Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕೇಂದ್ರ ಸರಕಾರದಿಂದ ಕಾರ್ಮಿಕರ ಹಕ್ಕುಗಳ...

ಕೇಂದ್ರ ಸರಕಾರದಿಂದ ಕಾರ್ಮಿಕರ ಹಕ್ಕುಗಳ ದಮನ : ಆರ್.ಬಸವರಾಜ

ವಾರ್ತಾಭಾರತಿವಾರ್ತಾಭಾರತಿ27 Oct 2025 12:16 PM IST
share
ಕೇಂದ್ರ ಸರಕಾರದಿಂದ ಕಾರ್ಮಿಕರ ಹಕ್ಕುಗಳ ದಮನ : ಆರ್.ಬಸವರಾಜ

ಮಾನ್ವಿ: ʼಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಮಿಕರ ಹಕ್ಕುಗಳನ್ನು ಕಸಿದು ಬೃಹತ್ ಕಂಪನಿಗಳಿಗೆ ಅನುಕೂಲ ಮಾಡಿ ಕೊಡಲು ಮುಂದಾಗಿರುವುದು ಸರಿಯಲ್ಲ. ಇಂತಹ ಧೋರಣೆಗಳ ವಿರುದ್ಧ ಕಾರ್ಮಿಕರ ಸಂಘಟಿತ ಹೋರಾಟ ಅಗತ್ಯʼ ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆ‌ರ್.ಎಸ್‌.ಬಸವರಾಜ ಹೇಳಿದರು.

ಶನಿವಾರ ಪಟ್ಟಣದ ನ್ಯೂ ಫ್ರೆಂಡ್ಸ್ -ಫಂಕ್ಷನ್‌ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ - ರಾಯಚೂರು ಜಿಲ್ಲಾ ಮಟ್ಟದ ಸೆಂಟರ್ -ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಸಂಘಟನೆಯ ಎಂಟನೇ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು

'ದೇಶದ ದುಡಿಯುವ ಕೈಗಳಿಗೆ "ಉದ್ಯೋಗ, ದುಡಿಮೆಗೆ ತಕ್ಕ ವೇತನ ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ. ಬಹುರಾಷ್ಟ್ರೀಯ ಕಂಪನಿಗಳ ಪರ ಕೆಲಸ ಮಾಡುತ್ತಿವೆ. ದುಡಿಯುವ ಸಮಯವನ್ನು 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಲಾಗುತ್ತಿದೆ. ಖಾಸಗೀಕರಣಗೊಳಿಸುವ ಮೂಲಕ ಹಾಗೂ ಬಿಸಿಯೂಟವನ್ನು ಇಸ್ಕಾನ್ ನೀಡುವ ಅನುದಾನ ಅಂಗನವಾಡಿ ಕಾರ್ಯಕರ್ತೆಯರ, ಬಿಸಿಯೂಟ ನೌಕರರ ಉದ್ಯೋಗ ಕಸಿಯುತ್ತಿದೆ.

ದೇಶದಲ್ಲಿನ ಸರ್ಕಾರಿ ಉದ್ದಿಮೆಗಳನ್ನು ಹಾಗೂ ಸರ್ಕಾರಿ ಒಡೆತನದ 14 ಲಕ್ಷಕ್ಕೂ ಹೆಚ್ಚು ಕಾರ್ಖನೆಗಳನ್ನು, ಸಂಸ್ಥೆಗಳನ್ನು ಲಾಕ್ ಔಟ್ ಮಾಡುವುದಕ್ಕೆ ಮುಂದಾಗುತ್ತಿವೆ' ಎಂದು ಅವರು ದೂರಿದರು.

ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ ಸಮ್ಮೇಳನ ಹಾಗೂ ವಿಶಾಖಪಟ್ಟಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸಮೇಳನ ಹಾಗೂ ರಾಯಚೂರು ಜಿಲ್ಲೆಯಲ್ಲಿ ಮುಂದಿನ ಮೂರು ವರ್ಷಗಳ ಕಾಲ ಕೈಗೊಳ್ಳಬೇಕಾದ ಕಾರ್ಯ ಯೋಜನೆ ಕುರಿತು ಚರ್ಚೆ ನಡೆಸಲಾಯಿತು.

ಸಿಐಟಿಯು ಜಿಲ್ಲಾ ಸಮಿತಿ ಅಧ್ಯಕ್ಷೆ ಎಚ್. ಪದ್ಮಾ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯು ತಾಲ್ಲೂಕು ಸಂಘಟನೆಯ ಅಧ್ಯಕ್ಷ ಎಚ್.ಶರ್ಪುದ್ದೀನ್ ಪೋತ್ನಾಳ, ಜಿಲ್ಲಾ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ. ಜಿ.ವೀರೇಶ್, ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಶಬೀರ್, ಜಿಲ್ಲಾ ಅಧ್ಯಕ್ಷ ರುದ್ರಪ್ಪ ನಾಯಕ, ಗ್ರಾಮ ಪಂಚಾಯಿತಿ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಮನಸಲಾಪುರ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ವರಲಕ್ಷ್ಮಿ, ಗಿರಿಯಪ್ಪ, ಹನೀಫ್, ರೇಣುಕಮ್ಮ ಮತ್ತಿತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X