Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಅರಕೇರಾ: ನಾಗಡದಿನ್ನಿ ಗ್ರಾ.ಪಂಗೆ ಸಿಇಒ...

ಅರಕೇರಾ: ನಾಗಡದಿನ್ನಿ ಗ್ರಾ.ಪಂಗೆ ಸಿಇಒ ದಿಢೀರ್ ಭೇಟಿ, ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ22 July 2026 3:31 PM IST
share
ಅರಕೇರಾ: ನಾಗಡದಿನ್ನಿ ಗ್ರಾ.ಪಂಗೆ ಸಿಇಒ ದಿಢೀರ್ ಭೇಟಿ, ಪರಿಶೀಲನೆ
ಗ್ರಾಮದ ಕುಡಿಯುವ ನೀರಿನ ಕೆರೆ ಪರಿಶೀಲಿಸಿದ ಸಿಇಒ ಶ್ರೀ ಈಶ್ವರ್ ಕಾಂದೂ

ರಾಯಚೂರು: ಜು. 22: ಅರಕೇರಾ ತಾಲ್ಲೂಕಿನ ನಾಗಡದಿನ್ನಿ ಗ್ರಾಮ ಪಂಚಾಯತಿಯ ತಿಪ್ಪಲದಿನ್ನಿ, ನಾಗಡದಿನ್ನಿ ಹಾಗೂ ಯರಮರಸ್ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೆರೆಗಳಿಗೆ ರಾಯಚೂರು ಜಿ.ಪಂ. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಈಶ್ವರ್ ಕಾಂದೂ ರವರು ಭೇಟಿ ನೀಡಿ ಪರಿಶೀಲನೆ ಮಾಡಿದರು.

ಮೊದಲಿಗೆ ತಿಪ್ಪಲದಿನ್ನಿ ಕೆರೆಗೆ ಭೇಟಿ ನೀಡಿ, ಬಂಗಾರಪ್ಪನ ಕೆರೆಯಿಂದ ತಿಪ್ಪಲದಿನ್ನಿ ಕೆರೆಗೆ ಪೈಪಲೈನ್ ಅಳವಡಿಸಲು ಸೂಚಿಸಿದರು. ನಂತರ ಕೆರೆಯ ವಿಸ್ತೀರ್ಣವನ್ನು ಹೆಚ್ಚಿಸಲು ತಿಳಿಸಿದರು.

ತದನಂತರ ನಾಗಡದಿನ್ನಿ ಕುಡಿಯುವ ನೀರಿನ ಕೆರೆಗೆ ಭೇಟಿ ನೀಡಿ, ಅರ್ಧ ಕಿ.ಮೀ. ನಷ್ಟು ಬಂಗಾರಪ್ಪನ ಕೆರೆಗೆ ಕಾಲುವೆ ನಿರ್ಮಾಣ ಮಾಡಲು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು. ಶುದ್ಧ ಕುಡಿಯುವ ನೀರಿನ ಘಟಕಗಳು (RO Plants) ನಿರಂತರವಾಗಿ ಮತ್ತು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದರು. ವಾಟರ್ಮ್ಯಾನ್ ಅವರಿಂದ ನೀರಿನ ವಿತರಣೆ ಸಮಯ, ದಿನಗಳು ಹಾಗೂ ಟ್ಯಾಂಕ್‌ಗಳಿಂದ ನೀರು ಪೂರೈಸುವ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು. ಗ್ರಾಮಸ್ಥರೊಂದಿಗೆ ಜಾನುವಾರುಗಳಿಗೂ ಸಮರ್ಪಕ ನೀರಿನ ಲಭ್ಯತೆ ಬಗ್ಗೆ ಖಚಿತಪಡಿಸಿಕೊಂಡರು. ಜಲಧಾರೆ, ಜಲ ಜೀವನ್ ಮಿಷನ್ ಕುಡಿಯುವ ನೀರಿನ ಯೋಜನೆಗಳ ಪ್ರಸ್ತುತ ವರದಿಯನ್ನು ಪಡೆದುಕೊಂಡರು.

ಯರಮರಸ್ ಕುಡಿಯುವ ನೀರಿನ ಕೆರೆಗೆ ಭೇಟಿ ನೀಡಿ, ಸಿಸಿ ರಸ್ತೆ, ವಿವಿಜಿ ರಾಮ್ ಜಿ ಯೋಜನೆ:

ಕೆರೆಗಳ ದುರಸ್ತಿ ಹಾಗೂ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಈ ಯೋಜನೆಯಡಿ ಸೇರಿಸಲು ಸಲಹೆ ನೀಡಿದರು.

ಗ್ರಾಮದಲ್ಲಿ ಉಪ ಗ್ರಂಥಾಲಯ, ಗ್ರಾಮ ಪಂಚಾಯತಿ ಹೊಸ ಕಟ್ಟಡ ನಿರ್ಮಾಣ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರುವ ಎಲ್ಲಾ ಕೆರೆಗಳಿಗೆ ಶುದ್ಧ ಸಂಸ್ಕರಣ ಘಟಕಗಳನ್ನು ನಿರ್ಮಿಸಿ, ಓ.ಹೆಚ್.ಟಿ. ಟ್ಯಾಂಕ್ ಮೂಲಕ ಮನೆಗಳಿಗೆ ನೀರು ಸರಬರಾಜು ಆಗುವಂತೆ ಕ್ರಮವಹಿಸಲು ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದರು.

ಈ ವೇಳೆ ಡಾ. ವಾಲ್ಮೀಕಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾ.ಪಂ. ಅರಕೇರಾ, ರಾಜೇಂದ್ರ ಕುಮಾರ್ ಜಿ. ಕಾರ್ಯನಿರ್ವಾಹಕ ಅಧಿಕಾರಿಗಳು, ತಾ.ಪಂ. ದೇವದುರ್ಗ, ಅಣ್ಣರಾವ್ ಸಹಾಯಕ ನಿರ್ದೇಶಕರು, ಹೀರಲಾಲ್ ಕಾರ್ಯಪಾಲಕ ಅಭಿಯಂತರರು, ಸೋಮನಾಥ್ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ನಾಗೇಂದ್ರ ಕಾರ್ಯದರ್ಶಿಗಳು, ವ್ಯಾಟರಮಾನ್ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X