪ್ಪಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿ ಸಲ್ಲಿಕೆಯಾಗಿದ್ದು, ನಾಗೇಂದ್ರ ಅವರಿಗೆ ಸಂಪೂರ್ಣ ಕ್ಲೀನ್‌ಚಿಟ್ ದೊರೆತಿಲ್ಲ. ಇಂತಹ ಸಂದರ್ಭದಲ್ಲಿ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.

ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗೆ ಮೀಸಲಾದ ಹಣದ ಅವ್ಯವಹಾರದ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನೇ ಮತ್ತೆ ಸಚಿವರನ್ನಾಗಿ ಮಾಡಿರುವುದು ಆ ಸಮುದಾಯಕ್ಕೆ ಮಾಡಿದ ದ್ರೋಹವಾಗಿದೆ. ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಟ್ಟು, ಅಗತ್ಯವಿದ್ದರೆ ಅವರದೇ ಸಮುದಾಯದ ಮತ್ತೊಬ್ಬ ಅರ್ಹರನ್ನು ಸಚಿವರನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿದರು.

ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಹಾಗೂ ಜೆಡಿಎಸ್‌ ಜತೆಗೂಡಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು. ಅಗತ್ಯವಿದ್ದರೆ ಹೋರಾಟವನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುವುದು ಎಂದು ವೀರನಗೌಡ ಲೆಕ್ಕಿಹಾಳ ಎಚ್ಚರಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ನಾಗೇಂದ್ರ ಅವರ ರಾಜೀನಾಮೆ ಪಡೆಯುವ ಮೂಲಕ ಪರಿಶಿಷ್ಟ ಪಂಗಡದ ಜನರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಸಿದ್ದನಗೌಡ ನೆಲಹಾಳ್, ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ವೀರೇಶ್ ನಾಯಕ, ನರಸಿಂಹ ನಾಯಕ ಹಾಗೂ ಜಿಲ್ಲಾ ಮಾಧ್ಯಮ ಸಂಚಾಲಕ ವಿ.ಪಿ. ರೆಡ್ಡಿ ಉಪಸ್ಥಿತರಿದ್ದರು

Tags

RaichurBJPB.Nagendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X